Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಆರ್. ಡಿ. ತಿಪ್ಪೇಸ್ವಾಮಿ‌ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 11 : ನಗರದ ಜೆಸಿಆರ್ ಬಡಾವಣೆಯ ನಿವಾಸಿ, ನಿವೃತ್ತ ಸಹಾಯಕ ಕೃಷಿ ನಿರ್ದೇಶಕ ಹಾಗೂ ಹೇಮರಡ್ಡಿ ಮಲ್ಲಮ್ಮ ಸಮಾಜದ ಉಪಾಧ್ಯಕ್ಷರಾದ ಆರ್. ಡಿ. ತಿಪ್ಪೇಸ್ವಾಮಿ‌ (86 ವರ್ಷ) ಅನಾರೋಗ್ಯದಿಂದ ಸೋಮವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ನಗರದ ಜೆಸಿಆರ್ ಬಡಾವಣೆಯ ನಿವಾಸದಲ್ಲಿ ಇಂದು ಬೆಳಿಗ್ಗೆ 10 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ತಾಲ್ಲೂಕಿನ ಚಿಕ್ಕಪ್ಪನಹಳ್ಳಿಗೆ ಕೊಂಡೊಯ್ಯಲಾಗುವುದು. ಅಲ್ಲಿ ಮಧ್ಯಾಹ್ನ 1:00 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಇಡಲಾಗುವುದು. ನಂತರ ಅವರ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂತಾಪ : ಆರ್. ಡಿ. ತಿಪ್ಪೇಸ್ವಾಮಿ‌ ಅವರ ನಿಧನಕ್ಕೆ
ಹೇಮರಡ್ಡಿ ಮಲ್ಲಮ್ಮ ಸಮಾಜದ ಪದಾಧಿಕಾರಿಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಯವರು ಕಂಬನಿ ಮಿಡಿದಿದ್ದು ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now