Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಣುಕಾಸ್ವಾಮಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌: ಬೆದರಿಕೆ ಪ್ರಕರಣದ ಉದ್ಯಮಿ ಜೊತೆ ವಿಜಯಲಕ್ಷ್ಮಿ ಕಾಣಿಸಿಕೊಂಡಿದ್ದೇಕೆ?

---Advertisement---

ಚಿತ್ರದುರ್ಗದ ರೇಣುಕಾಸ್ವಾಮಿ ಅವರು ಪವಿತ್ರಾ ಗೌಡ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಇದರಿಂದ ಆಕ್ರೋಶಗೊಂಡ ದರ್ಶನ್ ಹಾಗೂ ಅವರ ತಂಡ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆಸಿ ಪಟ್ಟಣಗೆರೆಯ ಶೆಡ್‌ನಲ್ಲಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಪ್ರಕರಣದಲ್ಲಿದೆ.ಈ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವರು ಆರೋಪಿಗಳಾಗಿದ್ದು, ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಮುಂದುವರಿದಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಇದೀಗ ಮತ್ತೊಂದು ವಿಚಾರ ಭಾರಿ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ಪ್ರಮುಖ ಸಾಕ್ಷಿಗೆ ಜೀವ ಬೆದರಿಕೆ ಹಾಕಿದ ಆರೋಪ ಕೇಳಿಬಂದಿರುವ ಉದ್ಯಮಿ ಗೌರವ್ ಶೆಟ್ಟಿ ಅವರೊಂದಿಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಕಾಣಿಸಿಕೊಂಡಿರುವುದು ಕುತೂಹಲ ಮೂಡಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ 49ನೇ ಸಾಕ್ಷಿಯಾಗಿರುವ ಚಿತ್ರದುರ್ಗದ ಬಾಲಾಜಿ ಬಾರ್ ಕ್ಯಾಷಿಯರ್ ಸಂದೀಪ್ ಅವರಿಗೆ ದರ್ಶನ್ ಅಭಿಮಾನಿ ಪುನೀತ್ ಹಾಗೂ ಇತರರು ಜೀವ ಬೆದರಿಕೆ ಹಾಕಿ, ಅಪಹರಣಕ್ಕೆ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಈ ಪ್ರಕರಣದ ತನಿಖೆ ನಡೆಸುತ್ತಿರುವ ಕಾಮಾಕ್ಷಿಪಾಳ್ಯ ಪೊಲೀಸರು ಉದ್ಯಮಿ ಗೌರವ್ ಶೆಟ್ಟಿ ಹಾಗೂ ಸುಹಾಸ್ ಅವರ ಸಂಪರ್ಕದ ಬಗ್ಗೆಯೂ ತನಿಖೆ ನಡೆಸಿದ್ದರು ಎನ್ನಲಾಗಿದೆ.

ಇದೀಗ ವಿಜಯಲಕ್ಷ್ಮಿ ದರ್ಶನ್ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಗೌರವ್ ಶೆಟ್ಟಿ ಅವರನ್ನು ಭೇಟಿಯಾಗಿ ಆತ್ಮೀಯವಾಗಿ ಸ್ವಾಗತಿಸಿರುವುದು ಗಮನ ಸೆಳೆದಿದೆ. ಸಾಕ್ಷಿಗೆ ಬೆದರಿಕೆ ಹಾಕಿದ ಪ್ರಕರಣದ ತನಿಖೆಯಲ್ಲಿ ಗೌರವ್ ಶೆಟ್ಟಿ ಅವರ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಅವರೊಂದಿಗೆ ವಿಜಯಲಕ್ಷ್ಮಿ ಕಾಣಿಸಿಕೊಂಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.ಆದರೆ, ವಿಜಯಲಕ್ಷ್ಮಿ ಮತ್ತು ಗೌರವ್ ಶೆಟ್ಟಿ ಅವರ ಭೇಟಿಯ ಉದ್ದೇಶವೇನು ಎಂಬುದು ಸ್ಪಷ್ಟವಾಗಿಲ್ಲ. ಈ ಭೇಟಿಗೂ ಸಾಕ್ಷಿ ಬೆದರಿಕೆ ಪ್ರಕರಣಕ್ಕೂ ನೇರ ಸಂಬಂಧವಿದೆ ಎಂಬುದನ್ನು ತನಿಖಾ ಸಂಸ್ಥೆಗಳು ದೃಢಪಡಿಸಿಲ್ಲ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now