ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ. ಆ. 26 : ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಪ್ರತಿ ವರ್ಷ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವ `ಹಿಂದೂ ಮಹಾಗಣಪತಿ ಮಹೋತ್ಸವ’ದ ಅಂಗವಾಗಿ ಬುಧವಾರ ನಗರದ ಶ್ರೀ ಮುರುಘಾ ರಾಜೇಂದ್ರ ಕ್ರೀಡಾಂಗಣದಲ್ಲಿ ಗೋಪೂಜೆ ಹಾಗೂ ಧ್ವಜಪೂಜೆಯನ್ನು ನಡೆಸುವುದರ ಮೂಲಕ ಮಹೋತ್ಸ ವಕ್ಕೆ ವಿವಿಧ ಮಠಾಧೀಶರು, ಚುನಾಯಿತ ಪ್ರತಿನಿಧಿಗಳು, ಗಣ್ಯರಿಂದ ಚಾಲನೆ ನೀಡಲಾಯಿತು.

ಕಳೆದ 18 ವರ್ಷಗಳಿಂದ ಚಿತ್ರದುರ್ಗದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದವತಿಯಿಂದ ಹಿಂದೂ ಮಹಾ ಗಣಪತಿಯನ್ನು ಸ್ಥಾಪನೆ ಮಾಡಿ ಪೂಜೆ ಹಾಗೂ ಶೋಭಾಯಾತ್ರೆಯನ್ನು ನಡೆಸಲಾಗುತ್ತಿದೆ ಪ್ರತಿ ವರ್ಷ ಇದಕ್ಕಾಗಿ ಸಮಿತಿಯನ್ನು ರಚನೆ ಮಾಡಲಾಗುತ್ತದೆ ಇದ್ದಲ್ಲದೆ ಮಹೋತ್ಸವ ಯಶಸ್ವಿಗೆ ವಿವಿಧ ರೀತಿಯ ಸಮಿತಿಗಳನ್ನು ರಚನೆ ಮಾಡಲಾಗಿದೆ ಸೆಪ್ಟೆಂಬರ್ 14ರಂದು ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಹಾಗೂ ಅಕ್ಟೋಬರ್ 3ರಂದು ವೈಭವದ ಶೋಭಾಯಾತ್ರೆ ನಡೆಯಲಿದೆ. ಸೆಪ್ಟೆಂಬರ್ 9 ಅಥವಾ 13 (ಬುಧವಾರ/ಭಾನುವಾರ): ಸಮಯ ಮತ್ತು ನಕ್ಷತ್ರವನ್ನು ಆಧರಿಸಿ ಹಿಂದೂ ಮಹಾ ಗಣಪತಿಯ ಪುರಪ್ರವೇಶ ಕಾರ್ಯಕ್ರಮವನ್ನು ಅಂತಿಮಗೊಳಿಸಲಾಗುವುದು. ಸೆಪ್ಟೆಂಬರ್ 14 (ಸೋಮವಾರ): ಬೆಳಿಗ್ಗೆ 9:18 ರಿಂದ 10:45ರ ಶುಭ ಮುಹೂರ್ತದಲ್ಲಿ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ನೆರವೇರಲಿದೆ. ಅಕ್ಟೋಬರ್ 3: ಅತ್ಯಂತ ವಿಜೃಂಭಣೆಯ ಶೋಭಾಯಾತ್ರೆ ಮತ್ತು ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ.
ಇಂದು ಬೆಳ್ಳಿಗೆ ಶ್ರೀ ಮುರುಘಾ ರಾಜೇಂದ್ರ ಕ್ರೀಡಾಂಗಣದಲ್ಲಿ ಗೋಪೂಜೆ ಹಾಗೂ ಧ್ವಜಪೂಜೆಯನ್ನು ನೆರದಿದ್ದ ಸಾವಿರಾರು ಭಕ್ತಾಧಿಗಳ ವಿವಿಧ ಮಠಾಧಿಶರು, ಚುನಾಯಿತ ಪ್ರತಿನಿಧಿಗಳ ಸಮ್ಮುಖದಲ್ಲಿ ನಡೆಸಲಾ ಯಿತು. ಈ ಸಂದರ್ಭದಲ್ಲಿ ಶ್ರೀ ಮಾದಾರ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಬಸವಮೂರ್ತಿ ಶ್ರೀಗಳು, ಭಗೀರಥ ಪೀಠದ ಪುರುಷೋತ್ತಮಾನಂದ ಶ್ರೀಗಳು, ಯಾದವ ಗುರುಪೀಠದ ಶ್ರೀ ಕೃಷ್ಣಯಾದವಾನಂದ ಶ್ರೀಗಳು, ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಹೊಸದುರ್ಗದ ಶ್ರೀ ಶಾಂತವೀರ ಶ್ರೀಗಳು, ಸರ್ದಾರ ಸೇವಾಲಾಲ್ ಶ್ರೀಗಳು, ಸಂಸದರಾದ ಗೋವಿಂದ ಕಾರಜೋಳ, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ಎಸ್.ಕೆ. ಬಸವರಾಜನ್ ಜಿ.ಪಂ.ಮಾಜಿ ಅಧ್ಯಕ್ಷರಾದ ಶ್ರೀಮತಿ ಸೌಭಾಗ್ಯ ಬಸವರಾಜನ್, ಮುಖಂಡರುಗಳಾದ ಡಾ. ಸಿದ್ದಾರ್ಥ ಗುಂಡಾರ್ಪಿ, ಹಿಂದೂ ಮಹಾಗಣಪತಿ ಉತ್ಸವ ಸಮಿತಿಯ ಅಧ್ಯಕ್ಷರಾದ ಸುಧೀರ್ ಜಿ. ಪ್ರಧಾನ ಕಾರ್ಯದರ್ಶಿ ಚನ್ನಕೇಶವ್, ಗೌರವಾಧ್ಯಕ್ಷರಾದ ಷಡಕ್ಷರಪ್ಪ, ವಿಶ್ವ ಹಿಂದೂ ಪರಿಷತ್‍ನ ಪ್ರಾಂತ ಸತ್ಸಂಗ ಪ್ರಮುಖ್ ಚಂದ್ರಶೇಖರ್ ವಿಶ್ವ ಹಿಂದೂ ಪರಿಷತ್‍ನ್ ಪ್ರಾಂತ ಉಪಾಧ್ಯಕ್ಷರಾದ ಡಾ ಮಂಜುನಾಥ್, ಶ್ರೀಮತಿ ರೇಖಾ, ನಗರಸಭೆಯ ಮಾಜಿ ಸದಸ್ಯರಾದ ಸುರೇಶ್, ನಾಗರಾಜ್, ವೆಂಕಟೇಶ್ ಯಾದವ್, ಬದರಿನಾಥ್, ಕೊಲ್ಲಿಲಕ್ಷ್ಮೀ, ಪ್ರಶಾಂತ್, ಶರಣ್ ಕುಮಾರ್, ಶ್ರೇಣಿಕ್ ಬಸಮ್ಮ, ನಾಗರಾಜ್ ಬೇದ್ರೇ ಸೇರಿದಂತೆ ಇತರರು ಭಾಗವಹಿಸಿದ್ದರು.








