Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಐಸಿಸಿ ಅಧ್ಯಕ್ಷರ ಅವಮಾನ ಖಂಡಿಸಿ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಸೆ. 01 : ಉತ್ತರಾಖಂಡದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ್ದ ಸಾರ್ವಜನಿಕ ಕಾರ್ಯಕ್ರಮದ ಸ್ಥಳವನ್ನು ಬಿಜೆಪಿ ಮತ್ತು ಆರ್‍ಎಸ್‍ಎಸ್ ಬೆಂಬಲಿತರು “ಶುದ್ಧೀಕರಣ” ಗೊಳಿಸಿದ್ದಾರೆ ಎಂದು ಆರೋಪಿಸಿ, ಇದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾಧಿಕಾರಿಗಳ ಕಚೇರಿ ವೃತ್ತದಲ್ಲಿನ ಕಾಂಗ್ರೆಸ್ ಕಚೇರಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಪದಾಧಿಕಾರಿಗಳು ಮುಖಂಡರು, ದಾರಿಯುದ್ದಕ್ಕೂ ಬಿಜೆಪಿ ವಿರುದ್ದ ಘೋಷಣೆಗಳನ್ನು ಕೂಗಲಾಯಿತು.

ಡಾ. ಬಿ.ಆರ್. ಅಂಬೇಡ್ಕರ್ ಅವರ ಸ್ಮಾರಕಕ್ಕೆ ತೆರಳಿ ಗೌರವ ಸಲ್ಲಿಸಿ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ರಘುಮೂರ್ತಿ ಕಾಂಗ್ರೆಸ್ ನಾಯಕರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದಲ್ಲಿ ಕಾರ್ಯಕ್ರಮ ಮುಗಿಸಿ ತೆರಳಿದ ನಂತರ ಬಿಜೆಪಿ ಹಾಗೂ ಆರ್‍ಎಸ್‍ಎಸ್ ಕಾರ್ಯಕರ್ತರು ಆ ಸ್ಥಳದಲ್ಲಿ ಅಸ್ಪೃಶ್ಯತೆಯನ್ನು ಆಚರಿಸುವ ರೀತಿಯಲ್ಲಿ ಶುದ್ಧೀಕರಣ ನಡೆಸಿದ್ದಾರೆ ಇಂದು ಖಂಡನೀಯ. ಈ ಕೃತ್ಯವು ಸಂವಿಧಾನ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ವಿರುದ್ಧ ವಾದದ್ದು ಎಂದು ಕಿಡಿಕಾರಿದರು.

ಆರ್‍ಎಸ್‍ಎಸ್ ಹಾಗೂ ಬಿಜೆಪಿ ಬೆಂಬಲಿತರು ನಡೆಸಿರುವ ಈ ಕೃತ್ಯವು ಸಮಾಜದಲ್ಲಿ ಅಸ್ಪೃಶ್ಯತೆ ಮತ್ತು ಅಸ್ಪೃಶ್ಯತೆಯ ಆಚರಣೆಯನ್ನು ಪ್ರೋತ್ಸಾಹಿಸುವಂತಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಸಮಾನತೆ ಮತ್ತು ನ್ಯಾಯವನ್ನು ಒದಗಿಸಿದ್ದಾರೆ. ಆದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಮತ್ತು ಸಂಘ ಪರಿವಾರದ ಮನಸ್ಥಿತಿ ಸಂವಿಧಾನದ ಆಶಯಗಳಿಗೆ ಧಕ್ಕೆ ತರುತ್ತಿದೆ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಗಿರುವ ಅವಮಾನವು ಕೇವಲ ವ್ಯಕ್ತಿಗೆ ಆದ ಅವಮಾನವಲ್ಲ, ಬದಲಿಗೆ ಇಡೀ ಸಮಾಜ ಹಾಗೂ ಸಂವಿಧಾನಕ್ಕೆ ಎಸಗಿದ ಅವಮಾನವಾಗಿದೆ. ಪಕ್ಷಾತೀತವಾಗಿ ಪ್ರತಿಯೊಬ್ಬ ಜನಪ್ರತಿನಿಧಿ ಹಾಗೂ ನಾಗರಿಕರು ಇಂತಹ ಅಸ್ಪೃಶ್ಯತೆಯ ಆಚರಣೆ ಮತ್ತು ಸಂವಿಧಾನ ವಿರೋಧಿ ಕೃತ್ಯಗಳನ್ನು ಖಂಡಿಸಬೇಕು. ಸಂವಿಧಾನ ಮತ್ತು ಪ್ರಜಾರಾಜಕೀಯ ಮೌಲ್ಯಗಳ ರಕ್ಷಣೆಗಾಗಿ ಕಾಂಗ್ರೆಸ್ ಪಕ್ಷವು ಬೀದಿಗಿಳಿದು ಹೋರಾಟ ಮುಂದುವರಿಸಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು

ಉತ್ತರಾಖಂಡದಲ್ಲಿ ನಡೆದ ಈ ಘಟನೆಯನ್ನು ಪ್ರಶ್ನಿಸಿ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧವೇ ಎಫ್‍ಐಆರ್ ದಾಖಲಿಸಿರುವುದು ಕಾನೂನುಬಾಹಿರ ಹಾಗೂ ಖಂಡನೀಯ. ಅನ್ಯಾಯವನ್ನು ಪ್ರಶ್ನಿಸಿದವರ ಮೇಲೆಯೇ ಪ್ರಕರಣ ದಾಖಲಿಸುವುದು ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ ಎಂದು ರಘುಮೂರ್ತಿ ದೂರಿದರು.

ನಗರಾಭೀವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಬಿ.ಟಿ.ಜಗದೀಶ್ ಮಾತನಾಡಿ, ಉತ್ತರಖಂಡದಲ್ಲಿ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಭಟನೆ ನಡೆಸಿದ್ದ ಸ್ಥಳವನ್ನು ಶುದ್ಧೀಕರಣ ಮಾಡುವ ಮೂಲಕ ಬಿಜೆಪಿ, ಆರ್‍ಎಸ್‍ಎಸ್ ಹಾಗೂ ಮನುವಾದಿ ಮನಸ್ಥಿತಿಯ ಶಕ್ತಿಗಳು ಹಿಂದುಳಿದ ಮತ್ತು ದಲಿತ ಸಮುದಾಯಗಳಿಗೆ ಅಪಮಾನ ಎಸಗಿವೆ ಈ ಕೃತ್ಯವು ಅಸ್ಪೃಶ್ಯತೆ ಮತ್ತು ಕೋಮುವಾದಿ ನೀತಿಯನ್ನು ಪ್ರದರ್ಶಿಸುತ್ತದೆ ಎಂದು ಕಳವಳ ವ್ಯಕ್ತಪಡಿಸಿ ಬಿಜೆಪಿ ಸರ್ಕಾರವು ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಹಾಗೂ ಸಮಾನತೆಯ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಮನುವಾದಿ ಶಕ್ತಿಗಳನ್ನು ಪೋಷಿಸುತ್ತಾ, ಸಮಾಜದಲ್ಲಿ ವರ್ಗಭೇದ ಮತ್ತು ಜಾತಿ ಸಂಘರ್ಷವನ್ನು ಪ್ರಚೋದಿಸುತ್ತಿದೆ ಎಂದು ನಾಯಕರು ವಾಗ್ದಾಳಿ ನಡೆಸಿದರು.

ದೇಶದ ಪರವಾಗಿ ನಿರಂತರ ಹೋರಾಟ ಮಾಡುತ್ತಿರುವ ರಾಹುಲ್ ಗಾಂಧಿ ಅವರ ವಿರುದ್ಧ ಎಫ್‍ಐಆರ್ ದಾಖಲಿಸಿರುವುದನ್ನು ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದರು. ಕೇಂದ್ರದ ನರೇಂದ್ರ ಮೋದಿ ಸರ್ಕಾರ ಹಾಗೂ ಉತ್ತರಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಆಡಳಿತಾವಧಿಯಲ್ಲಿ ದಮನಿತರ ಮನಸ್ಸಿಗೆ ತೀವ್ರ ನೋವು ಉಂಟುಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ದೇಶದಲ್ಲಿ ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯಲು ಹಾಗೂ ಇಂತಹ ಮನುವಾದಿ ಮತ್ತು ಕೋಮುವಾದಿ ಶಕ್ತಿಗಳನ್ನು ಅಧಿಕಾರದಿಂದ ಕಿತ್ತೊಗೊಯಲು ನಾಗರಿಕರು ಜಾಗೃತರಾಗಬೇಕು. ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಿ ಸಂವಿಧಾನಾತ್ಮಕ ಆಶಯಗಳನ್ನು ರಕ್ಷಿಸುವುದೇ ಈ ಪ್ರತಿಭಟನೆಯ ಮುಖ್ಯ ಉದ್ದೇಶವಾಗಿದೆ ಎಂದರು.

ಈ ಪ್ರತಿಭಟನೆಯಲ್ಲಿ ಶಾಸಕರಾದ ಕೆ.ಸಿ.ವೀರೇಂದ್ರ ಪಪ್ಪಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ತಾಜ್‍ಪೀರ್, ಕಾರ್ಯಾಧ್ಯಕ್ಷರಾದ ಹಾಲಸ್ವಾಮಿ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ರಘು, ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಶಿವಣ್ಣ ಗಂಜಿಗಟ್ಟೆ,ಅದಿ ಜಾಂಭವ ಅಭೀವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಎಸ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್ ಮೈಲಾರಪ್ಪ, ನಗರಾಭೀವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಆರ್.ಕೆ.ಸರ್ದಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಾರೇಹಳ್ಳಿ ಉಲ್ಲಾಸ್, ಜಿ.ಪಂ.ಮಾಜಿ ಅಧ್ಯಕ್ಷರಾದ ಶಶಿಕಲಾ ಸುರೇಶ್ ಬಾಬು, ಓಬಿಸಿ ಅಧ್ಯಕ್ಷ ಎನ್.ಡಿ.ಕುಮಾರ್, ನ್ಯಾಯವಾದಿ ಘಟಕದ ಮಾಜಿ ಅಧ್ಯಕ್ಷರಾದ ಶಶಾಂಕ ಮೂರ್ತಿ, ಉಪಾಧ್ಯಕ್ಷರಾದ ರವಿಕುಮಾರ್, ಮುಖಂಡರಾದ ಮರುಳಾರಾಧ್ಯ, ಜಿ.ಎಸ್.ಕುಮಾರಗೌಡ, ಖುದ್ದುಸ್, ಹನೀಫ್, ಚಾಂದ್‍ಪೀರ್, ಕಂದಿಕೆರೆ ಸುರೇಶ್ ಬಾಬು, ವೆಂಕಟೇಶ್ ಜಾಹ್ನವಿ ನಾಗರಾಜು, ಜಿ.ಪಂ.ಮಾಜಿ ಸದಸ್ಯರ ನರಸಿಂಹರಾಜು, ಎಸ್.ಎಂ.ಎಲ್.ತಿಪ್ಪೇಸ್ವಾಮಿ, ಚೋಟು, ಲಕ್ಷ್ಮೀಕಾಂತ, ಚಿತ್ರದುರ್ಗ ತಾಲ್ಲೂಕು ಗ್ಯಾರೆಂಟಿ ಅಧ್ಯಕ್ಷರಾದ ಪ್ರಕಾಶ್, ನಗರಸಭೆಯ ಮಾಜಿ ಅಧ್ಯಕ್ಷರಾದ ಸಿ.ಟಿ.ಕೃಷ್ಣಮೂರ್ತಿ, ನಿರಂಜನ ಮೂರ್ತಿ, ಅಲ್ಲಾಭಕ್ಷಿ ಕುಶಲ ಕರ್ಮಿ ರಾಜ್ಯಾಧ್ಯಕ್ಷ ಪ್ರಸನ್ನ ಕುಮಾರ್ ಸೇರಿದಂತೆ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now