ಬೆಂಗಳೂರು.ಆಗಸ್ಟ್.15: ದೇಶದೆಲ್ಲೆಡೆ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿರುವ ಸಂದರ್ಭದಲ್ಲಿ, ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದರು.
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಷ್ಟ್ರಧ್ವಜ ಹಾರಿಸಿ ಗೌರವ ಸಲ್ಲಿಸಿದರು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸ್ವಾತಂತ್ರ್ಯೋತ್ಸವದಂದು ಧ್ವಜಾರೋಹಣ ಮಾಡುತ್ತಿರುವುದು ಇದೇ ಮೊದಲ ಬಾರಿಯಾಗಿದೆ.
ಧ್ವಜಾರೋಹಣದ ಬಳಿಕ ಸಿಎಂ ಡಿ.ಕೆ. ಶಿವಕುಮಾರ್ ಅವರು ಸಶಸ್ತ್ರ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದರು. ಬಳಿಕ ವಿವಿಧ ಭದ್ರತಾ ಪಡೆಗಳು ಹಾಗೂ ತುಕಡಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಪಡೆಗಳ ಶಿಸ್ತುಬದ್ಧ ಪಥಸಂಚಲನ ಸಮಾರಂಭದ ಪ್ರಮುಖ ಆಕರ್ಷಣೆಯಾಗಿತ್ತು.
ನಾಡಿನ ಸಮಸ್ತ ಜನತೆಗೆ 80 ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು.
ಸ್ವಾತಂತ್ರ್ಯ ಎಂಬುದು ಅಸಂಖ್ಯಾತ ಹೋರಾಟಗಾರರ ತ್ಯಾಗ-ಬಲಿದಾನಗಳ ಮೇಲೆ ಕಟ್ಟಲಾದ ಪ್ರಜಾಪ್ರಭುತ್ವದ ನಿರಂತರ ಹೊಣೆಗಾರಿಕೆ. ವ್ಯಕ್ತಿಗಳಿಗಿಂತ ವ್ಯವಸ್ಥೆಯೂ, ಆಡಳಿತಕ್ಕಿಂತ ಸಾರ್ವಜನಿಕರ ಹಿತಾಸಕ್ತಿಯೂ ಆದ್ಯತೆಯಾಗಬೇಕು ಎಂಬ ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುತ್ತಾ, ಸಮಾಜದ ಕಟ್ಟಕಡೆಯ ಪ್ರಜೆಗೂ ಘನತೆ, ಸಮಾನತೆ ಮತ್ತು ಸಾಮಾಜಿಕ ನ್ಯಾಯ ದೊರಕಿಸಿಕೊಡುವುದೇ ನವಭಾರತಕ್ಕೆ ನಾವು ನೀಡಬಹುದಾದ ಮಹತ್ತರವಾದ ಕೊಡುಗೆ.
ವೈವಿಧ್ಯತೆಯೇ ನಮ್ಮ ದೇಶದ ಬಲ, ಸಾಮರಸ್ಯವೇ ನಮ್ಮ ಜೀವಾಳ. ಯಾವುದೇ ಭೇದ-ಭಾವಗಳಿಲ್ಲದೆ ಪ್ರತಿಯೊಬ್ಬ ನಾಗರಿಕನ ಹಕ್ಕುಗಳನ್ನು ಸಂರಕ್ಷಿಸಿ, ಸರ್ವರಿಗೂ ಉತ್ತಮ ಬದುಕು ಕಲ್ಪಿಸುವುದೇ ನಮ್ಮ ಸರ್ಕಾರದ ಪ್ರಮುಖ ಧ್ಯೇಯ. ನಾವೆಲ್ಲರೂ ಸೇರಿ ಸಮೃದ್ಧವಾದ, ಜಗತ್ತೇ ತಿರುಗಿ ನೋಡುವಂತಹ ಕರ್ನಾಟಕವನ್ನು ಕಟ್ಟಲು ಈ ಶುಭದಿನದಂದು ಸಂಕಲ್ಪ ತೊಡೋಣ.
ಸ್ವಾತಂತ್ರ್ಯ ಎಂಬುದು ಅಸಂಖ್ಯಾತ ಹೋರಾಟಗಾರರ ತ್ಯಾಗ-ಬಲಿದಾನಗಳ ಮೇಲೆ ಕಟ್ಟಲಾದ ಪ್ರಜಾಪ್ರಭುತ್ವದ ನಿರಂತರ ಹೊಣೆಗಾರಿಕೆ. ವ್ಯಕ್ತಿಗಳಿಗಿಂತ ವ್ಯವಸ್ಥೆಯೂ, ಆಡಳಿತಕ್ಕಿಂತ ಸಾರ್ವಜನಿಕರ ಹಿತಾಸಕ್ತಿಯೂ ಆದ್ಯತೆಯಾಗಬೇಕು ಎಂಬ ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುತ್ತಾ, ಸಮಾಜದ ಕಟ್ಟಕಡೆಯ ಪ್ರಜೆಗೂ ಘನತೆ, ಸಮಾನತೆ ಮತ್ತು ಸಾಮಾಜಿಕ ನ್ಯಾಯ… pic.twitter.com/191ehXS4wT
— DK Shivakumar (@DKShivakumar) August 15, 2026







