Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಐಸಿಎಸ್ಇ ರಾಷ್ಟ್ರೀಯ ಈಜು ಸ್ಪರ್ಧೆ: ಸುಧನ್ವ ಯುವರಾಜ್ಗೆ ಕಂಚಿನ ಪದಕ

---Advertisement---

ಬೆಂಗಳೂರು: ಇಲ್ಲಿನ ವಿದ್ಯಾಶಿಲ್ಪ್ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿ ಸುಧನ್ವ ಯುವರಾಜ್, ಪ್ರತಿಷ್ಠಿತ ಐಸಿಎಸ್ಇ (ICSE) ರಾಷ್ಟ್ರೀಯ ಈಜು ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಗೆದ್ದು ಗಮನಾರ್ಹ ಸಾಧನೆ ಮಾಡಿದ್ದಾರೆ.

14 ವರ್ಷದೊಳಗಿನವರ (U-14) 200 ಮೀಟರ್ ಬಟರ್ಫ್ಲೈ ವಿಭಾಗದ ಸ್ಪರ್ಧೆಯಲ್ಲಿ ಕಣಕ್ಕಿಳಿದಿದ್ದ ಸುಧನ್ವ, ನಿಗದಿತ ದೂರವನ್ನು ಕೇವಲ 2:39.84 ಸೆಕೆಂಡುಗಳಲ್ಲಿ ಕ್ರಮಿಸುವ ಮೂಲಕ ಮೂರನೇ ಸ್ಥಾನ ಪಡೆದು ಕಂಚಿನ ಪದಕಕ್ಕೆ ಕೊರಳೊಡ್ಡಿದರು.

ಬೆಂಗಳೂರಿನ ಬಸವನಗುಡಿ ಅಕ್ವಾಟಿಕ್ ಸೆಂಟರ್ನಲ್ಲಿ ತರಬೇತಿ ಪಡೆಯುತ್ತಿರುವ ಸುಧನ್ವ ಅವರ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ತರಬೇತುದಾರರು ಹಾಗೂ ಕ್ರೀಡಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now