Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಶಾಖಾ ಕಾಲುವೆಗೆ ಭದ್ರಾ ಮೇಲ್ದಂಡೆ ಯೋಜನೆಯಡಿ ನೀರು: ನಿಯಮ ಮೀರಿ ಪಂಪ್‌ಸೆಟ್ ಅಳವಡಿಸಿದರೆ ಕಾನೂನು ಕ್ರಮ!

---Advertisement---

ಶಿವಮೊಗ್ಗ : ಸೆಪ್ಟಂಬರ್  05 :  ವಿಶ್ವೇಶ್ವರಯ್ಯ ಜಲ ನಿಗಮವು ಸರ್ಕಾರದ ಆದೇಶದನ್ವಯ ಸೆ.06ರಿಂದ ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಅಜ್ಜಂಪುರ ಮುಖಾಂತರ ಚಿತ್ರದುರ್ಗ ಶಾಖಾ ಕಾಲುವೆ ಚೈ0.00 ಕಿ.ಮೀ. ನಿಂದ ಚೈ.114.142 ಕಿಮೀ ವರೆಗೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ : ಕಡೂರು ತಾಲೂಕು : ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ : ಹೊಳಲ್ಕೆರೆ : ಹಿರಿಯೂರು : ಚಿತ್ರದುರ್ಗ : ಚಳ್ಳಕೆರೆ ತಾಲೂಕುಗಳ ಮೂಲಕ ಗೋನೂರು ಕೆರೆಯವರೆಗೆ ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ನೀರನ್ನು ಹರಿಸಲು ಉದ್ದೇಶಿಸಲಾಗಿದೆ.

 ಆದ್ದರಿಂದ ಸಾರ್ವಜನಿಕರ ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಕಾಲುವೆ ಹಾಗೂ ಹಳ್ಳದ ಪಾತ್ರಗಳಲ್ಲಿ ಸಾರ್ವಜನಿಕರು ತಿರುಗಾಡುವುದು. ಜನ ಜಾನುವಾರುಗಳನ್ನು ಕಾಲುವೆ ಒಳಗಡೆ ಬಿಡುವುದು ಕಾಲುವೆ / ಹಳ್ಳಗಳಲ್ಲಿ ಈಜಾಡುವುದು ಹಾಗೂ ಇನ್ನಿತರ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

ಸದರಿ ಸೂಚನೆಗಳನ್ನು ಉಲ್ಲಂಘಿಸುವುದು. ನಿಗಮದ ಆಸ್ತಿಯಾದ ನೀರಾವರಿ ಕಾಲುವೆ. ಕಟ್ಟಡಗಳನ್ನು ಜಖಂಗೊಳಿಸುವುದು, ಅನಧಿಕೃತವಾಗಿ ಪಂಪ್ಸೆಟ್ ಗಳನ್ನು ಅಳವಡಿಸಿ ನೀರನ್ನು ಎತ್ತುವುದು : ನೀರಾವರಿ ಕಾಯ್ದೆಯ ಪ್ರಕಾರ ಕಾನೂನು ಬಾಹಿರವಾಗಿದ್ದು, ಇದನ್ನು ಉಲ್ಲಂಘಿಸಿದವರ ವಿರುದ್ಧ ನೀರಾವರಿ ಕಾಯ್ದೆ ಮತ್ತು ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಬಿ.ಆರ್.ಪ್ರಾಜೆಕ್ಟ್ ವಿಶ್ವೇಶ್ವರಯ್ಯ ಜಲನಿಗಮ, ಭದ್ರಾ ಮೇಲ್ದಂಡೆ ಯೋಜನಾ ವೃತ್ತದ ಸೂಪರಿಂಟೆಂಡಿಂಗ್ ಇಂಜಿನಿಯರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join WhatsApp

Join Now

Join Telegram

Join Now