ಬೆಂಗಳೂರು: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ (NBW) ಜಾರಿಗೊಳಿಸಿದೆ.2024ರ ಜನವರಿ 11ರಂದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಪ್ರದೀಪ್ ಈಶ್ವರ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಅವರು ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.ಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ನ್ಯಾಯಾಲಯದ ವಿಚಾರಣೆಗೆ ಪ್ರದೀಪ್ ಈಶ್ವರ್ ಗೈರಾಗಿದ್ದರು ಎನ್ನಲಾಗಿದೆ.
ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಲು ಆದೇಶಿಸಿದೆ.ಪ್ರಕರಣದ ಮುಂದಿನ ವಿಚಾರಣೆ ಹಾಗೂ ನ್ಯಾಯಾಲಯದ ಆದೇಶದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.











