Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲಾ ಕ್ರಿಕೆಟ್ ಉಸ್ತುವಾರಿಯಾಗಿ ಎಚ್.ರಾಜು ನೇಮಕ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 24 : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ತುಮಕೂರು ವಲಯದ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಮತ್ತು ತುಮಕೂರು ವಲಯ ಸಮಿತಿಯ ಪ್ರತಿನಿಧಿಯಾಗಿ ಭದ್ರಾ ಕ್ರಿಕೆಟ್ ಕ್ಲಬ್ ಅಧ್ಯಕ್ಷ ಎಚ್.ರಾಜು ಅವರನ್ನು ನೇಮಕ ಮಾಡಲಾಗಿದೆ.

KSCA ತುಮಕೂರು ವಲಯದ ಕನ್ವೀನರ್ ಹಾಗೂ ಮ್ಯಾನೇಜಿಂಗ್ ಕಮಿಟಿ ಸದಸ್ಯ ಸಿ.ಆರ್.ಹರೀಶ್ ಅವರು ದಿನಾಂಕ 24-08-2026 ರಂದು ಈ ಕುರಿತು ಆದೇಶ ಹೊರಡಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರಿಕೆಟ್ ಚಟುವಟಿಕೆಗಳ ಸುಗಮ ನಿರ್ವಹಣೆ ಮತ್ತು ಪರಿಣಾಮಕಾರಿ ಸಮನ್ವಯದ ಹಿತದೃಷ್ಟಿಯಿಂದ ಈ ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಭದ್ರಾ ಕ್ರಿಕೆಟ್ ಕ್ಲಬ್ ಅಧ್ಯಕ್ಷರಾಗಿ ಜಿಲ್ಲೆಯಲ್ಲಿ ಕ್ರಿಕೆಟ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹಿನ್ನೆಲೆಯಲ್ಲಿ ಎಚ್.ರಾಜು ಅವರು KSCA, ತುಮಕೂರು ವಲಯ ಮತ್ತು ಎಲ್ಲಾ ಸಂಬಂಧಪಟ್ಟ ಕ್ರೀಡಾ ಮಧ್ಯಸ್ಥಗಾರರೊಂದಿಗೆ ಸಮನ್ವಯ ಸಾಧಿಸಿ ಜಿಲ್ಲೆಯಲ್ಲಿ ಕ್ರಿಕೆಟ್ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಲಾಗಿದೆ. ತುಮಕೂರು ವಲಯ ಸಮಿತಿಯ ಸಭೆ ಮತ್ತು ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಂಪೂರ್ಣ ಸಹಕಾರ ನೀಡುವಂತೆ ಸೂಚಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now