ಚಿತ್ರದುರ್ಗ, (ಫೆ.25) : ಉಕ್ರೇನ್ ಮೇಲೆ ರಷ್ಯಾ ಯುದ್ದ ಸಾರಿರುವ ಹಿನ್ನೆಲೆಯಲ್ಲಿ ಒಂದೆಡೆ ಅಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಮತ್ತು ಇಲ್ಲಿರುವ ಪೋಷಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಅದೇ ರೀತಿ ಚಿತ್ರದುರ್ಗ ನಗರದ ಪ್ರಶಾಂತ ನಗರದ ನಿವಾಸಿ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಅವರ ಪುತ್ರಿ ಸುನೇಹ ಎಂಬುವರು ಉಕ್ರೇನ್‍ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದು, ಉಕ್ರೇನ್‍ನಲ್ಲಿ ಸಿಲುಕಿರುವ ಸುನೇಹ ಅವರೊಂದಿಗೆ ವಿಡೀಯೋ ಕಾಲ್‍ನಲ್ಲಿ ಈಗಾಗಲೇ ಮಾತನಾಡಿದ್ದು, ಪ್ರದೇಶದ ಮಾಹಿತಿ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.

ನೋಡಲ್ ಅಧಿಕಾರಿ ನೇಮಕ: ಯುದ್ಧಪಿಡಿತ ಉಕ್ರೇನ್‍ನಲ್ಲಿ ಸಿಲುಕಿರುವವರನ್ನು ಕರೆತರುವ ನಿಟ್ಟಿನಲ್ಲಿ ಕಂದಾಯ ಇಲಾಖೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಾದ ಡಾ.ಮನೋಜ್ ರಾಜನವರನ್ನು ನೋಡಲ್ ಅಧಿಕಾರಿಗಳನ್ನಾಗಿ ಸರ್ಕಾರ ನೇಮಕ ಮಾಡಲಾಗಿದೆ. ಉಕ್ರೇನ್‍ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮತ್ತು ವಿದೇಶಾಂಗ ಸಚಿವಾಲಯದ ಜೊತೆ ನಿರಂತರ ಸಂಪರ್ಕದಲ್ಲಿದ್ದು, ತೊಂದರೆಯಲ್ಲಿರುವ ಕನ್ನಡಿಗರಿಗೆ ಅಗತ್ಯ ನೆರವು ನೀಡಲಿದ್ದಾರೆ.
ರಾಜ್ಯ ತುರ್ತು ಕಾರ್ಯಾಚರಣಾ ಕೇಂದ್ರದಲ್ಲಿ 24*7 ಕೆಲಸ ಮಾಡಲಿರುವ ಸಹಾಯವಾಣಿ 080-1070, 080-22340676 ಗೆ ಸಂಪರ್ಕಿಸಬಹುದಾಗಿದೆ ಎಂದರು.


