ದೆಹಲಿ, ಸೆಪ್ಟೆಂಬರ್.02: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಮೊದಲ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಆಗಿ ಭಾರತೀಯ ವಾಯುಪಡೆಯ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ. ಬುಧವಾರ ನಡೆದ ಬೆಳವಣಿಗೆಯಲ್ಲಿ ಅವರಿಗೆ ರಾಮಮಂದಿರ ಟ್ರಸ್ಟ್ನ ಆಡಳಿತಾತ್ಮಕ ಜವಾಬ್ದಾರಿ ವಹಿಸಲಾಗಿದೆ.
ಯಾರು ಈ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ?

ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ಅವರು ಭಾರತೀಯ ವಾಯುಪಡೆಯ ನಿವೃತ್ತ ಹಿರಿಯ ಅಧಿಕಾರಿಯಾಗಿದ್ದು, ಸರ್ವೋತ್ತಮ ಯುದ್ಧ ಸೇವಾ ಪದಕ (SYSM), ಅತಿ ವಿಶಿಷ್ಟ ಸೇವಾ ಪದಕ (AVSM) ಹಾಗೂ ವಿಶಿಷ್ಟ ಸೇವಾ ಪದಕ (VSM) ಸೇರಿದಂತೆ ಹಲವು ಗೌರವಗಳಿಗೆ ಭಾಜನರಾಗಿದ್ದಾರೆ.
38 ವರ್ಷಕ್ಕೂ ಹೆಚ್ಚು ಕಾಲ ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸಿರುವ ಅವರು ಹಲವು ಪ್ರಮುಖ ಕಮಾಂಡ್ ಹಾಗೂ ಸಿಬ್ಬಂದಿ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಫೈಟರ್ ಸ್ಕ್ವಾಡ್ರನ್ನ ಕಮಾಂಡಿಂಗ್ ಆಫೀಸರ್, ಏರ್ಕ್ರಾಫ್ಟ್ ಅಂಡ್ ಸಿಸ್ಟಮ್ಸ್ ಟೆಸ್ಟಿಂಗ್ ಎಸ್ಟಾಬ್ಲಿಷ್ಮೆಂಟ್ (ASTE)ನಲ್ಲಿ ಮುಖ್ಯ ಪರೀಕ್ಷಾ ಪೈಲಟ್, ಎರಡು ಮುಂಚೂಣಿ ವಾಯುನೆಲೆಗಳ ಏರ್ ಆಫೀಸರ್ ಕಮಾಂಡಿಂಗ್ ಸೇರಿದಂತೆ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.
ಇದಲ್ಲದೆ, ಡೈರೆಕ್ಟರ್ (ಆಪರೇಷನಲ್ ಪ್ಲಾನಿಂಗ್ ಅಂಡ್ ಅಸೆಸ್ಮೆಂಟ್ ಗ್ರೂಪ್), ಪ್ರಿನ್ಸಿಪಲ್ ಡೈರೆಕ್ಟರ್ (ASR), ಏರ್ ಹೆಡ್ಕ್ವಾರ್ಟರ್ಸ್ನಲ್ಲಿ ಅಸಿಸ್ಟೆಂಟ್ ಚೀಫ್ ಆಫ್ ಏರ್ ಸ್ಟಾಫ್ (ಪ್ರಾಜೆಕ್ಟ್ಸ್), ASTE ಕಮಾಂಡೆಂಟ್ ಹಾಗೂ ಡೆಪ್ಯುಟಿ ಚೀಫ್ ಆಫ್ ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್ (ಡಾಕ್ಟ್ರಿನ್, ಆರ್ಗನೈಸೇಷನ್ ಅಂಡ್ ಟ್ರೈನಿಂಗ್) ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಪ್ರಸ್ತುತ ಜವಾಬ್ದಾರಿ ವಹಿಸಿಕೊಳ್ಳುವ ಮೊದಲು ಅವರು ಡೆಪ್ಯುಟಿ ಚೀಫ್ ಆಫ್ ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್ (ಆಪರೇಷನ್ಸ್) ಆಗಿ ಕಾರ್ಯನಿರ್ವಹಿಸಿದ್ದರು. ಭಾರತೀಯ ವಾಯುಪಡೆಯ ವೆಸ್ಟರ್ನ್ ಏರ್ ಕಮಾಂಡ್ನ ಏರ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.
एयर मार्शल जितेंद्र मिश्रा होंगे राम मंदिर ट्रस्ट के CEO #RamMandirCEO | Ram Mandir CEO | Jitendra Mishra Air Marshal pic.twitter.com/WydyzOxohK
— News24 (@news24tvchannel) September 2, 2026












