Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕದಲ್ಲಿ 72,000 ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ : ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

---Advertisement---

ಬೆಂಗಳೂರು. ಆಗಸ್ಟ್.15: ಉದ್ಯೋಗಾಕಾಂಕ್ಷಿಗಳಿಗೆ ನೆರವಾಗಲು 72,000 ಸರ್ಕಾರಿ ಹುದ್ದೆಗಳ ಭರ್ತಿಗೆ 6 ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

80ನೇ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ, ನಾಡಿನ ಜನತೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, ಖಾಸಗಿ ಉದ್ಯೋಗಕ್ಕಾಗಿ “ಯುವ ಉದ್ಯೋಗ ಸೇತು” ಹಾಗೂ ಹಿಂದುಳಿದ 10 ಜಿಲ್ಲೆಗಳಲ್ಲಿ ಹೊಸ ಉದ್ಯೋಗಗಳಿಗೆ ಮಾಸಿಕ ₹2,500 ಪ್ರೋತ್ಸಾಹಧನ ನೀಡುವ “ಉದ್ಯೋಗ ನಿಧಿ” ಘೋಷಿಸಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ 6ನೇ ತರಗತಿಯಿಂದಲೇ AI ಶಿಕ್ಷಣ, ಬೆಂಗಳೂರಿನಲ್ಲಿ ದೇಶದ ಮೊದಲ ಸರ್ಕಾರಿ AI ವಿಶ್ವವಿದ್ಯಾಲಯ, ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಶೇ.7.5 ವಿಶೇಷ ಮೀಸಲಾತಿ ಹಾಗೂ 10,000 ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ನಾಡಿನ 7.5 ಕೋಟಿ ಕನ್ನಡಿಗರು ಹಾಗೂ ಸಮಸ್ತ ಭಾರತೀಯರಿಗೆ 80ನೇ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳು. ಭಾರತವನ್ನು ಒಂದು ಭವ್ಯ ದೇಗುಲಕ್ಕೆ ಹೋಲಿಸಿದರೆ ರಾಜ್ಯಗಳು ಅದರ ಭದ್ರ ಬುನಾದಿಯ ಕಂಬಗಳಿದ್ದಂತೆ. ಒಕ್ಕೂಟ ತತ್ವವನ್ನು ಮತ್ತಷ್ಟು ಗಟ್ಟಿಗೊಳಿಸೋಣ. ಸ್ವಾತಂತ್ರ್ಯ ಹೋರಾಟಗಾರರು, ಗಡಿ ಕಾಯುವ ವೀರ ಸೈನಿಕರ ತ್ಯಾಗವನ್ನು ಸ್ಮರಿಸುತ್ತಾ, ಕಾಯಕ, ಸಮಾನತೆ ಮತ್ತು ದಾಸೋಹ ತತ್ವಗಳಡಿ ಸರ್ವರನ್ನೂ ಒಳಗೊಂಡ ಆಡಳಿತ ನೀಡುವ ಸಂಕಲ್ಪ ನಮ್ಮ ಸರ್ಕಾರದ್ದು. ಪಂಡಿತ್‌ ಜವಾಹರಲಾಲ್‌ ನೆಹರೂ ಅವರ ‘ನವ ಭಾರತ’ ಕಲ್ಪನೆಯಂತೆ “ಯುವ ಕರ್ನಾಟಕ – ನವ ಭಾರತ” ಧ್ಯೇಯದೊಂದಿಗೆ, 2047ರ ವೇಳೆಗೆ ಕರ್ನಾಟಕದ ಆರ್ಥಿಕತೆಯನ್ನು ₹320 ಲಕ್ಷ ಕೋಟಿಗೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ. ಆಡಳಿತವನ್ನು ಜನರ ಮನೆಬಾಗಿಲಿಗೆ ತರಲು ‘ಪ್ರಜಾಸೇವೆ ಇಲಾಖೆ’ ಸ್ಥಾಪಿಸಿ, ಸಚಿವರು ಮತ್ತು ಶಾಸಕರಿಂದ ನಿರಂತರ ಪ್ರಜಾಸಂಪರ್ಕ ಸಭೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ಭದ್ರತೆ ನೀಡುತ್ತಿರುವ ಪಂಚ ಗ್ಯಾರಂಟಿಗಳ ಜೊತೆಗೆ, ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು 6ನೇ ಗ್ಯಾರಂಟಿಯಾಗಿ ‘ಭೂ-ಗ್ಯಾರಂಟಿ’ ಜಾರಿಗೆ ತರಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ₹77,000 ಕೋಟಿಗೂ ಅಧಿಕ ಮೊತ್ತ ನೇರ ವರ್ಗಾವಣೆಯಾಗಿದ್ದು, NFHS-6 ವರದಿಯಂತೆ ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ ಶೇ.44 ರಿಂದ ಶೇ.14 ಕ್ಕೆ ಇಳಿಕೆಯಾಗಿದೆ. ಶಕ್ತಿ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳು ಕೋಟ್ಯಂತರ ಜನರಿಗೆ ಆಸರೆಯಾಗಿವೆ. ಇದು ಕರ್ನಾಟಕ ಮಾದರಿ ಎಂದೇ ಜನಪ್ರಿಯವಾಗಿದೆ ಹಾಗೂ ಇಡೀ ರಾಷ್ಟ್ರ ಅನುಸರಿಸುತ್ತಿದೆ. ತಾಯಂದಿರ ಮರಣ ಪ್ರಮಾಣದಲ್ಲಿ ಶೇ.19 ರಷ್ಟು ಇಳಿಕೆ ಕಂಡಿದೆ ಎಂದರು.

ರೈತರಿಗಾಗಿ ಡ್ರೋನ್ ಆಧಾರಿತ ಬೆಳೆ ಸಮೀಕ್ಷೆಯ “ಮುಖ್ಯಮಂತ್ರಿ ರೈತ ಚೈತನ್ಯ” ಮತ್ತು ಸಣ್ಣ ರೈತರಿಗೆ ಯಂತ್ರೋಪಕರಣಗಳ ಬಾಡಿಗೆ ಮೇಲೆ 50% ಸಬ್ಸಿಡಿ ನೀಡುವ “ರೈತ ಮಿತ್ರ” ಯೋಜನೆ ಜಾರಿಗೊಳಿಸಲಾಗುವುದು. ಎತ್ತಿನಹೊಳೆ ಯೋಜನೆಯ ಮೊದಲ ಹಂತ ಹಾಗೂ ₹16,000 ಕೋಟಿ ಮೊತ್ತದ ಜಲಸಂಪನ್ಮೂಲ ಯೋಜನೆಗಳು ಚಾಲನೆಯಲ್ಲಿವೆ. ಎಸ್‌ಸಿ/ಎಸ್‌ಟಿ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣಕ್ಕೆ ಬೃಹತ್ ಅನುದಾನ ಮೀಸಲಿಡಲಾಗಿದೆ.

ಬೆಂಗಳೂರಿಗೆ ₹1.50 ಲಕ್ಷ ಕೋಟಿ ಮೂಲಸೌಕರ್ಯ, ₹26,000 ಕೋಟಿ ವೆಚ್ಚದ 117 ಕಿ.ಮೀ ‘ಬೆಂಗಳೂರು ಬ್ಯುಸಿನೆಸ್ ಕಾರಿಡಾರ್’, 5 ಹೊಸ ಪೊಲೀಸ್ ಕಮಿಷನರೇಟ್‌ಗಳು, ಆ್ಯಂಟಿ ರೌಡಿ ಸ್ಕ್ವಾಡ್, ಲಾಲ್‌ಬಾಗ್ ಮಾದರಿಯ 5 ಬೃಹತ್ ಟ್ರೀ ಪಾರ್ಕ್‌ಗಳು ಹಾಗೂ 7 ಕೆರೆಗಳ ಪುನಃಶ್ಚೇತನ ಕೈಗೆತ್ತಿಕೊಳ್ಳಲಾಗಿದೆ. ದೊಡ್ಡಬಳ್ಳಾಪುರದಲ್ಲಿ ₹20,000 ಕೋಟಿ ವೆಚ್ಚದ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್, ‘ಬಿಯಾಂಡ್ ಬೆಂಗಳೂರು’ ಅಡಿ 5 ಜಿಲ್ಲೆಗಳಲ್ಲಿ ಗ್ಲೋಬಲ್ ಟೆಕ್ ಸೆಂಟರ್‌ಗಳು ಮತ್ತು ‘ಕರ್ನಾಟಕ ರಾಜ್ಯ ಮೋಟಾರು ವಾಹನ ವಿಮಾ ಸಂಸ್ಥೆ’ ಸ್ಥಾಪಿಸಲಾಗುತ್ತಿದೆ. ರಾಜ್ಯದ ಪ್ರತಿಯೊಂದು ಪಟ್ಟಣ ಹಾಗೂ ನಗರದ ಪ್ರಗತಿಗೆ ರಿಂಗ್‌ ರೋಡ್ ಹಾಗೂ ಮೊಬಿಲಿಟಿ ಗ್ರಿಡ್‌ ಗಳನ್ನು ನಗರ ಯೋಜನೆಯ ಮೂಲಕ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

Join WhatsApp

Join Now

Join Telegram

Join Now