Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಖರ್ಗೆ ಭಾಷಣದ ಸ್ಥಳ ಸ್ವಚ್ಛಗೊಳಿಸಿದ ಆರೋಪ:ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 01 : ಸಂವಿಧಾನ ವಿರೋಧಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್‍ನಿಂದ ಮಂಗಳವಾರ ಪ್ರತಿಭಟನೆ ನಡೆಸಿ ಪ್ರಧಾನಿ ನರೇಂದ್ರಮೋದಿ ಹಾಗೂ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‍ಸಿಂಗ್‍ಧಾಮಿ ವಿರುದ್ದ ಧಿಕ್ಕಾರಗಳನ್ನು ಕೂಗಲಾಯಿತು.

sಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ ನಂತರ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಎಐಸಿಸಿ. ಅಧ್ಯಕ್ಷ
ಮಲ್ಲಿಕಾರ್ಜುನಖರ್ಗೆರವರು ಉತ್ತರಾಖಂಡದಲ್ಲಿ ಭಾಷಣ ಮಾಡಿದ ಸ್ಥಳವನ್ನು ಮನುವಾದಿಗಳು ಸ್ವಚ್ಚಗೊಳಿಸಿ ಅಸ್ಪøಶ್ಯತೆಯನ್ನು ಇನ್ನು ಜೀವಂತವಾಗಿಟ್ಟಿದ್ದಾರೆ. ಇದನ್ನು ಪ್ರಶ್ನಿಸಿ ನ್ಯಾಯ ಕೇಳಿದ ದೇಶದ ಭರವಸೆಯ ನಾಯಕ ರಾಹುಲ್‍ಗಾಂಧಿ ಮೇಲೆ ಎಫ್.ಐ.ಆರ್.ದಾಖಲಿಸಿರುವುದು ಅತ್ಯಂತ ಖಂಡನೀಯ ಎಂದರು.

ಉನ್ನತ ಸ್ಥಾನದಲ್ಲಿರುವ ಮಲ್ಲಿಕಾರ್ಜುನ ಖರ್ಗೆರವರಿಗೆ ಈ ರೀತಿ ಅವಮಾನ ಮಾಡಿದರೆ ಇನ್ನು ಜನಸಾಮಾನ್ಯರ ಪಾಡೇನು. ಕಾನೂನು ಎತ್ತ ಸಾಗುತ್ತಿದೆ ಎನ್ನುವುದನ್ನು ಪ್ರತಿಯೊಬ್ಬರು ಪ್ರಶ್ನಿಸಬೇಕಿದೆ. ಎಲ್ಲಾ ಪಕ್ಷದಲ್ಲಿನ ಜನಪ್ರತಿನಿಧಿಗಳು ಇಂತಹ ಹೇಯ ಕೃತ್ಯವನ್ನು ಖಂಡಿಸಬೇಕೆಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ ಮಲ್ಲಿಕಾರ್ಜುನ ಖರ್ಗೆರವರು ಭಾಷಣ ಮಾಡಿದ ಜಾಗವನ್ನು ಆರ್.ಎಸ್.ಎಸ್. ಬಿಜೆಪಿ. ಮನುವಾದಿಗಳು ಸೇರಿಕೊಂಡು ಸ್ವಚ್ಚಗೊಳಿಸಿ ಸಂವಿಧಾನಕ್ಕೆ ಅಪಮಾನವೆಸಗಿರುವುದಲ್ಲದೆ ಕಾಂಗ್ರೆಸ್ ಯುವ ನಾಯಕ ರಾಹುಲ್‍ಗಾಂಧಿ ಮೇಲೆ ಎಫ್.ಐ.ಆರ್.ದಾಖಲಿಸಿರುವುದನ್ನು ಹಿಂದಕ್ಕೆ ಪಡೆಯಬೇಕು. ಇಲ್ಲವಾದಲ್ಲಿ ನಮ್ಮ ಹೋರಾಟ ನಿರಂತರವಾಗಿತ್ತದೆಂದು ಎಚ್ಚರಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಟಿ.ಜಗದೀಶ್ ಮಾತನಾಡುತ್ತ ಉತ್ತರಾಖಂಡದಲ್ಲಿ ಮಲ್ಲಿಕಾರ್ಜುನಖರ್ಗೆರವರು ಭಾಷಣ ಮಾಡಿದ ಸ್ಥಳವನ್ನು ಆರ್.ಎಸ್.ಎಸ್. ಮನುವಾದಿಗಳು ಹಾಗೂ ಬಿಜೆಪಿ.ಯವರು ಕೂಡಿಕೊಂಡು ಸ್ವಚ್ಚಗೊಳಿಸಿ ಶೋಷಿತರಿಗೆ ದಲಿತರಿಗೆ ಅವಮಾನವೆಸಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಕೇಂದ್ರ ಸರ್ಕಾರವನ್ನು ಕಿತ್ತೆಸೆದು ತಕ್ಕ ಪಾಠ ಕಲಿಸಬೇಕಿದೆ. ಇಂತಹ ವರ್ಣಬೇಧ ನೀತಿ ದೇಶದ ಸಾಮರಸ್ಯಕ್ಕೆ ಹಾನಿಯುಂಟು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಕೆ.ಸಿ.ವೀರೇಂದ್ರಪಪ್ಪಿ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಸಫಾಯಿ ಕರ್ಮಚಾರಿ ವಿಭಾಗದ ಅಧ್ಯಕ್ಷ ಪಿ.ರಘು, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶ್‍ಬಾಬು, ಕಂದಿಕೆರೆ ಸುರೇಶ್‍ಬಾಬು, ಸೈಯದ್ ಅಲ್ಲಾಭಕ್ಷಿ, ನಗರಸಭೆ ಮಾಜಿ ಅಧ್ಯಕ್ಷರುಗಳಾದ ಸಿ.ಟಿ.ಕೃಷ್ಣಮೂರ್ತಿ, ಹೆಚ್.ಸಿ.ನಿರಂಜನಮೂರ್ತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ನರಸಿಂಹರಾಜ, ಯುವ ಕಾಂಗ್ರಸ್ ಜಿಲ್ಲಾಧ್ಯಕ್ಷ ಕಾರೆಹಳ್ಳಿ ಉಲ್ಲಾಸ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಮರುಳಾರಾಧ್ಯ, ಸೈಯದ್ ಖುದ್ದೂಸ್, ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಮರ್ಥರಾಯ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ಸೈಯದ್ ವಲಿಖಾದ್ರಿ, ನಾಗರಾಜ್ ಜಾನ್ಹವಿ, ನ್ಯಾಯವಾದಿಗಳಾದ ಸುದರ್ಶನ್, ಎನ್.ಶಶಾಂಕ್, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ಬಸಮ್ಮ, ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now