Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರು ಸೇರಿ 5 ನಗರಗಳಲ್ಲಿ ಹೊಸ ಗ್ಯಾಸ್ ಸಂಪರ್ಕ ಸ್ಥಗಿತ; ಕಾರಣವೇನು?

---Advertisement---

ದೇಶದಲ್ಲಿ ಎಲ್‌ಪಿಜಿ ಆಮದು ಪ್ರಮಾಣ ಹೆಚ್ಚಾಗಿದ್ದರೂ, ಹೊಸ ಎಲ್‌ಪಿಜಿ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿರುವ ಗ್ರಾಹಕರಿಗೆ ನಿರಾಸೆಯಾಗಿದೆ. ಬೆಂಗಳೂರು, ದೆಹಲಿ, ಮುಂಬೈ, ಕೋಲ್ಕತ್ತಾ ಹಾಗೂ ಚೆನ್ನೈ ಸೇರಿದಂತೆ ಪ್ರಮುಖ ನಗರಗಳಲ್ಲಿ 14.2 ಕೆ.ಜಿ. ಸಿಲಿಂಡರ್‌ನ ಹೊಸ ಸಂಪರ್ಕಗಳನ್ನು ಸದ್ಯ ನೀಡಲಾಗುತ್ತಿಲ್ಲ.ಇಂಡಿಯನ್ ಗ್ಯಾಸ್, ಭಾರತ್ ಗ್ಯಾಸ್ ಹಾಗೂ ಎಚ್‌ಪಿ ಗ್ಯಾಸ್‌ಗಾಗಿ ಅರ್ಜಿ ಸಲ್ಲಿಸಿರುವ ಗ್ರಾಹಕರು ಹೊಸ ಸಂಪರ್ಕಕ್ಕಾಗಿ ಕಾಯುವಂತಾಗಿದೆ. ಯುದ್ಧದ ಸಂದರ್ಭದಲ್ಲಿ ಎಲ್‌ಪಿಜಿ ವಿತರಣೆಗೆ ಕೇಂದ್ರ ಸರ್ಕಾರ ಹಲವು ನಿರ್ಬಂಧಗಳನ್ನು ವಿಧಿಸಿತ್ತು. ಪರಿಸ್ಥಿತಿ ಕೊಂಚ ಸುಧಾರಿಸಿದ ಬಳಿಕ ಕೆಲವು ನಿರ್ಬಂಧಗಳನ್ನು ಸಡಿಲಿಸಲಾಗಿದ್ದರೂ, ಹೊಸ ಸಂಪರ್ಕ ವಿತರಣೆಯನ್ನು ಇನ್ನೂ ಪುನರಾರಂಭಿಸಿಲ್ಲ.

ಭೌಗೋಳಿಕ ರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಹೊಸ ಎಲ್‌ಪಿಜಿ ಸಂಪರ್ಕಗಳ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೇಂದ್ರ ಇಂಧನ ಸಚಿವಾಲಯ ಸ್ಪಷ್ಟಪಡಿಸಿದೆ. ಈಗಾಗಲೇ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಸಚಿವಾಲಯ ತಿಳಿಸಿದೆ.ಭಾರತೀಯ ಎಲ್‌ಪಿಜಿ ವಿತರಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪವನ್ ಸೋನಿ ಮಾತನಾಡಿ, ಪಶ್ಚಿಮ ಏಷ್ಯಾದ ಪರಿಸ್ಥಿತಿ ಅನಿಶ್ಚಿತವಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಎಲ್‌ಪಿಜಿ ಆಮದು ಪ್ರಮಾಣ ಎಷ್ಟಿರಲಿದೆ ಎಂಬುದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಹೀಗಾಗಿ ಬೇಡಿಕೆಗೆ ಅನುಗುಣವಾಗಿ ಪೂರೈಕೆ ಮಾಡಲು ಅಗತ್ಯವಿರುವ ಶೇಖರಣಾ ಸಾಮರ್ಥ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.

14.2 ಕೆ.ಜಿ. ಸಾಮರ್ಥ್ಯದ ಹೊಸ ಎಲ್‌ಪಿಜಿ ಸಂಪರ್ಕಗಳನ್ನು ಸದ್ಯ ನೀಡದ ಹಿನ್ನೆಲೆಯಲ್ಲಿ, 5 ಕೆ.ಜಿ. ಹಾಗೂ 10 ಕೆ.ಜಿ. ಸಾಮರ್ಥ್ಯದ ಕಾಂಪೋಸಿಟ್ ಸಿಲಿಂಡರ್‌ಗಳತ್ತ ಗ್ರಾಹಕರು ಮುಖ ಮಾಡಿದ್ದಾರೆ. ಹೊಸ ಸಂಪರ್ಕಕ್ಕಾಗಿ ಆಗಮಿಸುವ ಗ್ರಾಹಕರಿಗೆ ಈ ಸಣ್ಣ ಗಾತ್ರದ ಸಿಲಿಂಡರ್‌ಗಳನ್ನು ನೀಡಲು ಏಜೆನ್ಸಿಗಳು ಮುಂದಾಗಿದ್ದು, ಇವುಗಳಿಗೆ ಬೇಡಿಕೆಯೂ ಹೆಚ್ಚಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now