Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ದೊಡ್ಡಸಿದ್ದವ್ವನಹಳ್ಳಿ ಬಳಿ ಭೀಕರ ಸರಣಿ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು

---Advertisement---

 

ಸುದ್ದಿಒನ್, ಚಿತ್ರದುರ್ಗ.ಆಗಸ್ಟ್.14:  ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಸಮೀಪವಿರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ವೇಗವಾಗಿ ಬಂದ ಲಾರಿಯೊಂದು ಎರಡು ಕಾರುಗಳಿಗೆ ಹಿಂಬದಿಯಿಂದ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರುಗಳು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಬೆಂಗಳೂರು ಮೂಲದ ಚಾಲಕ ಗೋಪಿ (43) ಹಾಗೂ ಮತ್ತೊಂದು ಕಾರಿನ ಚಾಲಕ ಪವನ್ (23) ಎಂಬುವವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಇದೇ ಘಟನೆಯಲ್ಲಿ ಕಾರಿನಲ್ಲಿದ್ದ ಮಂಜುನಾಥ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ನೆರವಿನಿಂದ ಗಾಯಾಳುವನ್ನು ತಕ್ಷಣವೇ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತ ಎಸಗಿದ ಬಳಿಕ ಲಾರಿ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now