Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲಾ ಬಿಜೆಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಠದ ಸಂಚಾಲಕರಾಗಿ ರವಿಕುಮಾರ್ ಬ್ಯಾಲಹಾಳ್ ನೇಮಕ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಆ.14 : ಭಾರತೀಯ ಜನತಾ ಪಾರ್ಟಿಯ “ಅಸಂಘಟಿತ ಕಾರ್ಮಿಕರ ಪ್ರಕೋಷ್ಠದ ಜಿಲ್ಲಾ ಸಂಚಾಲಕರನ್ನಾಗಿ ರವಿಕುಮಾರ್.ಎನ್ ಬ್ಯಾಲಹಾಳ್‍ರವರನ್ನು ನೇಮಕ ಮಾಡಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರ ಸ್ವಾಮಿ ತಿಳಿಸಿದ್ದಾರೆ.

ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ದರಾಗಿ, ಜಿಲ್ಲಾ ಮಟ್ಟದಲ್ಲಿ ಸಂಘಟನೆ ಬಲಪಡಿಸುವುದು, ಪಕ್ಷದ ಕಾರ್ಯ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು, ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸುವುದು ಹಾಗೂ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ ಸಕ್ರಿಯವಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ. ತಮಗೆ ನೀಡಿರುವ ಜವಾಬ್ದಾರಿಯನ್ನು ನಿಷ್ಠೆ ಮತ್ತು ಬದ್ಧತೆಯಿಂದ ನಿರ್ವಹಿಸಿ ಪಕ್ಷದ ಬೆಳವಣಿಗೆಗೆ ಶ್ರಮಿಸುವಂತೆ ತಿಳಿಸಿ ತಮ್ಮ ಅನುಭವ, ಪರಿಶ್ರಮ ಹಾಗೂ ಸಂಘಟನಾ ಸಾಮಥ್ರ್ಯದಿಂದ ಪಕ್ಷಕ್ಕೆ ಮತ್ತಷ್ಟು ಬಲ ತುಂಬುವ ವಿಶ್ವಾಸ ಪಕ್ಷಕ್ಕಿದೆ ಎಂದು ನೇಮಕಾತಿ ಪತ್ರದಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now