Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಸೆ. 6ರಂದು ಸಶಸ್ತ್ರ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

---Advertisement---

ಚಿತ್ರದುರ್ಗ. 04: ಚಿತ್ರದುರ್ಗ ನಗರ ವ್ಯಾಪ್ತಿಯ 4 ಪರೀಕ್ಷಾ ಕೇಂದ್ರಗಳಲ್ಲಿ ಸೆ.6 ರಂದು ನಡೆಯಲಿರುವ ಸಶಸ್ತ್ರ ಪೊಲೀಸ್ ಕಾನ್ಸ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ಜಿ.ಪಂ.ಸಿಇಓ ಹಾಗೂ ಉಸ್ತುವಾರಿ ಜಿಲ್ಲಾಧಿಕಾರಿ ಡಾ.ಆಕಾಶ್ ಆದೇಶ ಹೊರಡಿಸಿದ್ದಾರೆ.

ಕಾರ್ಯನಿರ್ವಾಹಕ ನಿರ್ದೇಶಕರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರು ಇವರ ವೇಳಾಪಟ್ಟಿಯಂತೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಹಾಗೂ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ 163ರ ಅಡಿಯಲ್ಲಿ ಈ ಆದೇಶ ಹೊರಡಿಸಲಾಗಿದ್ದು, ಕೇಂದ್ರಗಳ ಸುತ್ತಮುತ್ತಲಿರುವ ಎಲ್ಲಾ ಜಿರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಹಾಗೂ ಇಂಟರ್‍ನೆಟ್ ಕೇಂದ್ರಗಳನ್ನು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡ್ಡಾಯವಾಗಿ ಮುಚ್ಚುವಂತೆ ಸೂಚಿಸಲಾಗಿದೆ.

ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದ ಒಳಗೆ ಯಾವುದೇ ಕಾರಣಕ್ಕೂ ಮೊಬೈಲ್ ಪೋನ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿ.ಪಂ.ಸಿಇಓ ಹಾಗೂ ಉಸ್ತುವಾರಿ ಜಿಲ್ಲಾಧಿಕಾರಿ ಡಾ.ಆಕಾಶ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now