Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಳಕಾಲ್ಮುರು ಆಂಧ್ರಕ್ಕೆ ಸೇರಿಸುವ ಹೇಳಿಕೆ ಖಂಡಿಸಿ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 18 : ಮೊಳಕಾಲ್ಮುರು ತಾಲ್ಲೂಕನ್ನು ಆಂಧ್ರ ಪ್ರದೇಶಕ್ಕೆ ಸೇರಿಸಿ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಎನ್.ವೈ.ಗೋಪಾಲಕೃಷ್ಣರವರು ಕೂಡಲೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಜಿಲ್ಲೆಯ ಜನರ ಕ್ಷಮೆ ಕೇಳುವಂತೆ ಯುವ ಕರ್ನಾಟಕ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಏಳು ಬಾರಿ ಶಾಸಕರಾಗಿರುವ ಎನ್.ವೈ.ಗೋಪಾಲಕೃಷ್ಣ ತಾವು ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿರುವುದನ್ನು ಮರೆತು ಮತದಾರರಿಗೆ ಅವಮಾನವಾಗುವಂತ ಹೇಳಿಕೆ ನೀಡಿ ಕನ್ನಡ ನಾಡು, ನುಡಿ, ನೆಲ, ಜಲಕ್ಕೆ ಅಗೌರವ ತೋರುತ್ತಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರು ಕೂಡಲೆ ರಾಜಿನಾಮೆ ಪಡೆಯಬೇಕು. ಇಲ್ಲವೇ ಶಾಸಕ ಸ್ಥಾನದಿಂದ ವಜಾಗೊಳಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದೆಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.
ಯುವ ಕರ್ನಾಟಕ ವೇದಿಕೆ ಜಿಲ್ಲಾಧ್ಯಕ್ಷ ರವಿಕುಮಾರ್‍ನಾಯ್ಕ, ಕಾರ್ಯದರ್ಶಿ ಓಬಣ್ಣ ಎನ್, ಉಪಾಧ್ಯಕ್ಷ ನವೀನ್, ಕಾರ್ಯಾಧ್ಯಕ್ಷ ಎಚ್.ಮಣಿಕಂಠ, ರೈತ ಸಂಘದ ಅಧ್ಯಕ್ಷ ಸಿದ್ದೇಶ್, ಸಚಿನ್, ಪ್ರಕಾಶ್, ಮಂಜುನಾಥ ಎಂ.ಎಚ್, ಎಸ್.ನಾಗರಾಜ್, ರೇಣುಕೇಶ್, ಅಣ್ಣಪ್ಪ, ನಾಗಣ್ಣ ಜಾಲಿಕಟ್ಟೆ, ರಘುನಾಥ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now