Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೊಲ್ಕತ್ತಾ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ: ಮಗು ಸೇರಿ 9 ಮಂದಿ ಸಾವು; ಹಲವರ ಸ್ಥಿತಿ ಗಂಭೀರ

---Advertisement---

ಕೊಲ್ಕತ್ತಾ.ಆಗಸ್ಟ್.19: ಪಶ್ಚಿಮ ಬಂಗಾಳದ ಕೊಲ್ಕತ್ತಾದ ಮಿರ್ಜಾ ಗಾಲಿಬ್ ಸ್ಟ್ರೀಟ್‌ನಲ್ಲಿರುವ ಹೋಟೆಲ್‌ವೊಂದರಲ್ಲಿ ಬುಧವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮಗು ಸೇರಿದಂತೆ ಒಟ್ಟು 9 ಮಂದಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಮುಂಜಾನೆ ಸುಮಾರು 2 ಗಂಟೆ ವೇಳೆಗೆ ಹೋಟೆಲ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಹೊಗೆ ಹೋಟೆಲ್‌ನ ಕೊಠಡಿಗಳನ್ನು ಆವರಿಸಿದ್ದು, ಗಾಢ ನಿದ್ರೆಯಲ್ಲಿದ್ದ ಅತಿಥಿಗಳಲ್ಲಿ ಆತಂಕ ಮತ್ತು ಗೊಂದಲ ಸೃಷ್ಟಿಯಾಗಿದೆ.

ನಾಲ್ಕು ಅಗ್ನಿಶಾಮಕ ವಾಹನಗಳಿಂದ ಕಾರ್ಯಾಚರಣೆ

ಅಗ್ನಿ ಅವಘಡದ ಮಾಹಿತಿ ಲಭಿಸುತ್ತಿದ್ದಂತೆ ಅಗ್ನಿಶಾಮಕ ದಳದ ನಾಲ್ಕು ವಾಹನಗಳು ಸ್ಥಳಕ್ಕೆ ಧಾವಿಸಿವೆ. ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಬೆಂಕಿ ಮತ್ತು ದಟ್ಟ ಹೊಗೆಯ ನಡುವೆ ಸಿಲುಕಿದ್ದ ಹಲವು ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾರ್ಟ್ ಸರ್ಕ್ಯೂಟ್ ಶಂಕೆ

ಪ್ರಾಥಮಿಕ ತನಿಖೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ. ಈ ಕುರಿತು ಪೊಲೀಸರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ಅವಘಡದ ಬಳಿಕ ಹೋಟೆಲ್ ಸುತ್ತಮುತ್ತ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮತ್ತು ತನಿಖೆ ಮುಂದುವರಿದಿದೆ. ಬೆಂಕಿ ಕಾಣಿಸಿಕೊಂಡ ವೇಳೆ ಹೋಟೆಲ್‌ನಲ್ಲಿ ಒಟ್ಟು ಎಷ್ಟು ಮಂದಿ ಇದ್ದರು ಎಂಬ ಬಗ್ಗೆಯೂ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

 

Join WhatsApp

Join Now

Join Telegram

Join Now