Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸ್ವಾತಂತ್ರ್ಯೋತ್ಸವದಂದು ರೈತರಿಗೆ ಸಿಎಂ ಗಿಫ್ಟ್: ರೈತ ಮಿತ್ರ ಯೋಜನೆ ಘೋಷಣೆ

---Advertisement---

ಬೆಂಗಳೂರು.ಆಗಸ್ಟ್.15: ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಿಹಿಸುದ್ದಿ ನೀಡಿದ್ದು, ರೈತ ಮಿತ್ರ ಎಂಬ ಹೊಸ ಕಾರ್ಯಕ್ರಮದ ಅಡಿಯಲ್ಲಿ ಸಣ್ಣ ರೈತರಿಗೆ ಕೃಷಿ ಯಂತ್ರಗಳನ್ನು ಬಾಡಿಗೆಗೆ ಪಡೆಯುವ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಇಂದು ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದರು.

ರೈತ ಮಿತ್ರ ಎಂಬ ಹೊಸ ಕಾರ್ಯಕ್ರಮದ ಅಡಿಯಲ್ಲಿ ಸಣ್ಣ ರೈತರಿಗೆ ಕೃಷಿ ಯಂತ್ರಗಳನ್ನು ಬಾಡಿಗೆಗೆ ಪಡೆಯುವ ಅವಕಾಶ ನೀಡಲಾಗುವುದು.  ಟ್ರ್ಯಾಕ್ಟರ್, ರೋಟವೇಟರ್, ಟಿಲ್ಲರ್ ಹಾಗೂ ಸೀಡ್ ಡ್ರಿಲ್ ಬಾಡಿಗೆಗೆ ಪಡೆಯಬಹುದು. ಮೂರು ಎಕರೆ ಅಥವಾ ಅದಕ್ಕಿಂತ ಕಡಿಮೆ ಭೂಮಿ ಹೊಂದಿರುವ ರೈತರಿಗೆ ಬಾಡಿಗೆ ಶುಲ್ಕದ ಮೇಲೆ 50% ಸಬ್ಸಿಡಿ ನೀಡಲಾಗುವುದು. ಇದರ ಮೂಲಕ ಕೃಷಿ ಯಂತ್ರಗಳು ಸಣ್ಣ ರೈತರಿಗೂ ಕೈಗೆಟುಕುವಂತೆ ಮಾಡಲಾಗುವುದು ಎಂದು ತಿಳಿಸಿದರು.

ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ರಾಜ್ಯದ ಕೈಗಾರಿಕಾ ಅಭಿವೃದ್ಧಿಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ದೊಡ್ಡಬಳ್ಳಾಪುರದಲ್ಲಿ ಅತ್ಯಾಧುನಿಕ ಉತ್ಪಾದನಾ CLUSTER – ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ದೊಡ್ಡಬಳ್ಳಾಪುರ ಪ್ರದೇಶದಲ್ಲಿ ಅತ್ಯಾಧುನಿಕ ಉತ್ಪಾದನಾ ಕ್ಲಸ್ಟರ್‌ (Advanced Manufacturing Cluster) ಅನ್ನು ಸ್ಥಾಪಿಸಲಾಗುವುದು. ಇದರಡಿ ಈಗಾಗಲೇ 20,000 ಕೋಟಿ ರೂ ಹೂಡಿಕೆಗೆ ಬದ್ಧತೆ ವ್ಯಕ್ತವಾಗಿದೆ. ಈ ಯೋಜನೆಯ ಮೂಲಕ ಸುಮಾರು ಒಂದು ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ.

ಡಿಜಿಟಲ್ ಕೈಗಾರಿಕಾ ಭೂಬ್ಯಾಂಕ್

GIS ಆಧಾರಿತ ಡಿಜಿಟಲ್ ಕೈಗಾರಿಕಾ ಭೂಬ್ಯಾಂಕ್ ಮೂಲಕ ಹೂಡಿಕೆದಾರರಿಗೆ ಪಾರದರ್ಶಕ ಮತ್ತು ತಕ್ಷಣದ ಮಾಹಿತಿ ನೀಡುತ್ತೇವೆ. ಉತ್ಪಾದನಾ Cluster, ಜವಳಿ, ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರಗಳಿಗೆ ಉತ್ತೇಜನ ನೀಡಲಾಗುವುದು ಎಂದು ಹೇಳಿದರು.

Join WhatsApp

Join Now

Join Telegram

Join Now