Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ವಾರಪೂರ್ತಿ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

---Advertisement---

ಬೆಂಗಳೂರು.ಆಗಸ್ಟ್.21:  ಕರಾವಳಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ವಾರಪೂರ್ತಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾತಾವರಣದಲ್ಲಿ ತೇವಾಂಶ ಭರಿತ ಮೋಡಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ವಾರಪೂರ್ತಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಗುರುವಾರ ರಾಜಧಾನಿ ಬೆಂಗಳೂರು ನಗರ ಸೇರಿದಂತೆ ಕರಾವಳಿ ಹಾಗೂ ಮಲೆನಾಡಿನ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳು: ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಆಗಸ್ಟ್ 21ರಿಂದ ಆಗಸ್ಟ್ 27ರವರೆಗೆ ಸಾಧಾರಣ ಮಳೆಯಾಗಲಿದೆ.

ಇತರೆ ಭಾಗಗಳು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾರಪೂರ್ತಿ ಲಘು ಪ್ರಮಾಣದ ಮಳೆ ಮುಂದುವರಿಯಲಿದೆ.

Join WhatsApp

Join Now

Join Telegram

Join Now