ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 02 : ನಗರದ ಕನಕ ನಗರ ನಿವಾಸಿ ಅನಸೂಯಮ್ಮ (72 ವರ್ಷ) ಇಂದು ಬೆಳಿಗ್ಗೆ 9 : 30 ನಿಧನರಾದರು. ಮೃತರು ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು ಸಂಜೆ 6 ಗಂಟೆಗೆ ನಗರದ ಹೊಳಲ್ಕೆರೆ ರಸ್ತೆಯ ಕನಕ ನಗರ ಸಮೀಪದ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.









