ದಾವಣಗೆರೆ, ಸೆಪ್ಟೆಂಬರ್ 05 : ಕರ್ನಾಟಕ ವೀರಶೈವ ಲಿಂಗಾತ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ವೈಯಕ್ತಿಕ ಸಹಾಯಧನ, ಸಾಲ ಸೌಲಭ್ಯವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನವಾಗಿರುತ್ತದೆ. ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೆÇೀರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ http://kvldcl.karnataka.gov.in ಅಥವಾ ದೂ.ಸಂ: 080-22865522, 9900012351, 9900012352, ಜಿಲ್ಲಾ ನಿಗಮದ ದೂ.ಸಂ: 08192-230934 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.









