Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ತಾಲ್ಲೂಕುಗಳಲ್ಲಿ ಟಾಸ್ಕ್ ಫೋರ್ಸ್ ಸಭೆ ಕಡ್ಡಾಯ, ಕುಡಿಯುವ ನೀರಿನ ಸಮಸ್ಯೆ ಶೀಘ್ರ ಪರಿಹಾರಕ್ಕೆ ಡಿಸಿ ಸೂಚನೆ

---Advertisement---

ಚಿತ್ರದುರ್ಗ .ಆ. 24:  ಪ್ರಕೃತಿ ವಿಕೋಪ ನಿರ್ವಹಣೆ ವಿಷಯಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಶಾಸಕರ ನೇತೃತ್ವದಲ್ಲಿ ತಹಶೀಲ್ದಾರರು ತಪ್ಪದೇ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಸಬೇಕು. ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಗ್ರಾಮಗಳಗೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಿರಿಯೂರಿನ ತಾಲ್ಲೂಕಿನ ದಿಂಡಾವರ, ಗಂಜಲಗುಂಟೆ ಹಾಗೂ ಹೊಳಲ್ಕೆರೆಯ ಕೊಳಕಾಳು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಪತ್ರಿಕೆ ಹಾಗೂ ಟಿ.ವಿ.ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿವೆ. ಹಿರಿಯೂರು ತಾಲ್ಲೂಕಿನ ಗ್ರಾಮಸ್ಥರು ಮುಂಬರುವ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಹೇಳುತ್ತಿದಾರೆ. ಅಧಿಕಾರಿಗಳು ಕೂಡಲೇ ಎಚ್ಚಿತ್ತು ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. ಬೋರೆವೆಲ್ ಕೊರೆಸುವ ಮೂಲಕ ಸಮಸ್ಯಗೆ ಮುಕ್ತಿ ಹಾಡಬೇಕು. ತಕ್ಷಣಕ್ಕೆ ಖಾಸಗಿ ಬೊರೆವೆಲ್ ಬಾಡಿಗೆ ಪಡೆದು ನೀರು ಸರಬರಾಜಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಐಮಂಗಲ ಹಾಗೂ ಹರ್ತಿಕೋಟೆ ಬಹುಗ್ರಾಮ ಕುಡಿಯುವ ನೀರಿನ ಕಾಮಗರಿಯನ್ನು ಆಗಸ್ಟ್ 31ರ ಒಳಗಾಗಿ ಪೂರ್ಣಗೊಳಿಸಬೇಕು. ಇದರೊಂದಿಗೆ ದೇವರ ಎತ್ತುಗಳಿಗೆ ಟ್ರಸ್ಟ್ ರಚಿಸುವ ಕಾರ್ಯವೂ ನಿಗದಿವೇಳೆ ಪೂರ್ಣವಾಗಬೇಕು. ಚಿತ್ರದುರ್ಗ ನಗರದ ಕುಡಿಯುವ ನೀರು ಸರಬಾಜಿಗೆ ಇರುವ ತಾಂತ್ರಿಕ ಅಡಚಣೆಯನ್ನು ಅಧಿಕಾರಿಗಳು ಬಗೆ ಹರಿಸಬೇಕು ಎಂದು ಸೂಚಿಸಿದರು.

ಪ್ರಜಾಸೇವಾ ಶಾಖೆ ಪ್ರಾರಂಭಿಸಲು ಕಟ್ಟುನಿಟ್ಟಿನ ಸೂಚನೆ:
ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಕಚೇರಿಗಳು ಹಾಗೂ ತಾಲ್ಲೂಕು ಪಂಚಾಯಿತಿಗಳಲ್ಲಿ ಸಾರ್ವಜನಿಕರ ದೂರು ಮತ್ತು ಅಹವಾಲುಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಪ್ರಜಾಸೇವಾ ಇಲಾಖೆಯ ಶಾಖೆಗಳನ್ನು ಪ್ರಾರಂಭಿಸಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಮಟ್ಟದಲ್ಲಿ ಅಪರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿಗಳು ಪ್ರಜಾಸೇವಾ ಇಲಾಖೆ ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್‍ಗಳು ಹಾಗೂ ಇಓಗಳು ಈ ಕಾರ್ಯದ ಉಸ್ತುವಾರಿ ವಹಿಸಬೇಕು.
ಕಚೇರಿಗಳಲ್ಲಿ ಪ್ರಜಾಸೇವಾ ವಿಭಾಗ ಸಕ್ರಿಯವಾಗಿರುವ ಬಗ್ಗೆ ಬೋರ್ಡ್‍ಗಳನ್ನು ಹಾಗೂ ಲಭ್ಯವಿರುವ ಸೇವೆಗಳ ವಿವರಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಕಡ್ಡಾಯವಾಗಿ ಪ್ರದರ್ಶಿಸಬೇಕು. ಪ್ರಜಾಸೇವಾ ಶಾಖೆಗೆ ಸೂಕ್ತ ಸಿಬ್ಬಂದಿ ನಿಯೋಜಿಸಿ ಸಾರ್ವಜನಿಕರಿಂದ ಸ್ವೀಕೃತವಾಗುವ ಅರ್ಜಿಗಳನ್ನು ಗಣಕೀಕರಿಸಿ, ಸಂಬಂಧಪಟ್ಟ ಇಲಾಖೆಗಳಿಗೆ ತಲುಪಿಸಿ ಜಿಲ್ಲಾ ಹಾಗೂ ರಾಜ್ಯ ಮಟ್ಟಕ್ಕೆ ಕಳುಹಿಸುವ ವ್ಯವಸ್ಥೆಯಾಗಬೇಕು.

ಸಾರ್ವಜನಿಕರಿಂದ ಸ್ವೀಕರಿಸಲ್ಪಡುವ ಪ್ರತಿಯೊಂದು ಅರ್ಜಿಗೂ ಪ್ರಜಾಸೇವಾ ಇಲಾಖೆಯಿಂದ ಕಡ್ಡಾಯವಾಗಿ ನಂಬರ್ ನೀಡಿ, ಕಡತ ಸಿದ್ಧಪಡಿಸಬೇಕು. ಪ್ರತಿ ಬುಧವಾರದ ವೇಳೆಗೆ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ, ಮುಂದಿನ ಬುಧವಾರದೊಳಗೆ ಅವುಗಳನ್ನು ವಿಲೇವಾರಿ ಮಾಡಿ ಪೆÇೀರ್ಟಲ್‍ನಲ್ಲಿ ಅಪ್‍ಲೋಡ್ ಮಾಡಬೇಕು.
ಕಚೇರಿಗೆ ನೇರವಾಗಿ ಬರುವ ಅರ್ಜಿಗಳು, ಧರಣಿ ಹಾಗೂ ಪ್ರತಿಭಟನೆಗಳ ಮೂಲಕ ಸಲ್ಲಿಸಿದ ಮನವಿಗಳು ಹಾಗೂ ‘ಜನಸಂಪರ್ಕ’ ಸಭೆಗಳಲ್ಲಿ ಬಂದಂತಹ ಅರ್ಜಿಗಳನ್ನು ಪ್ರತ್ಯೇಕವಾಗಿ ವರ್ಗೀಕರಿಸಿ ವಿಲೇವಾರಿಗೆ ಕ್ರಮ ವಹಿಸಬೇಕು. ಅರ್ಜಿ ವಿಲೇವಾರಿ ಕುರಿತು ರಾಜ್ಯಮಟ್ಟದ ಗುಪ್ತಚರ ಇಲಾಖೆ ತಂಡವು ಪ್ರತಿ ತಾಲೂಕಿನಿಂದ ಮಾಹಿತಿ ಕಲೆಹಾಕುತ್ತಿದ್ದು, ನಿರ್ಲಕ್ಷ್ಯ ವಹಿಸುವ ಅಥವಾ ಕ್ರಮ ಕೈಗೊಳ್ಳದ ಅಧಿಕಾರಿ ವಿರುದ್ಧ ಶಿಸ್ತು ಸಹಿತ ಕಠಿಣ ಕ್ರಮ ಕೈಗೊಳ್ಳಲಾಗುವುದೆ. ಎಲ್ಲಾ ಇಲಾಖಾ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲಿ ಲಭ್ಯವಿದ್ದು, ಸಾರ್ವಜನಿಕರ ದೂರುಗಳನ್ನು ಸ್ವತಃ ಆಲಿಸಿ ಪರಿಹರಿಸಬೇಕು ಎಂದು ಸೂಚಿಸಿದರು.

ಸೆ.3 ರಂದು ಜನಸ್ಪಂದನೆ ಕಾರ್ಯಕ್ರಮ:
ಮುಂಬರುವ ಸೆ.3 ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಿರಿಯೂರಿನಲ್ಲಿ ಜನಸ್ಪಂದನೆ ಕಾರ್ಯಕ್ರಮ ಜರುಗಲಿದೆ. ಅಧಿಕಾರಿಗಳು ಇಂದಿನಿಂದಲೇ ಸಭೆ ಆಯೋಜನೆ ಸಿದ್ದತೆ ಕೈಗೊಳ್ಳಬೇಕು. ಸಭೆ ನಡೆಯುವ ಸ್ಥಳದಲ್ಲಿ ಅಹವಾಲುಗಳ ಸ್ವೀಕಾರಕ್ಕೆ ಕೌಂಟರ್‍ಗಳನ್ನು ತೆರೆಯಬೇಕು. ವಿವಿಧ ಇಲಾಖೆಗಳ ಸೌಲಭ್ಯಗಳ ಕುರಿತು ಸ್ಟಾಲ್‍ಗಳನ್ನು ಹಾಕುವ ಮೂಲಕ ಯೋಜನೆಗಳ ಕುರಿತು ಜನರಿಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಜನಸ್ಪಂದನ ಸಭೆ ಆಯೋಜನೆಗೆ ವೇಳಾಪಟ್ಟಿ:
ಜನಸ್ಪಂದನ ಸಭೆಗಳನ್ನು ಪರಿಣಾಮಕಾರಿಯಾಗಿ ಆಯೋಜಿಸಲು ಸರ್ಕಾರದ ಸುತ್ತೋಲೆ ಹೊರಡಿಸಿದೆ. ಪ್ರತಿ ತಿಂಗಳ 1 ಮತ್ತು 3 ನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ. 2 ಮತ್ತು 4 ನೇ ಶನಿವಾರ ಶಾಸಕರ ನೇತೃತ್ವದಲ್ಲಿ ಹೋಬಳಿ ಮಟ್ಟದ ಸಭೆಗಳನ್ನು ಆಯೋಜಿಸಬೇಕು. ಮುಂಬರುವ ದಿನಗಳಲ್ಲಿ ಈ ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ತಹಶೀಲ್ದಾರುರು ಜನಸ್ಪಂದನ ಕಾರ್ಯಕ್ರಮ ಆಯೋಜಿಸಲುವ ಸ್ಥಳ ಪಟ್ಟಿಯನ್ನು ಸಿದ್ದಪಡಿಸಿ ಕಳುಹಿಸಿಕೊಡಬೇಕು. ಸಭೆ ಆಯೋಜನೆಗೂ ಮುನ್ನ ವಾರ್ತಾ ಇಲಾಖೆ ಮುಖಾಂತರ ಪ್ರಚಾರ ವ್ಯಾಪಕ ಪ್ರಚಾರ ನೀಡಿಬೇಕು. ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಬೇಕು. ಕಂದಾಯ, ಸಮಾಜ ಕಲ್ಯಾಣ ಹಾಗೂ ನಗರಸಭೆ ವ್ಯಾಪ್ತಿಯ ಖಾತೆ ಬದಲಾವಣೆ, ಪೌತಿ ಖಾತೆ ಮತ್ತು ಪಿಂಚಣಿ ಮುಂತಾದ ಸೇವೆಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಲು ಕ್ರಮವಹಿಸಬೇಕು. ಜನಸ್ಪಂದನ ಕಾರ್ಯಕ್ರಮದ ದಿನದಂದು ವಿವಿಧ ಇಲಾಖೆಗಳ ಪ್ರತ್ಯೇಕ ಕೌಂಟರ್‍ಗಳನ್ನು ತೆರೆದು, ಆನ್‍ಲೈನ್ ಸೇವೆಗಳ ಮೂಲಕ ಸಾಧ್ಯವಿದ್ದಲ್ಲಿ ಸ್ಥಳದಲ್ಲೇ ಪ್ರಮಾಣಪತ್ರ ಅಥವಾ ಆದೇಶ ಪ್ರತಿಗಳನ್ನು ವಿತರಿಸಬೇಕು ಎಂದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ.ಎಸ್.ಜೆ.ಕಾಂತರಾಜ್, ಜಿಲ್ಲಾ ಪಂಚಾಯಿತಿ ಸಿಪಿಓ ಗಾಯಿತ್ರಿ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಸವಿತಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಕೃಷಿ ಇಲಾಖೆ ಉಪನಿರ್ದೇಶಕ ಶಿವಕುಮಾರ್, ಪಶು ವೈದ್ಯಕೀಯ ಮತ್ತು ಸೇವಾ ಇಲಾಖೆ ಉಪನಿರ್ದೇಶಕ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಅಂಕೆ ಸಂಖ್ಯೆ ಸಂಗ್ರಹಣಾಧಿಕಾರಿ ರವಿಕುಮಾರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಅಮರನಾಥ್ ಜೈನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಎಂ.ಸಿ.ಸುನೀಲ್ ಕುಮಾರ್, ನಗರಸಭೆ ಆಯುಕ್ತೆ ಲಕ್ಷ್ಮಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಸೇರಿದಂತೆ ವಿವಿಧ ತಾಲ್ಲೂಕುಗಳ ತಹಶೀಲ್ದಾರರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now