Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ : ವಿ.ಬಿ.-ಜಿ ರಾಮ್-ಜಿ ಯೋಜನೆಯಡಿ ಜಾಬ್ ಕಾರ್ಡ್ ಮೇಳ: ಸಾರ್ವಜನಿಕರಿಗೆ ಜಿಲ್ಲಾ ಪಂಚಾಯತ್ ಆಹ್ವಾನ

---Advertisement---

ದಾವಣಗೆರೆ, ಆಗಸ್ಟ್.20 : ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವ ಹಾಗೂ ಅರ್ಹ ಕುಟುಂಬಗಳಿಗೆ ಜಾಬ್ ಕಾರ್ಡ್ ತಲುಪಿಸುವ ಉದ್ದೇಶದಿಂದ ದಾವಣಗೆರೆ ಜಿಲ್ಲಾ ಪಂಚಾಯತ್ ವತಿಯಿಂದ ‘ವಿ.ಬಿ.-ಜಿ ರಾಮ್-ಜಿ’ ಯೋಜನೆಯಡಿ ಜಾಬ್ ಕಾರ್ಡ್ ಮೇಳ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಗ್ರಾಮೀಣ ಪ್ರದೇಶದ ಪ್ರತಿಯೊಂದು ಅರ್ಹ ಕುಟುಂಬವು ಯೋಜನೆಯ ಸೌಲಭ್ಯವನ್ನು ಪಡೆಯಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಬ್ ಕಾರ್ಡ್ ನೋಂದಣಿ, ಹೊಸ ಜಾಬ್ ಕಾರ್ಡ್ ವಿತರಣೆ ಹಾಗೂ ಅಗತ್ಯ ಜಾಬ್ ಕಾರ್ಡ್ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ.

ಜಾಬ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಯೋಜನೆಯಡಿ ಲಭ್ಯವಿರುವ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡುವುದು, ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸುವುದು, ಕೂಲಿ ಕೆಲಸ ಪಡೆಯುವುದು ಹಾಗೂ ಗ್ರಾಮೀಣ ಅಭಿವೃದ್ಧಿ ಕಾಮಗಾರಿಗಳಲ್ಲಿ ಭಾಗವಹಿಸುವ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.

ಜಲ ಸಂರಕ್ಷಣೆ, ಮಳೆನೀರು ಕೊಯ್ಲು, ಕೃಷಿ, ತೋಟಗಾರಿಕೆ, ಗ್ರಾಮೀಣ ಮೂಲಸೌಕರ್ಯ ಹಾಗೂ ಸಾರ್ವಜನಿಕ ಆಸ್ತಿಗಳ ಅಭಿವೃದ್ಧಿ ಸೇರಿದಂತೆ ವಿವಿಧ 318 ಬಗೆಯ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಉತ್ತೇಜನ ನೀಡಲಾಗುತ್ತಿದೆ.

ಅರ್ಹ ಗ್ರಾಮೀಣ ಕುಟುಂಬಗಳು ಈ ಜಾಬ್ ಕಾರ್ಡ್ ಮೇಳದ ಸದುಪಯೋಗ ಪಡೆದುಕೊಂಡು ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ಯಾವುದೇ ಅರ್ಹ ಕುಟುಂಬವು ಉದ್ಯೋಗಾವಕಾಶದಿಂದ ವಂಚಿತವಾಗದಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ವಿ.ಬಿ.ಜಿ.ರಾಮ್.ಜಿ ಸಿಬ್ಬಂದಿ ಅಗತ್ಯ ಕ್ರಮ ವಹಿಸಲಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾದವ ವಿಠ್ಠಲ ರಾವ್‌ ಅವರು ತಿಳಿಸಿದ್ದಾರೆ.

Join WhatsApp

Join Now

Join Telegram

Join Now