Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸಿ : ಫಾದರ್ ಜೈಮೋನ್ ಜೋಸೆಫ್

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 10 : ಚಿಕ್ಕಂದಿನಿಂದಲೇ ಮಕ್ಕಳಿಗೆ ವೈಜ್ಞಾನಿಕ ಚಿಂತನೆ ಮೂಡಿಸಿದಾಗ ವಿಜ್ಞಾನಿಗಳಾಗಲು ನೆರವಾಗಲಿದೆ ಎಂದು ಡಾನ್‍ಬೋಸ್ಕೋ ಐಸಿಎಸ್‍ಇ. ಶಾಲೆಯ ಪ್ರಾಂಶುಪಾಲರಾದ ಫಾದರ್ ಜೈಮೋನ್ ಜೋಸೆಫ್ ಕರೆ ನೀಡಿದರು.

 

ಪ್ರತಿ ವರ್ಷದಂತೆ ಈ ಬಾರಿಯೂ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು. ಆಧುನಿಕ ಯುಗದಲ್ಲಿ ವಿಜ್ಞಾನ ಶರ ವೇಗದಲ್ಲಿ ಬೆಳೆಯುತ್ತಿರುವುದರಿಂದ ತಂತ್ರಜ್ಞಾನದ ಕುರಿತು ಮಕ್ಕಳಿಗೆ ಮಾಹಿತಿ ನೀಡಿ ಪ್ರೋತ್ಸಾಹಿಸುವ ಹೊಣೆಗಾರಿಕೆ ವಿಜ್ಞಾನ ಶಿಕ್ಷಕರುಗಳ ಮೇಲಿದೆ ಎಂದು ಹೇಳಿದರು.

 

ಹಿರಿಯ ವಿಜ್ಞಾನ ಶಿಕ್ಷಕ ಸಂಪತ್‍ಕುಮಾರ್ ಮಾತನಾಡಿ ಪ್ರಾಥಮಿಕ ಹಂತದಲ್ಲಿಯೇ ಮಕ್ಕಳಿಗೆ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವಂತೆ ತಿಳಿಸಿದರು. ಸಿಬ್ಬಂದಿಯ ಪ್ರತಿನಿಧಿ ಮಾನಸ ಎಲ್.ಜೆ, ಶಿಕ್ಷಕರುಗಳಾದ ಸಂದೀಪ್, ಜಿ.ಇಂಧೂದರ್ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು. 450 ವಿವಿಧ ವಿಜ್ಞಾನ ಮಾದರಿಗಳನ್ನು ವಿದ್ಯಾರ್ಥಿಗಳು ಸಿದ್ದಪಡಿಸಿರುವುದನ್ನು ಪೋಷಕರು ಹಾಗೂ ಡಾನ್‍ಬೋಸ್ಕೋ ಐಸಿಎಸ್‍ಇ. ಸಿಬ್ಬಂದಿಗಳು ಕುತೂಹಲದಿಂದ ವೀಕ್ಷಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now