Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ರಾಮೀಣ ಬದುಕಿನ ಅನುಭವಕ್ಕೆ ವಿದ್ಯಾರ್ಥಿಗಳಿಗೆ ‘ಗ್ರಾಮ ವಾಸ್ತವ್ಯ’ : ಸಚಿವ ಡಾ.ಎಂ.ಬಿ.ಪಾಟೀಲ್

---Advertisement---

ವಿಜಯಪುರ, ಆಗಸ್ಟ್ 15:: ಸತತ ಮೂರು ವರ್ಷಗಳ ಕಾಲ ದೇಶಾದ್ಯಂತ ಸಂಚಲನ ಸೃಷ್ಠಿಸಿದ ಪಂಚ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರಕ್ಕೆ ವಿಶೇಷ ಗೌರವ ತರುವುದರ ಜೊತೆಗೆ ಇಡೀ ದೇಶಕ್ಕೆ ಮಾದರಿಯಾಗಿ ನಿಂತಿವೆ. ನಮ್ಮ ಸರ್ಕಾರ ಜಾರಿಗೊಳಿಸಿದ ಈ ಯೋಜನೆಗಳನ್ನು ಇಂದಿನ ಮುಖ್ಯಮಂತ್ರಿ ಅವರು ಮುಂದುವರಿಸುವುದರ ಜೊತೆಗೆ ಅಧಿಕಾರ ವಹಿಸಿಕೊಂಡ 100 ದಿನಗಳಲ್ಲಿ 45 ವಿಶೇಷ ಕಾರ್ಯಕ್ರಮಗಳನ್ನು ಕಾರ್ಯಗತಗೊಳಿಸಲು ನಿರ್ಧರಿಸಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ. ಪಾಟೀಲ ಅವರು ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸ್ವಾತಂತ್ರ‍್ಯೋತ್ಸವ ದಿನಾಚರಣೆ  ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಆಕರ್ಷಕ ಪಥಸಂಚಲನ ವೀಕ್ಷಿಸಿ, ಸಾರ್ವಜನಿಕರನ್ನುದ್ದೇಶಿಸಿ ಅವರು ಮಾತನಾಡಿದರು.

ಗ್ರಾಮಾನುಭವ: ವಿದ್ಯಾರ್ಥಿಗಳಿಗೆ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಕಲೆ ಮತ್ತು ಸಂಸ್ಕೃತಿ ಸೇರಿದಂತೆ ಗ್ರಾಮೀಣ ಬದುಕಿನ ಅನುಭವಕ್ಕಾಗಿ ಗ್ರಾಮ ವಾಸ್ತವ.

ರೈತ ಮಿತ್ರ, ಬಡವರ ಬಂಧು: ಒಂದು ಹೆಕ್ಟೇರ್ ವರೆಗಿನ ಜಮೀನು ಹೊಂದಿರುವ ರೈತರಿಗೆ ಕೃಷಿ ಯಂತ್ರೋಪಕರಣಗಳ ಬಾಡಿಗೆ ಮೊತ್ತದಲ್ಲಿ ಶೇ.50 ರಷ್ಟು ಸಬ್ಸಿಡಿ ನೀಡಲಾಗುವುದು ನಮ್ಮ ಸರ್ಕಾರ ನಿರ್ಧರಿಸಿದೆ ಎಂದರು.

ಯುವ ಯುಗ:ಯುವ ಕರ್ನಾಟಕ ನಿರ್ಮಾಣಕ್ಕೆ ಚಾಲನೆ ನೀಡುವುದು. ಭಾರತ್ ಜೋಡೋ ಯುವಕ ಸಂಘ ಮಿಷನ್, ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ 6000, ನಗರ ಪ್ರದೇಶಗಳಲ್ಲಿ 4000 ಸಂಘಗಳ ಸ್ಥಾಪಿಸುವುದು ಮತ್ತು ವಾರ್ಷಿಕ ತಲಾ 10 ಲಕ್ಷ ರೂ. ಅನುದಾನದಂತೆ ವಾರ್ಷಿಕ 1 ಸಾವಿರ ಕೋಟಿ ವೆಚ್ಚದಲ್ಲಿ ಯುವಕರಲ್ಲಿ ಆರೋಗ್ಯ, ಕೌಶಲ್ಯ, ಸಾಮಾಜಿಕ ಸಾಮರಸ್ಯ ಉತ್ತೇಜನ ನೀಡಲಾಗುವುದು ಎಂದರು.

ಯುವ ಉದ್ಯೋಗ ಸೇತು: ಖಾಸಗಿ ಉದ್ಯೋಗ ವಿನಿಮಯ ವ್ಯವಸ್ಥೆ ಕಲ್ಪಿಸುವುದು. ಸರ್ಕಾರಿ ಆಸ್ಪತ್ರೆಗಳ ದತ್ತು ಯೋಜನೆ ಮತ್ತು ರಾಜ್ಯದ ಮೆಡಿಕಲ್ ಕಾಲೇಜುಗಳಿಗೆ ಅವಶ್ಯ ಮಾನವ ಸಂಪನ್ಮೂಲ ಒದಗಿಸಲು ಉತ್ತೇಜಿಸಲಾಗುವುದು. ನಶೆ ಮುಕ್ತ ಕರ್ನಾಟಕದ ಭಾಗವಾಗಿ ಯುವಕರಲ್ಲಿ ಜಾಗೃತಿ ಮೂಡಿಸಿ ತ್ಯಜಿಸುವಿಕೆ, ತಿಳಿಸು, ಬೆಂಬಲ ಮತ್ತು ಸಬಲೀಕರಣ ಉಪಕ್ರಮಗಳ ಮೂಲಕ ನಶೆ ಪದಾರ್ಥಗಳ ವ್ಯಸನ ಮುಕ್ತಗೊಳಿಸಲು ಕ್ರಮ ಕೈಗೊಳ್ಳಲು ಸರಕಾರ ನಿರ್ಧರಿಸಿದೆ ಎಂದರು.

ಪ್ರಜಾಸೇವೆ ಇಲಾಖೆ: ಸಾರ್ವಜನಿಕರ ಕುಂದುಕೊರತೆ ಆಲಿಸಲು ಪ್ರತ್ಯೇಕ ಪ್ರಜಾ ಸೇವೆ ಇಲಾಖೆ ಸ್ಥಾಪಿಸಿ, ಆಧುನಿಕ ತಂತ್ರಜ್ಞಾನದ ಮೂಲಕ ತ್ವರಿತ ಸ್ಪಂದನೆಗೆ ಕ್ರಮ ಕೈಗೊಳ್ಳುವುದು. ಭೂ ಗ್ಯಾರೆಂಟಿಯಡಿ  ರಾಜ್ಯದ ಎಲ್ಲಾ ಕೃಷಿಯೇತರ ಸ್ವತ್ತುಗಳಿಗೆ ಇ-ಖಾತೆ ಸೇರಿದಂತೆ ಸಮಗ್ರ ಡಿಜಿಟಲ್ ಆರ್.ಟಿ.ಸಿ ಗಳು ಮತ್ತು ಅರ್ಹ ಬಿ-ಖಾತೆಗಳನ್ನು ಎ- ಖಾತೆಗಳಾಗಿ ಪರಿರ್ವತಿಸಿ, ಭೂಮಾಲೀಕತ್ವದ ಹಕ್ಕುಗಳನ್ನು ಖಾತ್ರಿಪಡಿಸಿ ವ್ಯಾಜ್ಯಗಳನ್ನು ಕಡಿಮೆ ಮಾಡಲಾಗುವುದು ಎಂದರು.

ಕರ್ನಾಟಕ ಮೊಬಿಲಿಟಿ ಗ್ರೀಡ್ ಮಿಷನ್: ರಾಜ್ಯದ ಎಲ್ಲಾ ನಗರ ಮತ್ತು ಪಟ್ಟಣಗಳ ವ್ಯಾಪ್ತಿಯಲ್ಲಿ ರಿಂಗ್ ರಸ್ತೆ, ಬೈಪಾಸ್ ಸೇರಿದಂತೆ ಸಂಚಾರ ದಟ್ಟಣೆ ಕಡಿಮೆ ಮಾಡುವ ಉಪಕ್ರಮಗಳನ್ನು ಕೈಗೊಳ್ಳಲು ಅಭಿವೃದ್ದಿ ವಲಯಗಳ ಅಧಿಸೂಚನೆ ಮಾಡಲಾಗುವುದು. ಇದರಿಂದ ನಗರಗಳ ಯೋಜಿತ ಬೆಳವಣಿಗೆಗೆ ಸಹಕಾರಿ ಆಗಲಿದೆ ಎಂದರು.

ತೇಗದ ಸಿರಿ: ವಾಣಿಜ್ಯ ಮೌಲ್ಯವುಳ್ಳ ತೇಗ ಸೇರಿದಂತೆ ಇತರೆ ಮರಗಳನ್ನು ಜಮೀನಿನ ಮಾಲೀಕರು, ಅವರ ಜಮೀನಿನ ಪಕ್ಕದಲ್ಲಿರುವ ಸರ್ಕಾರಿ ಜಾಗಗಳಲ್ಲಿ ಬೆಳೆಸಲು ಪ್ರೋತ್ಸಾಹ. ಈ ಮರಗಳ ಮಾರಾಟದಿಂದ ಬರುವ ರಾಜಸ್ವದ ಶೇ. 70 ರಷ್ಟು ಭೂ ಮಾಲೀಕರಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

Join WhatsApp

Join Now

Join Telegram

Join Now