Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 05 : ನಗರದ ಪ್ರತಿಷ್ಠಿತ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್‍ರವರ ಹುಟ್ಟುಹಬ್ಬವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಶನಿವಾರ ಆಚರಿಸಲಾಯಿತು.

ಸಂಸ್ಥೆಯ ಆಡಳಿತಾಧಿಕಾರಿ ಚಂದ್ರಕಲಾ ಡಾ.ಎಂ.ಚಂದ್ರಪ್ಪ ಶಿಕ್ಷಕರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡುತ್ತ ಶಿಕ್ಷಕರಾಗಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್‍ರವರು ದೇಶದ ಅತ್ಯುನ್ನತ ರಾಷ್ಟ್ರಪತಿ ಹುದ್ದೆಯನ್ನು ಅಲಂಕರಿಸಿ ಶಿಕ್ಷಕರಿಗೆ ಗೌರವ ತಂದು ಕೊಟ್ಟ ಕಾರಣಕ್ಕಾಗಿ ಅವರು ಹುಟ್ಟುಹಬ್ಬವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಶಿಕ್ಷಕರುಗಳಿಗೆ ಸಮಾಜದಲ್ಲಿ ಗೌರವವಿದೆ. ಅದಕ್ಕೆ ಧಕ್ಕೆ ತರದಂತೆ ಕರ್ತವ್ಯ ನಿರ್ವಹಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.

ಶಾಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್, ಡೀನ್ ಅನಂತರಾಮು, ಶೈಕ್ಷಣಿಕ ನಿರ್ದೇಶಕ ಸಂಪತ್‍ಕುಮಾರ್ ಸಿ.ಡಿ, ಪ್ರಾಂಶುಪಾಲರಾದ
ಪಿ.ಬಸವರಾಜಯ್ಯ, ಮುಖ್ಯ ಶಿಕ್ಷಕಿ ಜರೀನಾ, ಪಿ.ಆರ್.ಓ.ರವಿಕುಮಾರ್, ಶಿಕ್ಷಕ ಮತ್ತು ಶಿಕ್ಷಕೇತರ ವರ್ಗದವರು ಶಿಕ್ಷಕರ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಚಿತ್ರದುರ್ಗ : ಇಂಡಿಯನ್ ಇಂಟರ್ ನ್ಯಾóಷನಲ್ ಶಾಲೆಯಲ್ಲಿ ಶುಕ್ರವಾರ ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ಆಚರಿಸಲಾಯಿತು.
ರಾಧೆ, ಕೃಷ್ಣನ ವೇಷ ಧರಿಸಿದ್ದ ಪುಟಾಣಿ ಮಕ್ಕಳು ನರ್ತಿಸಿ ಎಲ್ಲರ ಗಮನ ಸೆಳೆದರು.

ಶಾಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಮಾತನಾಡಿ ಬಾಲ್ಯದಲ್ಲಿಯೇ ಅತಿ ತುಂಟಾಟ ಮಾಡುತ್ತಿದ್ದ ಶ್ರೀಕೃಷ್ಣನ ಲೀಲೆ ದೊಡ್ಡದು. ಅತ್ಯಂತ ಚತುರನಾಗಿದ್ದ ಶ್ರೀಕೃಷ್ಣ ಭಗವದ್ಗೀತೆಯನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದಾನೆಂದು ಹೇಳಿದರು.
ಶಾಲೆಯ ಡೀನ್ ಅನಂತರಾಮು, ಶೈಕ್ಷಣಿಕ ನಿರ್ದೇಶಕ ಸಂಪತ್‍ಕುಮಾರ್ ಸಿ.ಡಿ, ಪ್ರಾಚಾರ್ಯರಾದ ಪಿ.ಬಸವರಾಜಯ್ಯ, ಮುಖ್ಯ ಶಿಕ್ಷಕಿ ಜರೀನಾ, ಪಿ.ಆರ್.ಓ.ರವಿಕುಮಾರ್
ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಯವರು ಶ್ರೀಕೃಷ್ಣ ಜಯಂತಿಯಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now