Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರಿನಲ್ಲಿ ನಾಳೆ ಪ್ರಥಮ ಜಿಲ್ಲಾ ಮಟ್ಟದ ಪತ್ರಿಕಾ ವಿತರಕರ ದಿನಾಚರಣೆ

---Advertisement---

ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್. 03 : ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ (ರಿ), ಬೆಂಗಳೂರು, ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಿಕಾ ವಿತರಕರ/ಹಂಚಿಕೆದಾರರ ಸಂಘ (ರಿ) ಹಾಗೂ ಹಿರಿಯೂರು ತಾಲ್ಲೂಕು ಪತ್ರಿಕಾ ವಿತರಕರ ಸಂಘ (ರಿ) ಇವರ ಸಹಯೋಗದಲ್ಲಿ ಮೊಟ್ಟ ಮೊದಲ ಜಿಲ್ಲಾ ಮಟ್ಟದ ‘ಪತ್ರಿಕಾ ವಿತರಕರ ದಿನಾಚರಣೆ – 2026’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಸಮಾರಂಭವು 2026ರ ಸೆಪ್ಟೆಂಬರ್ 4ರ ನಾಳೆ ಬೆಳಿಗ್ಗೆ 11.30ಕ್ಕೆ ನಗರದ ನೆಹರು ಮೈದಾನದಲ್ಲಿರುವ ಎ. ಕೃಷ್ಣಪ್ಪ ರೋಟರಿ ಸಭಾ ಭವನದಲ್ಲಿ ಜರುಗಲಿದೆ.
ಕಾರ್ಯಕ್ರಮವನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಘುಮೂರ್ತಿ ಅವರು ಉದ್ಘಾಟಿಸಲಿದ್ದಾರೆ. ಹಿರಿಯೂರು ತಾಲ್ಲೂಕು ಪತ್ರಿಕಾ ವಿತರಕರ ಸಂಘದ ಅಧ್ಯಕ್ಷರಾದ ಎನ್. ನಾಗಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಚಿತ್ರದುರ್ಗ ಸಂಸದರಾದ ಗೋವಿಂದ ಎಂ. ಕಾರಜೋಳ, ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ (ಪಪ್ಪಿ), ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್ ಹಾಗೂ ಡಿ.ಟಿ. ಶ್ರೀನಿವಾಸ್ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದ ಅಧ್ಯಕ್ಷ ರಾಜಣ್ಣ, ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಡಾ. ಬೊಮ್ಮನಹಳ್ಳಿ ಬಾಬು, ಜೆಡಿಎಸ್ ಮುಖಂಡ ಜಯರಾಮಯ್ಯ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಂ. ಜಯಣ್ಣ, ನಿವೃತ್ತ ಎಂಡಿ ಸಣ್ಣ ಚಿತ್ತಯ್ಯ, ಕಾಂಗ್ರೆಸ್ ಯುವ ಮುಖಂಡ ಸುಹಾಸ್ ಸುಧಾಕರ್, ಮಾಜಿ ಜಿ.ಪಂ. ಸದಸ್ಯ ಸಿ.ಬಿ. ಪಾಪಣ್ಣ, ಹಿರಿಯ ಪತ್ರಕರ್ತ ಆಲೂರು ಹನುಮಂತರಾಯಪ್ಪ, ರೆಡ್ಕ್ರಾಸ್ ಸಂಸ್ಥೆಯ ಚೇರ್ಮನ್ ಹೆಚ್.ಎಸ್. ಸುಂದರರಾಜ್, ರೋಟರಿ ಅಧ್ಯಕ್ಷ ಹೆಚ್.ಡಿ. ವಸಂತ ಕುಮಾರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎಲ್. ಗಿರಿಧರ್, ತಹಶೀಲ್ದಾರ್ ಎಂ. ಸಿದ್ದೇಶ್, ಪೌರಾಯುಕ್ತ ಎ. ವಾಸಿಂ ಹಾಗೂ ಡಿವೈಎಸ್ಪಿ ಟಿ.ಎಂ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಸಂಘದ ರಾಜ್ಯಾಧ್ಯಕ್ಷ ಕೆ. ಶಂಭುಲಿಂಗ, ಪ್ರಧಾನ ಕಾರ್ಯದರ್ಶಿ ಸುರೇಶ್ ಪಿ., ಉಪಾಧ್ಯಕ್ಷ ಪ್ರಶಾಂತ್ ಕುಮಾರ್ ಎನ್., ತುಮಕೂರು ಜಿಲ್ಲಾ ಪತ್ರಿಕೆ ಹಂಚಿಕೆದಾರರ ಸಂಘದ ಅಧ್ಯಕ್ಷ ಚೆಲುವರಾಜ್ (ರಘು), ಪ್ರಧಾನ ಕಾರ್ಯದರ್ಶಿ ವಾಸುದೇವ್ ಎನ್. ನಾದೂರು, ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಿಕೆ ಹಂಚಿಕೆದಾರರ ವಿತರಕರ ಸಂಘದ ಅಧ್ಯಕ್ಷ ಎಸ್. ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಆರ್. ಹಾಗೂ ಸಂಚಾಲಕ ಎ.ಎನ್. ಕೃಷ್ಣಮೂರ್ತಿ ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮದಲ್ಲಿ ಪತ್ರಿಕಾ ರಂಗದ ಸಂಪಾದಕರು, ವರದಿಗಾರರು, ಪತ್ರಿಕಾ ವಿತರಕರು ಹಾಗೂ ಹಂಚಿಕೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘಟಕರು ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now