Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ

---Advertisement---

ಬೆಂಗಳೂರು.ಆಗಸ್ಟ್.14: ರಾಜ್ಯದಲ್ಲಿ ನೈರುತ್ಯ ಮುಂಗಾರು ಮಾರುತಗಳು ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಳೆಯ ಸಂದರ್ಭದಲ್ಲಿ ಗಂಟೆಗೆ 30 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಎಚ್ಚರದಿಂದಿರಲು ಕೋರಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಹಾಸನ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

Join WhatsApp

Join Now

Join Telegram

Join Now