ಬೆಂಗಳೂರು.ಸೆಪ್ಟೆಂಬರ್.01: ಪದವಿ ಹಾಗೂ ಪಿಯುಸಿ ಸೇರಿದಂತೆ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಭರ್ಜರಿ ಉದ್ಯೋಗಾವಕಾಶ ನೀಡಲು ಸಜ್ಜಾಗಿದೆ. ವಿವಿಧ ಇಲಾಖೆಗಳ ತಾಂತ್ರಿಕೇತರ ಹಾಗೂ ತಾಂತ್ರಿಕ ಒಟ್ಟು 4,744 ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ ತಿಂಗಳಲ್ಲೇ ಅಧಿಸೂಚನೆ ಹೊರಡಿಸಲು ಸಿದ್ಧತೆ ನಡೆದಿದೆ.
ಈ ನೇಮಕಾತಿಗೆ ಸಂಬಂಧಿಸಿದ ಲಿಖಿತ ಪರೀಕ್ಷೆಗಳನ್ನು ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ, ಐಎಎಸ್ ತಿಳಿಸಿದ್ದಾರೆ.

ಯಾವ ಹುದ್ದೆಗಳಿಗೆ ನೇಮಕಾತಿ?
ಪ್ರಸ್ತುತ ಲಭ್ಯವಿರುವ ಮಾಹಿತಿಯಂತೆ,
ಪದವಿ ಮಟ್ಟದ ತಾಂತ್ರಿಕೇತರ ಹುದ್ದೆಗಳು – 2,421
ಪಿಯುಸಿ ಮಟ್ಟದ ತಾಂತ್ರಿಕೇತರ ಹುದ್ದೆಗಳು – 2,062

ತಾಂತ್ರಿಕ ಹುದ್ದೆಗಳು – 261
ಒಟ್ಟು 4,744 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಮುಂದಿನ ದಿನಗಳಲ್ಲಿ ಇನ್ನಷ್ಟು ಇಲಾಖೆಗಳು ಹಾಗೂ ಹೊಸ ಹುದ್ದೆಗಳು ಈ ನೇಮಕಾತಿ ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆಯೂ ಇದೆ ಎಂದು ತಿಳಿಸಲಾಗಿದೆ.
ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ
ಯಾವ ಇಲಾಖೆಯಲ್ಲಿ ಯಾವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು, ಹುದ್ದೆವಾರು ವಿದ್ಯಾರ್ಹತೆ ಸೇರಿದಂತೆ ಇತರ ವಿವರಗಳನ್ನು ಪ್ರಕಟಣೆಯಲ್ಲಿ ನೀಡಲಾಗಿದೆ. ಪಠ್ಯಕ್ರಮದ ವಿವರಗಳನ್ನೂ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈಗಿನಿಂದಲೇ ಅಧ್ಯಯನ ಆರಂಭಿಸುವಂತೆ ಸೂಚಿಸಲಾಗಿದೆ.
ನೇಮಕಾತಿಯ ವಯೋಮಿತಿ, ಅರ್ಜಿ ಸಲ್ಲಿಕೆ ದಿನಾಂಕ, ಶುಲ್ಕ, ಹುದ್ದೆವಾರು ವಿದ್ಯಾರ್ಹತೆ, ಪರೀಕ್ಷಾ ವಿಧಾನ ಹಾಗೂ ಇತರ ಸಂಪೂರ್ಣ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗುತ್ತದೆ.

ಅಭ್ಯರ್ಥಿಗಳು ಕೆಇಎಯ ಅಧಿಕೃತ ಪ್ರಕಟಣೆ ಹಾಗೂ ಅಧಿಸೂಚನೆಯನ್ನು ಪರಿಶೀಲಿಸಿ, ಹುದ್ದೆ ಮತ್ತು ವಿದ್ಯಾರ್ಹತೆಗೆ ಅನುಗುಣವಾಗಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
#KEA Recruitment:
ಪದವಿ ಹಾಗೂ ಪಿಯುಸಿ- ತತ್ಸಮಾನ ವಿದ್ಯಾರ್ಹತೆ ಹೊಂದಿರುವ ತಾಂತ್ರಿಕೇತರ ಹಾಗೂ ತಾಂತ್ರಿಕ- ಒಟ್ಟು 4,744 ಹುದ್ದೆಗಳ ನೇಮಕಾತಿಗೆ ಈ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗುತ್ತದೆ.
ಈ ಹುದ್ದೆಗಳಿಗೆ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಲಿಖಿತ ಪರೀಕ್ಷೆ ಕೂಡ ನಡೆಸಲು ಸಿದ್ಧತೆ ನಡೆದಿದೆ.
ಯಾವ ಇಲಾಖೆಯ ಯಾವ ಹುದ್ದೆಗೆಳಿಗೆ…
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) September 1, 2026













