Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಾದವಾನಂದ ಮಠದಲ್ಲಿ ಶ್ರೀಕೃಷ್ಣ ಜಯಂತಿ : ಸಚಿವ ಟಿ.ರಘುಮೂರ್ತಿ ಉದ್ಘಾಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.05 : ಬುಡಕಟ್ಟು ಸಂಸ್ಕøತಿಯುಳ್ಳ ಗೊಲ್ಲ ಜನಾಂಗ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಮುಂದೆ ಬರಬೇಕು. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಕೊಡಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಿ ಸದಾ ನಿಮ್ಮ ಜೊತೆಯಲ್ಲಿರುತ್ತೇನೆಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ
ಟಿ.ರಘುಮೂರ್ತಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಸಭೆ ಇವುಗಳ ಸಹಯೋಗದೊಂದಿಗೆ ಹೊಳಲ್ಕೆರೆ ರಸ್ತೆಯಲ್ಲಿರುವ ಯಾದವಾನಂದ ಮಠದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಶ್ರೀಕೃಷ್ಣ ಜನ್ಮಾಷ್ಠಮಿ ಉದ್ಘಾಟಿಸಿ ಮಾತನಾಡಿದರು.

ಮಹಾಭಾರತವನ್ನು ವಿಶ್ವಕ್ಕೆ ಕೊಟ್ಟಂತ ಶ್ರೀಕೃಷ್ಣನ ಪಾತ್ರ ದೊಡ್ಡದು. ದುಷ್ಟರನ್ನು ಶಿಕ್ಷಿಸಿ, ಶಿಷ್ಟರನ್ನು ರಕ್ಷಿಸಿ ಧರ್ಮವನ್ನು ಕಾಯುವ ಶ್ರೀಕೃಷ್ಣನ ಚಿಂತನೆಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಿದೆ. ಹಾಗಾಗಿ ಪ್ರತಿಯೊಬ್ಬರಿಗೂ ಶ್ರೀಕೃಷ್ಣ ಬೇಕು. ಯಾರು ಸಂಘರ್ಷಕ್ಕೆ ಇಳಿಯಬಾರದು, ಸಮಾಜದಲ್ಲಿ ಸಾಮರಸ್ಯ ಕಾಪಾಡುವ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದು ಹೇಳಿದರು.

ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶವೆಂದು ರಾಜ್ಯ ಸರ್ಕಾರ ಘೋಷಿಸಿದೆ. ಚಿತ್ರದುರ್ಗ, ಮೊಳಕಾಲ್ಮುರು, ಹೊಳಲ್ಕೆರೆ ತಾಲ್ಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಿಲ್ಲ. ಮೂರು ವಾರಗಳ ಕಾಲ ಸತತವಾಗಿ ಮಳೆ ಬಾರದಿದ್ದರೆ ಅಂತಹ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು. ರಾಜ್ಯದಲ್ಲಿ ಹದಿನೆಂಟು ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಿಲ್ಲ. ಆಗಿರುವ ತೊಂದರೆಗಳನ್ನು ಸರಿಪಡಿಸುವ ಕೆಲಸ ಮಾಡುತ್ತೇನೆಂದು ಭರವಸೆ ನೀಡಿದರು.

ಸೆ.15 ಇಲ್ಲವೇ 16 ರಂದು ಭದ್ರಾ ಮೇಲ್ದಂಡೆ ಯೋಜನೆಯಿಂದ ನೀರು ಹರಿಸುವ ಚಿಂತನೆಯಿದೆ. ಅದಕ್ಕಾಗಿ ಸೆ.6 ರಂದು ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕವಾಗಿ ನೀರು ಹರಿಸಲಾಗುವುದು. ಇದರಿಂದ ಗೋನೂರುವರೆಗೂ ನೀರು ಸರಬರಾಜಾಗಲಿದೆ ಎಂದು ನುಡಿದರು.

ಶ್ರೀಕೃಷ್ಣ ಜಯಂತಿಯ ಸಾನಿಧ್ಯ ವಹಿಸಿದ್ದ ಬಸವಯಾದವಾನಂದಸ್ವಾಮಿ ಮಾತನಾಡಿ ಶ್ರೀಕೃಷ್ಣ ಒಂದು ಜಾತಿ ಧರ್ಮಕ್ಕೆ ಸೇರಿದವನಲ್ಲ. ಇಡಿ ವಿಶ್ವಕ್ಕೆ ಭಗವದ್ಗೀತೆಯ ಸಾರಾವನ್ನು ತಿಳಿಸಿದ ಏಕೈಕ ಜಗದ್ಗರು. ಯುದ್ದ ಭೂಮಿಯಲ್ಲಿ ಅರ್ಜುನನಿಗೆ ಉಪದೇಶ ಮಾಡುವ ಪರಿಯನ್ನು ಎಲ್ಲಿಯೂ ಕಾಣಲು ಸಾಧ್ಯವಿಲ್ಲ. ಭಗವದ್ಗೀತೆಯಲ್ಲಿ ಸತ್ಯ ಅಡಗಿದೆ. ಶ್ರೀಕೃಷ್ಣ ಪರಮಾತ್ಮನ ಚಿಂತನೆಗಳು ಅನೇಕರ ಮೇಲೆ ಪ್ರಭಾವ ಬೀರಿದೆ. ನಮ್ಮ ಕಲ್ಯಾಣ ಮಂಟಪದ ಕೆಲಸ ಆರಂಭವಾಗಿದೆ. ರಸ್ತೆ ಆಗಬೇಕು. ಇನ್ನು ಅನೇಕ ಬೇಡಿಕೆಗಳನ್ನು ಈಡೇರಿಸಬೇಕೆಂದು ಸಚಿವ ಟಿ.ರಘುಮೂರ್ತಿರವರಲ್ಲಿ ಮನವಿ ಮಾಡಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಜಯಮ್ಮ ಬಾಲರಾಜ್ ಮಾತನಾಡಿ ಪ್ರತಿ ವರ್ಷವೂ ಶ್ರೀಕೃಷ್ಣನ ಜಯಂತಿಯನ್ನು ಆಚರಿಸಿ ಸಂಭ್ರಮಿಸುವುದು ದೊಡ್ಡದಲ್ಲ. ಗೊಲ್ಲ
ಜನಾಂಗ ಶಿಕ್ಷಣವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಸಂಘಟಿತರಾದಾಗ ಮಾತ್ರ ಸಮಾಜದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ ಶ್ರೀಕೃಷ್ಣ ಕೇವಲ ಗೊಲ್ಲ ಜನಾಂಗಕ್ಕೆ ಮೀಸಲಲ್ಲ. ಇಡಿ ವಿಶ್ವವಕ್ಕೆ ಭಗವದ್ಗೀತೆಯ ಸಂದೇಶವನ್ನು ಸಾರಿದವರು.
ಇಲ್ಲಿ ಕಲ್ಯಾಣ ಮಂಟಪ ನಿರ್ಮಾಣವಾಗುತ್ತಿರುವುದಕ್ಕೆ ಬೇರೆಯವರ ನೆರವು ಕೇಳುವ ಬದಲು ನೀಮ್ಮಲ್ಲಿಯೇ ಹಣಕಾಸು ಕ್ರೂಢಿಕರಿಸುವ ಶಕ್ತಿಯಿದೆ ಎಂದು ಸಲಹೆ ನೀಡಿದರು.

ಡಾ.ಪ್ರೇಮಾ ಜಿ. ಶ್ರೀಕೃಷ್ಣನ ಕುರಿತು ಉಪನ್ಯಾಸ ನೀಡಿದರು.
ಯಾದವ ಸಮಾಜದ ಮುಖಂಡರುಗಳಾದ ಸಿ.ಟಿ.ಕೃಷ್ಣಮೂರ್ತಿ, ಆರ್.ಶಿವಣ್ಣ, ಬಸಮ್ಮ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರುಗಳಾದ ರವಿಕುಮಾರ್, ಶಾಂತಮ್ಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆಕಾಶ್ ಇನ್ನು ಅನೇಕರು ವೇದಿಕೆಯಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now