Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Post-matric scholarships, incentive grants, and hostel admission for Scheduled Caste students: Online applications invited
---Advertisement---

ಚಿತ್ರದುರ್ಗ. ಆ.21: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಸಾಲಿನ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ (ವೃತ್ತಿಪರ ಪದವಿ ಕೋರ್ಸ್ ವಿದ್ಯಾರ್ಥಿಗಳಿಗೆ ಮಾತ್ರ) ಹೊಸದಾಗಿ ಪ್ರವೇಶ ಬಯಸುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ.

ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ಮೂಲಕhttps://shp.karnataka.gov.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ತಾಲೂಕು ವಿಸ್ತರಣಾಧಿಕಾರಿಗಳ ಕಚೇರಿ, ಸಂಬಂಧಪಟ್ಟ ವಿದ್ಯಾರ್ಥಿನಿಲಯಗಳು ಹಾಗೂ ಅಲ್ಪಸಂಖ್ಯಾತರ ಜಿಲ್ಲಾ/ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
========

ವಿಕಲಚೇತನರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ನೋಂದಣಿಗೆ ಸೂಚನೆ

ಚಿತ್ರದುರ್ಗ. ಆ.21:
ಜಿಲ್ಲೆಯಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ಶ್ರಮಿಸುತ್ತಿರುವ ಎಲ್ಲಾ ಸ್ವಯಂ ಸೇವಾ ಸಂಸ್ಥೆಗಳು ಕಡ್ಡಾಯವಾಗಿ ಸರ್ಕಾರದ ನಿಯಮಾವಳಿಯಂತೆ ನೋಂದಾಯಿಸಿಕೊಳ್ಳಬೇಕು.

ವಿಕಲಚೇತನರ ಅಧಿನಿಯಮ 2016ರ ಸೆಕ್ಷನ್ 51 ಹಾಗೂ 52ರ ಅಡಿಯಲ್ಲಿ ಈ ನೋಂದಣಿ ಪ್ರಕ್ರಿಯೆ ಕಡ್ಡಾಯವಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದುವರೆಗೆ ನೋಂದಣಿಯಾಗದ ಸಂಸ್ಥೆಗಳು ತಕ್ಷಣವೇ ‘ಸೇವಾ ಸಿಂಧು’ ಪೋರ್ಟಲ್ ಮೂಲಕ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಅಂಗವಿಕಲರ ಅಧಿನಿಯಮ 2016ರ ಸೆಕ್ಷನ್ 51, 52ರಡಿ  ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.
=========

 

ಪಿಎಚ್.ಡಿ ಫೆಲೋಶಿಪ್: ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಚಿತ್ರದುರ್ಗ. ಆ.21:
2026-27ನೇ ಸಾಲಿನಲ್ಲಿ ಪೂರ್ಣಕಾಲಿಕವಾಗಿ ಪಿಎಚ್.ಡಿ ಸಂಶೋಧನೆ ಕೈಗೊಳ್ಳುತ್ತಿರುವ ಅರ್ಹ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ಅಭ್ಯರ್ಥಿಗಳಿಗೆ ಜೆಆರ್‍ಎಫ್ ಮಾದರಿಯಲ್ಲಿ ನೀಡಲಾಗುವ ‘ಪಿಎಚ್.ಡಿ ಫೆಲೋಶಿಪ್’ ಯೋಜನೆಗೆ ಸೇವಾ ಸಿಂಧು ಫೋರ್ಟಲ್ ಮೂಲಕ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳುhttps://sevasindhuservices.karnataka.gov.in ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಜಿಲ್ಲಾ ಅಥವಾ ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
========

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ. ಆ.21: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ 2026-27ನೇ ಸಾಲಿನ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.

ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ (ಕ್ಯಾಟರಿಂಗ್), ಅಂಗಡಿ, ಟ್ಯಾಕ್ಸಿ ಹಾಗೂ ಟೈಲರಿಂಗ್ ಸೇರಿದಂತೆ ವಿವಿಧ ಸ್ವ-ಉದ್ಯಮಗಳನ್ನು ಕೈಗೊಳ್ಳಲು ಕನಿಷ್ಠ ರೂ.1 ಲಕ್ಷದಿಂದ ಗರಿಷ್ಠ ರೂ.2 ಲಕ್ಷದವರೆಗೆ ಸಾಲ-ಸಹಾಯಧನ ನೀಡಲಾಗುವುದು.
ಒಟ್ಟು ಸಾಲದ ಮೊತ್ತದಲ್ಲಿ ಶೇ.20 ರಷ್ಟು ಸಬ್ಸಿಡಿ (ಸಹಾಯಧನ) ಸಿಗಲಿದ್ದು, ಉಳಿದ ಶೇ.80 ರಷ್ಟು ಸಾಲದ ಮೊತ್ತಕ್ಕೆ ಶೇ.4 ರಷ್ಟು ಬಡ್ಡಿದರದಲ್ಲಿ ಒಟ್ಟು 34 ಕಂತುಗಳಲ್ಲಿ ಮರುಪಾವತಿಸಬೇಕು. ಯೋಜನೆಯಲ್ಲಿ ಮಹಿಳೆಯರಿಗೆ ಶೇ.33 ಹಾಗೂ ವಿಶೇಷ ಚೇತನರಿಗೆ ಶೇ.5 ರಷ್ಟು ಮೀಸಲಾತಿ ಇರಲಿದೆ.

ಅರ್ಜಿದಾರರು ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದವರಾಗಿದ್ದು, ಚಾಲ್ತಿಯಲ್ಲಿರುವ ಇಡಬ್ಲ್ಯೂಎಸ್ ಪ್ರಮಾಣಪತ್ರ ಹೊಂದಿರಬೇಕು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು ಹಾಗೂ ವಯಸ್ಸು 18 ರಿಂದ 65 ವರ್ಷದೊಳಗಿರಬೇಕು. ಅರ್ಜಿದಾರರ ಆಧಾರ್ ಕಾರ್ಡ್‍ಗೆ ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ಲಿಂಕ್ ಆಗಿರಬೇಕು. ಒಂದು ಕುಟುಂಬದಿಂದ ಒಬ್ಬರಿಗೆ ಮಾತ್ರ ಅವಕಾಶವಿದ್ದು, ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅವಕಾಶವಿರುವುದಿಲ್ಲ. ಸಾಲದ ಉದ್ದೇಶವನ್ನು ಅರ್ಜಿಯಲ್ಲಿ ಕನಿಷ್ಠ 10 ಪದಗಳಿಗೆ ಕಡಿಮೆಯಿಲ್ಲದಂತೆ ಸ್ಪಷ್ಟವಾಗಿ ನಮೂದಿಸಬೇಕು. ತಪ್ಪಿದಲ್ಲಿ ಅರ್ಜಿ ತಿರಸ್ಕರಿಸಲಾಗುವುದು.
ಆಸಕ್ತರು ವೆಬ್‍ಸೈಟ್www.ksbdb.karnataka.gov.inಟಿ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಸಂಜೆ 5.30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8762249230 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.
==========

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ. ಆ.21: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2026-27ನೇ ಸಾಲಿಗೆ ಅಲ್ಪಸಂಖ್ಯಾತ ಸಮುದಾಯವರಿಗೆ ಅಂದರೆ ಮುಸಲ್ಮಾನರು, ಜೈನ್ಸ್, ಆಂಗ್ಲೋ ಇಂಡಿಯನ್ಸ್, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರಿಂದ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಆಸಕ್ತರು ವೆಬ್‍ಸೈಟ್ www.kmdconline.karnataka.gov.in
ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಯೋಜನೆಯಡಿ ಅರಿವು (ವಿದ್ಯಾಭ್ಯಾಸ ಸಾಲ), ಸ್ವಾವಲಂಬಿ ಸಾರಥಿ, ಶ್ರಮಶಕ್ತಿ, ವೃತ್ತಿ ಪ್ರೋತ್ಸಾಹ, ಗಂಗಾ ಕಲ್ಯಾಣ, ನವೋದಯ, ಫಾಸ್ಟ್ ಫುಡ್ ಟ್ರಕ್/ಟ್ರೇಲರ್ ಕಿಚನ್ ಫುಡ್ (ಕಿಯೋಸ್ಟ್), ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಉತ್ತೇಜನ (ಸಹಾಯಧನ), ಸಮುದಾಯ ಆಧಾರಿತ ತರಬೇತಿ, ವಿದೇಶಿ ವಿದ್ಯಾಭ್ಯಾಸ ಸಾಲ, ವ್ಯಾಪಾರ/ಉದ್ಯಮ ನೇರ ಸಾಲ ಹಾಗೂ ಸಾಂತ್ವನ ಯೋಜನೆಗಳು ಸೇರಿವೆ.

ಅರ್ಜಿದಾರರು ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು ಹಾಗೂ 18 ರಿಂದ 55 ವರ್ಷ ವಯೋಮಿತಿಯೊಳಗಿರಬೇಕು. ಕುಟುಂಬದ ವಾರ್ಷಿಕ ಆದಾಯವು ಯೋಜನೆಗೆ ತಕ್ಕಂತೆ ರೂ.6 ಲಕ್ಷದೊಳಗಿರಬೇಕು (ಶ್ರಮಶಕ್ತಿ ಯೋಜನೆಗೆ ರೂ.3.50 ಲಕ್ಷ, ಸಾಂತ್ವನ ಯೋಜನೆಗೆ ರೂ.8.00 ಲಕ್ಷ, ವೃತ್ತಿ ಪೆÇ್ರೀತ್ಸಾಹ ಯೋಜನೆಗೆ ನಗರ ಪ್ರದೇಶದಲ್ಲಿ ರೂ.1,03,000 ಹಾಗೂ ಗ್ರಾಮೀಣ ಪ್ರದೇಶದಲ್ಲಿ ರೂ.81,000) ಇರಬೇಕು.

ಅರ್ಜಿದಾರರು ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ವಾಸಸ್ಥಳ ದೃಢೀಕರಣ ಪತ್ರ, ಪಡಿತರ ಚೀಟಿ ಹಾಗೂ ಐಎಸ್‍ಎಸ್‍ಸಿ ಕೋಡ್ ಹೊಂದಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಅರ್ಜಿದಾರರ ಕುಟುಂಬದ ಸದಸ್ಯರು ಸರ್ಕಾರಿ ನೌಕರರಾಗಿರಬಾರದು ಹಾಗೂ ಈ ಹಿಂದೆ ನಿಗಮದಿಂದ ಸಾಲ ಸೌಲಭ್ಯ ಪಡೆದಿರಬಾರದು. ಅರ್ಜಿದಾರರು ಆನ್‍ಲೈನ್ ಅರ್ಜಿಯ ಹಾರ್ಡ್ ಕಾಪಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now