Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯ ನಟಿ ‘ಸಾಹುಕಾರ್’ ಜಾನಕಿ ನಿಧನ

---Advertisement---

 

ಚೆನ್ನೈ: ದಕ್ಷಿಣ ಭಾರತದ ಚಿತ್ರರಂಗದ ಹಿರಿಯ ನಟಿ ‘ಸಾಹುಕಾರ್’ ಜಾನಕಿ ನಿಧನರಾಗಿದ್ದಾರೆ. 94 ವರ್ಷದ ಜಾನಕಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮಧ್ಯಾಹ್ನ 1.59ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ತೆಲುಗು, ತಮಿಳು, ಕನ್ನಡ ಹಾಗೂ ಮಲಯಾಳಂ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದ ಜಾನಕಿ, ಏಳು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ಅವರು, ತಮ್ಮ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಮನಗೆದ್ದಿದ್ದರು.

1950ರಲ್ಲಿ ಬಿಡುಗಡೆಯಾದ ತೆಲುಗು ‘ಸಾಹುಕಾರ್’ ಸಿನಿಮಾದ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಪರಿಚಯವಾದ ಜಾನಕಿ, ಆ ಸಿನಿಮಾದ ಬಳಿಕ ‘ಸಾಹುಕಾರ್ ಜಾನಕಿ’ ಎಂದೇ ಜನಪ್ರಿಯರಾದರು.

ಕನ್ನಡ ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ಅಭಿನಯಿಸಿರುವ ಅವರು, ದಕ್ಷಿಣ ಭಾರತೀಯ ಚಿತ್ರರಂಗದ ಅತ್ಯಂತ ಹಿರಿಯ ಹಾಗೂ ಗೌರವಾನ್ವಿತ ಕಲಾವಿದರಲ್ಲಿ ಒಬ್ಬರಾಗಿದ್ದರು. ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆಗಾಗಿ ಅವರಿಗೆ ಹಲವು ಪ್ರಶಸ್ತಿಗಳು ಲಭಿಸಿದ್ದು, 2022ರಲ್ಲಿ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

ಸಾಹುಕಾರ್ ಜಾನಕಿ ಅವರ ನಿಧನದ ಸುದ್ದಿ ಚಿತ್ರರಂಗ ಹಾಗೂ ಅಭಿಮಾನಿಗಳಲ್ಲಿ ತೀವ್ರ ದುಃಖ ಮೂಡಿಸಿದೆ. ದಶಕಗಳ ಕಾಲ ತಮ್ಮ ಅಭಿನಯದ ಮೂಲಕ ಸಿನಿ ಪ್ರೇಕ್ಷಕರನ್ನು ರಂಜಿಸಿದ್ದ ಹಿರಿಯ ನಟಿಯ ಅಗಲಿಕೆಗೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now