Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್‌ಐಆರ್ ವಿರೋಧಿ ‘ಚುನಾವಣಾ ಆಯೋಗ ಚಲೋ’: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು ಹೋರಾಟಗಾರರು ಪೊಲೀಸ್ ವಶಕ್ಕೆ

---Advertisement---

ರಾಜ್ಯದ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುತ್ತಿರುವುದನ್ನು ಖಂಡಿಸಿ ಎಸ್‌ಐಆರ್ ವಿರೋಧಿ ಒಕ್ಕೂಟ ನಡೆಸಿದ ‘ಚುನಾವಣಾ ಆಯೋಗ ಚಲೋ’ ಹೋರಾಟದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು ಎಸ್‌ಐಆರ್ ಸಂತ್ರಸ್ತರು, ಹೋರಾಟಗಾರರು ಹಾಗೂ ಚಿಂತಕರನ್ನು ಪೊಲೀಸರು ವಶಕ್ಕೆ ಪಡೆದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಸ್‌ಐಆರ್ ವಿರೋಧಿ ಒಕ್ಕೂಟದ ವತಿಯಿಂದ ಧರಣಿ ನಡೆಯುತ್ತಿತ್ತು. ಧರಣಿ ಸ್ಥಳಕ್ಕೆ ಚುನಾವಣಾ ಆಯೋಗದ ಪ್ರತಿನಿಧಿಗಳು ಆಗಮಿಸಿ ಪ್ರತಿಭಟನಾಕಾರರ ಅಹವಾಲು ಆಲಿಸಬೇಕೆಂದು ಒಕ್ಕೂಟ ಆಹ್ವಾನಿಸಿತ್ತು. ಆದರೆ ಆಯೋಗದ ಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸದ ಹಿನ್ನೆಲೆಯಲ್ಲಿ ಪ್ರಕಾಶ್ ರಾಜ್ ನೇತೃತ್ವದಲ್ಲಿ ಪ್ರತಿಭಟನಾಕಾರರು ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು.

ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದು, ನಟ ಪ್ರಕಾಶ್ ರಾಜ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆದರು.
ಹೋರಾಟದಲ್ಲಿ ನಟ ಕಿಶೋರ್ ಕುಮಾರ್, ಹಿರಿಯ ಸಾಹಿತಿ ಎಲ್.ಎನ್. ಮುಕುಂದರಾಜ್, ದಸಂಸ ಹಿರಿಯ ನಾಯಕ ಎನ್. ವೆಂಕಟೇಶ್, ಜನಶಕ್ತಿ ರಾಜ್ಯಾಧ್ಯಕ್ಷ ನೂರ್ ಶ್ರೀಧರ್ ಸೇರಿದಂತೆ ದಲಿತ, ರೈತ, ಮಹಿಳಾ ಹಾಗೂ ಭಾಷಾ ಚಳವಳಿಯ ಹಲವು ಮುಖಂಡರು ಭಾಗವಹಿಸಿದ್ದರು.

ಪ್ರತಿಭಟನಾಕಾರರ ಪ್ರಮುಖ ಹಕ್ಕೊತ್ತಾಯಗಳು
ಸಮರ್ಪಕ ಕಾರಣವಿಲ್ಲದೆ ಯಾವುದೇ ಅರ್ಹ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಬಾರದು.
ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾಗಿರುವವರಿಗೆ ಅಪೀಲ್ ಸಲ್ಲಿಸಿ ಮತ್ತೆ ಸೇರ್ಪಡೆಗೊಳ್ಳಲು ಹೆಚ್ಚಿನ ಅವಕಾಶ ನೀಡಬೇಕು.
ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸಲು ಪ್ರತಿ ಬೂತ್‌ನ ಪ್ರತಿ ಮನೆಗೂ ತಲುಪುವ ವಿಶೇಷ ಅಭಿಯಾನ ನಡೆಸಬೇಕು.
ಬೇರೆ ಪ್ರದೇಶಗಳಿಂದ ಬಂದು ಪ್ರಸ್ತುತ ಸ್ಥಳದಲ್ಲಿ ನೆಲೆಸಿರುವ ಮತದಾರರಿಗೆ ಫಾರಂ-8 ಮೂಲಕ ವಿಳಾಸ ಬದಲಾವಣೆಗೆ ಅವಕಾಶ ಕಲ್ಪಿಸಬೇಕು.
ನೋಟಿಸ್ ನೀಡಲಾಗುತ್ತಿರುವ 43 ಲಕ್ಷ ಮತದಾರರ ಹೆಸರುಗಳನ್ನು ಕಾರಣಗಳೊಂದಿಗೆ ಪ್ರಕಟಿಸಬೇಕು. ಅವರನ್ನು ಅಪರಾಧಿಗಳಂತೆ ನಡೆಸಿಕೊಳ್ಳಬಾರದು.
ಮತದಾರರಿಂದ ಎರಡು ದಾಖಲೆಗಳಿಗಿಂತ ಹೆಚ್ಚಿನ ದಾಖಲೆಗಳನ್ನು ಕೇಳಬಾರದು.
ಗ್ರಾಮ ಹಾಗೂ ವಾರ್ಡ್ ಸಭೆಗಳನ್ನು ಸಮರ್ಪಕ ಪ್ರಚಾರದೊಂದಿಗೆ ಅರ್ಥಪೂರ್ಣವಾಗಿ ನಡೆಸಬೇಕು.
ರಾಜ್ಯದಲ್ಲಿ ಚುನಾವಣೆ ನಡೆಯಲು ಇನ್ನೂ ಸಾಕಷ್ಟು ಸಮಯವಿರುವುದರಿಂದ ಆಕ್ಷೇಪಣೆ ಹಾಗೂ ಮೇಲ್ಮನವಿ ಸಲ್ಲಿಕೆ ಅವಧಿಯನ್ನು ಆರು ತಿಂಗಳವರೆಗೆ ವಿಸ್ತರಿಸಬೇಕು ಎಂದು ಒತ್ತಾಯಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now