Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಸಮಾಜವಾದಿ ಪಕ್ಷಕ್ಕೆ ಅಫಾಖ್ ಅಹಮದ್ ಸೇರ್ಪಡೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 01 : ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಮ್ಯಾನೇಜರ್ ಆಗಿ ನಿವೃತ್ತಿ ಹೊಂದಿದ ಸೈಯದ್ ಅಫಾಖ್ ಅಹಮದ್ ಸಮಾಜವಾದಿ ಪಾರ್ಟಿಗೆ ಮಂಗಳವಾರ ಸೇರ್ಪಡೆಯಾದರು.

ಪ್ರವಾಸಿ ಮಂದಿರದಲ್ಲಿ ಅಫಾಖ್ ಅಹಮದ್ ಹಾಗೂ ಶಬ್ಬೀರ್ ಅಹಮದ್ ಇವರುಗಳನ್ನು ಸಮಾಜವಾದಿ ಪಾರ್ಟಿಗೆ ಬರಮಾಡಿಕೊಂಡು ಮಾತನಾಡಿದ ಜಿಲ್ಲಾಧ್ಯಕ್ಷ
ಎಸ್.ಲಕ್ಷ್ಮಿಕಾಂತ್ ಮುಲಾಯಂಸಿಂಗ್ ಯಾದವ್‍ರವರು 1994 ರಲ್ಲಿ ಸಮಾಜವಾದಿ ಪಾರ್ಟಿಯನ್ನು ಹುಟ್ಟುಹಾಕಿ ರಾಜ್ಯಾದ್ಯಂತ ಸೈಕಲ್‍ನಲ್ಲಿ ಸಂಚರಿಸಿ ಪಾರ್ಟಿಯನ್ನು ಸಂಘಟನೆಗೊಳಿಸಿದರು. ಅವರ ಪುತ್ರ ಅಖಿಲೇಶ್‍ಯಾದವ್ ಉತ್ತರಪ್ರದೇಶದಲ್ಲಿ 37 ಸ್ಥಾನಗಳನ್ನು ಪಡೆದುಕೊಂಡಿದ್ದಾರೆ. ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವುದು ಸಮಾಜವಾದಿ ಪಾರ್ಟಿಯ ಮೂಲ ಉದ್ದೇಶ ಎಂದು ತಿಳಿಸಿದರು.
ಕೇಂದ್ರದಲ್ಲಿರುವ ಬಿಜೆಪಿ. ಸರ್ಕಾರ ಲೂಟಿ ಹೊಡೆಯುತ್ತಿದೆ. ನೀಟ್ ಪರೀಕ್ಷೆಯಲ್ಲಿನ ಅಕ್ರಮದಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಶ್ರೀಮಂತರ ಪರವಾಗಿರುವ ಬಿಜೆಪಿ.ಯನ್ನು ಕಿತ್ತೊಗೆದು ಮುಂದಿನ ಚುನಾವಣೆಯಲ್ಲಿ ಸಮಾಜವಾದಿ ಪಾರ್ಟಿ ಕೇಂದ್ರದಲ್ಲಿ ಗದ್ದುಗೆ ಹಿಡಿಯಲಿದೆ ಎಂದು ಹೇಳಿದರು.

ಸಮಾಜವಾದಿ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಡಿ.ಗುರುಮೂರ್ತಿ ಮಾತನಾಡಿ ಜಿಲ್ಲೆಯ ಮೂರು ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಿರುವ ರಾಜ್ಯ ಸರ್ಕಾರ ಚಿತ್ರದುರ್ಗ, ಹೊಳಲ್ಕೆರೆ, ಮೊಳಕಾಲ್ಮುರು ತಾಲ್ಲೂಕನ್ನು ಬರಪೀಡಿತವೆಂದು ಘೋಷಿಸದೆ ರೈತರಿಗೆ ಅನ್ಯಾಯವೆಸಗುತ್ತಿದೆ. ದಾವಣಗೆರೆ ಜಿಲ್ಲೆಯ ಜಗಳೂರು ಸೇರಿದಂತೆ ನಮ್ಮ ಜಿಲ್ಲೆಯ ಮೂರು ತಾಲ್ಲೂಕುಗಳನ್ನು ಕೂಡಲೆ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಇಲ್ಲವಾದಲ್ಲಿ ವಿಧಾನಸೌಧಕ್ಕೆ ಅಭಿಯಾನ ಹೊರಡಲಾಗುವುದೆಂದು ಎಚ್ಚರಿಸಿದರು.

ಸಮಾಜವಾದಿ ಪಾರ್ಟಿಗೆ ಸೇರ್ಪಡೆಯಾಗಿ ಮಾತನಾಡಿದ ಸೈಯದ್ ಅಫಾಖ್ ಅಹಮದ್ ಕಾಂಗ್ರೆಸ್‍ನಲ್ಲಿ ಸೇವೆ ಸಲ್ಲಿಸಿ ಎಂಎಲ್‍ಸಿ. ಚುನಾವಣೆಗೆ ಟಿಕೇಟ್ ಕೇಳಿದೆ. ನನ್ನ ಮನವಿಯನ್ನು ತಿರಸ್ಕರಿಸಿದ ಪರಿಣಾಮ ಬೇಸರಗೊಂಡು ಸಮಾಜವಾದಿ ಪಾರ್ಟಿಯ ತತ್ವ ಸಿದ್ದಾಂತ ಒಪ್ಪಿ ಸೇರ್ಪಡೆಯಾಗಿದ್ದೇನೆಂದು ಹೇಳಿದರು.
ಸಮಾಜವಾದಿ ಪಾರ್ಟಿ ಎಸ್ಸಿ. ಘಟಕದ ಅಧಕ್ಷ ರವಿ ಟಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮೆಹಬೂಬ್‍ಪಾಷ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now