Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಡವರಿಗೆ ನಿವೇಶನ ಮಂಜೂರು ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 25 : ಬಡವರಿಗೆ ನಿವೇಶನಗಳನ್ನು ಮಂಜೂರು ಮಾಡುವಂತೆ ಅರುಂಧತಿ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಭ್ರಷ್ಟಾಚಾರ ವಿರೋಧಿ ಆಂದೋಲನ ರಾಜ್ಯಾಧ್ಯಕ್ಷ ಹನುಮಂತಪ್ಪ ದುರ್ಗ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡುತ್ತ 30-40 ವರ್ಷಗಳಿಂದಲೂ ಚಿತ್ರದುರ್ಗದಲ್ಲಿಯೇ ನೆಲೆಸಿರುವ ಇವರೆಲ್ಲಾ ಕಡು ಬಡವರಾಗಿದ್ದು, ಸ್ವಂತ ನಿವೇಶನವಾಗಲಿ, ಮನೆಯಾಗಲಿ ಇಲ್ಲ. ಬಹುತೇಕರು ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಇಂತಹ ಕಷ್ಟದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಸರ್ಕಾರ ಯಾವುದೇ ಯೋಜನೆಯಡಿಯಲ್ಲಿ ಇವರುಗಳಿಗೆ ನಿವೇಶನಗಳನ್ನು ನೀಡಿಲ್ಲ. ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಿದೆ. ಹಾಗಾಗಿ ಚಿತ್ರದುರ್ಗ ತಾಲ್ಲೂಕು ಕಸಬಾ ಹೋಬಳಿ ಎಂ.ಕೆ.ಹಟ್ಟಿಯ ರಿ.ಸ.ನಂ.45/2 ರಲ್ಲಿ ಆರು ಎಕರೆ 30 ಗುಂಟೆ ಸರ್ಕಾರಿ ಜಮೀನಿದ್ದು, ಇದರಲ್ಲಿ ನಾಲ್ಕು ಎಕರೆ ಜಮೀನನ್ನು ಮಂಜೂರು ಮಾಡಿದರೆ ಸುಮಾರು 150 ಕುಟುಂಬಗಳು ನೆಮ್ಮದಿಯಿಂದ ಜೀವನ ಮಾಡಬಹುದೆಂದು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ನಗರಸಭೆಯ ನಿರ್ಲಕ್ಷೆಯಿಂದ ನಗರದ ಬಹುತೇಕ ಕಡೆ ಯು.ಜಿ.ಡಿ. ತುಂಬಿ ರಸ್ತೆಗಳಲ್ಲಿ ಶೌಚದ ನೀರು ಹರಿಯುತ್ತಿದೆ. ಹೊಳಲ್ಕೆರೆ ರಸ್ತೆಯಲ್ಲಿರುವ ಯಾದವ ಮಠದ ಮುಂಭಾಗದ ರಸ್ತೆಯ ಪಕ್ಕದಲ್ಲಿ ನೂರಾರು ಲೋಡುಗಳಷ್ಟು ತ್ಯಾಜ್ಯವನ್ನು ಸುರಿಯಲಾಗಿದೆ. ನಗರ ಪ್ರದೇಶಗಳಲ್ಲಿ ಹಳೆ ಮನೆಗಳನ್ನು ಕೆಡವಿದಾಗ ಸಿಗುವ ಕಲ್ಲು, ಮಣ್ಣಿನ ರಾಶಿಗಳನ್ನು ತಂದು ಎಗ್ಗಿಲ್ಲದೆ ಇಲ್ಲಿ ಹಾಕಲಾಗಿದೆ. ನಗರದ ಪ್ರಸಾದಂ ಹೋಟೆಲ್‍ನವರು ಪಕ್ಕದಲ್ಲಿರುವ ರಾಜ ಕಾಲುವೆಯನ್ನು ಮುಚ್ಚಿ ಗೋಡೆಗಳನ್ನು ನಿರ್ಮಿಸಿಕೊಂಡಿರುವುದರಿಂದ ಮಳೆ ಬಂದಾಗ ಸರಾಗವಾಗಿ ನೀರು ಹರಿಯಲು ಜಾಗವಿಲ್ಲದಂತಾಗಿದೆ. ನಗರಸಭೆಗೆ ಅನೇಕ ಬಾರಿ ದೂರು ನೀಡಿದ್ದರೂ ಮತದಾರರ ಮತಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯಿದೆ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ. ಈ ಸಂಬಂಧ ನಗರಸಭೆ ಪೌರಾಯುಕ್ತರ ಮೇಲೆ ಶಿಸ್ತಿನ ಕ್ರಮ ಕೈಗೊಂಡು ನಗರದಲಿ ಸ್ವಚ್ಚತೆಯನ್ನು ಕಾಪಾಡುವಂತೆ ಹನುಮಂತಪ್ಪ ದುರ್ಗ ವಿನಂತಿಸಿದರು.

ಏಕಾಂತಪ್ಪ, ನ್ಯಾಯವಾದಿಗಳಾದ ಸುರೇಶ್, ತಿಪ್ಪೇಸ್ವಾಮಿ, ದಯಾನಂದ, ವಿಶ್ವನಾಥ, ವಿವಿಧ ಬಡಾವಣೆಯ ನಿವಾಸಿಗಳಾದ ಸುನಿತ, ಹಂಸ, ರಾಧಮ್ಮ, ನಾಗೇಂದ್ರಪ್ಪ, ಅಕ್ಕಿತಿಮ್ಮಯ್ಯನಹಟ್ಟಿಯ ಬಸವರಾಜ್, ಸುರೇಶ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now