ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 28 : ಮಧ್ಯ ಕರ್ನಾಟಕ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಗೆ ಸಮಗ್ರ ನೀರಾವರಿಗೆ ಆಗ್ರಹಿಸಿ ಸೆ.1 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯತನ ಹಿರಿಯೂರಿನ ವಾಣಿವಿಲಾಸ ಸಾಗರ ಬಳಿ ಬಯಲು ಸೀಮೆ ನೀರಾವರಿ ಹೋರಾಟ ಸಮಿತಿಯಿಂದ ಕಪ್ಪು ಪಟ್ಟಿ ಧರಿಸಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದೆಂದು ಸಮಿತಿಯ ಪ್ರಧಾನ ಸಂಚಾಲಕ ಲಕ್ಷ್ಮಣ್ಹೂಗಾರ್ ತಿಳಿಸಿದ್ದಾರೆ.
ರೈತ ಮುಖಂಡ ಈಚಘಟ್ಟದ ಸಿದ್ದವೀರಪ್ಪ ಸೇರಿದಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯವರು ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವರು. ವಿದ್ಯಾರ್ಥಿಗಳು, ಯುವಜನರು, ರೈತ ಮಹಿಳೆಯರು, ಪ್ರಗತಿಪರ ಚಿಂತಕರು, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ, ಚಳ್ಳಕೆರೆ ಭಾಗದ ರೈತರು ಹಾಗೂ ಸಮಾನ ಮನಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಧರಣಿ ಸತ್ಯಾಗ್ರಹವನ್ನು ಯಶಸ್ವಿಗೊಳಿಸುವಂತೆ ಬಯಲು ಸೀಮೆ ನೀರಾವರಿ ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಲಕ್ಷ್ಮಣ್ ಹೂಗಾರ್ ಮನವಿ ಮಾಡಿದ್ದಾರೆ.










