Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ರೋಟರಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 15 : ನಗರದ ರೋಟರಿ ವಿದ್ಯಾಲಯದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ರೋಟರಿ ಕ್ಲಬ್ ಆಫ್ ಚಿತ್ರದುರ್ಗದ ಅಧ್ಯಕ್ಷರಾದ ರೊ. ಯೋಗೀಶ್ ಸಹ್ಯಾದ್ರಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯವೆಂದರೆ ಕೇವಲ ಹಕ್ಕುಗಳ ಅನುಭವವಲ್ಲ, ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಸಹ ಹೌದು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸದಾ ಸ್ಮರಿಸಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಶಿಸ್ತು, ಪ್ರಾಮಾಣಿಕತೆ ಮತ್ತು ದೇಶಪ್ರೇಮವನ್ನು ಬೆಳೆಸಿಕೊಂಡು ರಾಷ್ಟ್ರದ ಭವಿಷ್ಯದ ಉತ್ತಮ ನಾಗರಿಕರಾಗಬೇಕು ಎಂದು ತಿಳಿಸಿದರು.

ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿರುವುದು ಅನೇಕ ಮಹನೀಯರ ತ್ಯಾಗದ ಫಲ. ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಅಸಂಖ್ಯಾತ ಹೋರಾಟಗಾರರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನು ಅರ್ಪಿಸಿದ್ದಾರೆ. ಅವರ ತ್ಯಾಗವನ್ನು ಸ್ಮರಿಸುವುದರ ಜೊತೆಗೆ, ಅವರು ಕಂಡ ಕನಸಿನ ಭಾರತವನ್ನು ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಯೋಗೀಶ್ ಸಹ್ಯಾದ್ರಿ ಅವರು ತಿಳಿಸಿದರು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸದಾ ಸ್ಮರಿಸಿ, ಏಕತೆ, ಶಿಸ್ತು, ಶಿಕ್ಷಣ ಮತ್ತು ಸೇವೆಯ ಮೂಲಕ ಶ್ರೇಷ್ಠ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಅವರು ಕರೆ ನೀಡಿದರು. ಎಲ್ಲಾ ವಿದ್ಯಾರ್ಥಿಗಳು ದೇಶದ ಹೆಮ್ಮೆ ಮತ್ತು ಭವಿಷ್ಯದ ಆಶಾಕಿರಣಗಳಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೊ. PHF. PDG. ಮಧುಪ್ರಸಾದ್ ಕೆ. ಅವರು ವಹಿಸಿದ್ದರು. ಅವರು ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳುವುದು ಇಂದಿನ ಯುವಜನತೆಯ ಕರ್ತವ್ಯವಾಗಿದೆ. ಸ್ವಾತಂತ್ರ್ಯ ನಮಗೆ ಹಕ್ಕುಗಳನ್ನು ನೀಡಿದಂತೆ ಕರ್ತವ್ಯಗಳನ್ನೂ ನೀಡಿದೆ. ಸಂವಿಧಾನವನ್ನು ಗೌರವಿಸುವುದು, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು, ಪರಿಸರವನ್ನು ಸಂರಕ್ಷಿಸುವುದು, ಸಾರ್ವಜನಿಕ ಆಸ್ತಿಯನ್ನು ಕಾಪಾಡುವುದು ಹಾಗೂ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ರೋಟರಿ ಟ್ರಸ್ಟ್ ನ ಖಜಾಂಚಿ ರೊ. ಸತ್ಯನಾರಾಯಣಾಚಾರ್, ರೊ. ಜಿ.ಎ. ವಿಶ್ವನಾಥ್ ಬಾಬು, ರೋಟರಿ ಕ್ಲಬ್ ಆಫ್ ಚಿತ್ರದುರ್ಗದ ಸದಸ್ಯರು, ಹಾಗೂ ರೊ. ಶಂಕರಪ್ಪ, ಆಡಳಿತಾಧಿಕಾರಿ, ರೋಟರಿ ವಿದ್ಯಾಲಯ, ಉಪಸ್ಥಿತರಿದ್ದು , ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ, ದೇಶದ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತಮ್ಮದೇ ಆದ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ ಮಾಡಲು ಅವಕಾಶ ನೀಡಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ದೇಶಭಕ್ತಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ರಾಷ್ಟ್ರದ ಅಭಿವೃದ್ಧಿಯ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳ ಭಾಷಣಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು.

ವಿದ್ಯಾರ್ಥಿಗಳ ಪೋಷಕರು ಕೂಡ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಉಮಾದೇವಿ ಹೆಚ್.ಎಂ. ಅವರು ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಶಿಕ್ಷಕಿ ಜ್ಯೋತಿ ಆರ್. ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಹಿರಿಯ ಶಿಕ್ಷಕಿ ಗೌರಮ್ಮ ಅವರು ವಂದನಾರ್ಪಣೆ ಸಲ್ಲಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ರೋಟರಿ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕೃತಜ್ಞತೆ ಸಲ್ಲಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now