Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಯಲ್ಲಿ 20 ಲಕ್ಷಕ್ಕೂ ಅಧಿಕ ಜಾತಿ ಪ್ರಮಾಣಪತ್ರ ವಿತರಣೆ : ಜಿಲ್ಲಾಡಳಿತಕ್ಕೆ ಸಿಎಂ ಪ್ರಧಾನ ಕಾರ್ಯದರ್ಶಿ ಅಭಿನಂದನೆ

---Advertisement---

ಚಿತ್ರದುರ್ಗ.22 : ಜಿಲ್ಲೆಯಲ್ಲಿ ಮನೆ-ಮನೆಗೆ ಜಾತಿ ಪ್ರಮಾಣಪತ್ರಗಳನ್ನು ವಿತರಿಸುವ ಕಾರ್ಯದಲ್ಲಿ ಶೇ.100ರಷ್ಟು ಸಾಧನೆ ಮಾಡಿ, 20 ಲಕ್ಷಕ್ಕೂ ಅಧಿಕ ಪ್ರಮಾಣಪತ್ರಗಳನ್ನು ನಾಗರಿಕರಿಗೆ ತಲುಪಿಸಿರುವ ಜಿಲ್ಲಾಡಳಿತದ ಕ್ರಮಕ್ಕೆ ಯೋಜನೆ ಮತ್ತು ಕಾರ್ಯಕ್ರಮ ಅನುಷ್ಠಾನ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮುನೀಷ್ ಮೌದ್ಗಿಲ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರಿಗೆ ಅಭಿನಂದನಾ ಪತ್ರ ಬರೆದಿರುವ ಅವರು, ‘ಅಗತ್ಯ ದಾಖಲೆಗಳನ್ನು ನಾಗರಿಕರ ಮನೆ ಬಾಗಿಲಿಗೆ ತಲುಪಿಸಿರುವುದು ನಿಜವಾದ ಅರ್ಥದಲ್ಲಿ ನಾಗರಿಕ ಕೇಂದ್ರಿತವಾದ ಮಹತ್ವದ ಸಾಧನೆಯಾಗಿದೆ. ಇದು ಸರ್ಕಾರದ ಸೇವೆಗಳನ್ನು ಜನರ ಬಳಿಗೆ ತಲುಪಿಸುವಲ್ಲಿ ಜಿಲ್ಲಾಡಳಿತದ ಬದ್ಧತೆ ಮತ್ತು ಕಾರ್ಯಕ್ಷಮತೆಯನ್ನು ಪ್ರತಿಬಿಂಬಿಸುತ್ತದೆ’ ಎಂದು ಪ್ರಶಂಸಿದ್ದಾರೆ. ಇದೇ ರೀತಿಯ ಉತ್ಸಾಹ ಮತ್ತು ಬದ್ಧತೆಯಿಂದ ರಾಜ್ಯದ ಇತರ ಎಲ್ಲ ಯೋಜನೆಗಳು ಹಾಗೂ ಉಪಕ್ರಮಗಳಲ್ಲಿಯೂ ಮುಂದುವರಿದು, ಜನಪರ ಆಡಳಿತಕ್ಕೆ ಮತ್ತಷ್ಟು ಬಲ ತುಂಬುವಂತೆ ಅವರು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಾಗೂ ಅವರ ಸಂಪೂರ್ಣ ತಂಡಕ್ಕೆ ಹಾರೈಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now