ಬೆಂಗಳೂರು.ಸೆಪ್ಟೆಂಬರ್.04: ರಾಜ್ಯದ ಜನರ ಭಾವನೆಗಳಿಗೆ ಸದಾ ಗೌರವ ನೀಡುವ ನಿಟ್ಟಿನಲ್ಲಿ, ವಿವಾದಕ್ಕೆ ಕಾರಣವಾಗಿದ್ದ ‘ಕರ್ನಾಟಕ ಉದ್ಯಾನವನಗಳ ಸಂರಕ್ಷಣೆ ತಿದ್ದುಪಡಿ ವಿಧೇಯಕ’ವನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ಸರ್ಕಾರದ ಈ ನಿರ್ಧಾರವು ಜನಪರ ಬದ್ಧತೆಗೆ ಸಾಕ್ಷಿಯಾಗಿದೆ ಎಂದಿದ್ದಾರೆ. ಸಾರ್ವಜನಿಕರ ಅಭಿಪ್ರಾಯ, ಆತಂಕ ಮತ್ತು ಕಳಕಳಿಗೆ ಮನ್ನಣೆ ನೀಡಿರುವ ಸರ್ಕಾರ, ವಿಧೇಯಕದ ಮೂಲ ಉದ್ದೇಶವನ್ನು ಇನ್ನಷ್ಟು ಸ್ಪಷ್ಟವಾಗಿ ಜನರ ಮುಂದಿಡಲು ನಿರ್ಧರಿಸಿದೆ. ಸಾರ್ವಜನಿಕರ ಸಲಹೆಗಳನ್ನು ಪರಿಗಣಿಸಿ, ಅಗತ್ಯ ತಿದ್ದುಪಡಿಗಳೊಂದಿಗೆ ಮುಂದಿನ ದಿನಗಳಲ್ಲಿ ವಿಧೇಯಕವನ್ನು ಮರು ಮಂಡಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ಅಂತಿಮ ನ್ಯಾಯಾಧೀಶರು. ಜನತಾ ನ್ಯಾಯಾಲಯದ ಮುಂದೆ ನಮ್ಮ ಸರ್ಕಾರದ ಉದ್ದೇಶವನ್ನು ಪ್ರಾಮಾಣಿಕವಾಗಿ ತೆರೆದಿಟ್ಟು, ಜನರ ವಿಶ್ವಾಸ ಗಳಿಸಿ ಮುನ್ನಡೆಯುವುದು ನಮ್ಮ ಸರ್ಕಾರದ ಮೂಲ ಧ್ಯೇಯವಾಗಿದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕದ ಜನತೆಯ ಭಾವನೆಗಳನ್ನು ನಮ್ಮ ಸರ್ಕಾರ ಸದಾ ಗೌರವಿಸುತ್ತದೆ.
ಕರ್ನಾಟಕ ಉದ್ಯಾನವನಗಳ ಸಂರಕ್ಷಣೆ ತಿದ್ದುಪಡಿ ವಿಧೇಯಕವನ್ನು ಹಿಂಪಡೆಯುವ ಸಚಿವ ಸಂಪುಟದ ನಿರ್ಧಾರವೂ ಇದೇ ಜನಪರ ಬದ್ಧತೆಯ ಪ್ರತೀಕ.
ಸಾರ್ವಜನಿಕರ ಅಭಿಪ್ರಾಯ, ಕಳಕಳಿ ಮತ್ತು ಭಾವನೆಗಳಿಗೆ ಬೆಲೆ ನೀಡಿ, ನಮ್ಮ ಉದ್ದೇಶವನ್ನು ಮತ್ತಷ್ಟು ಸ್ಪಷ್ಟವಾಗಿ ಜನರ ಮುಂದಿಡಲು ಹಾಗೂ…
— CM of Karnataka (@CMofKarnataka) September 3, 2026












