ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 02 : ಮೇಜರ್ ಧ್ಯಾನ್ಚಂದ್ರವರ ಹುಟ್ಟುಹಬ್ಬದ ಪ್ರಯುಕ್ತ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದುರ್ಗ ಸ್ಟ್ರೈಕರ್ಸ್ ವಾಲಿಬಾಲ್ ಕ್ಲಬ್, ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ವತಿಯಿಂದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆದ ವಾಲಿಬಾಲ್ ಪಂದ್ಯಾವಳಿಯಲ್ಲಿ ನಗರದ ಪ್ರತಿಷ್ಠಿತ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ಹದಿನಾಲ್ಕು ವರ್ಷದೊಳಗಿನ ಜೂನಿಯರ್ ವಿಭಾಗದಲ್ಲಿ ಭಾಗವಹಿಸಿದ್ದ ಮಕ್ಕಳು ಪ್ರಥಮ ಸ್ಥಾನ ಗಳಿಸಿದರೆ ಸೀನಿಯರ್ ವಿಭಾಗದಲ್ಲಿ ಹದಿನೇಳು ವರ್ಷದ ಮಕ್ಕಳು ದ್ವಿತೀಯ ಸ್ಥಾನ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಶಾಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಹಾಗೂ ಪ್ರಾಂಶುಪಾಲರು, ನಿರ್ದೇಶಕರು, ಆಡಳಿತ ಮಂಡಳಿಯವರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ವರ್ಗದವರು ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿರುವ ಮಕ್ಕಳನ್ನು ಅಭಿನಂದಿಸಿದರು.










