Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಯಲ್ಲಿ ಯುವ ಕಾಂಗ್ರೆಸ್‍ನ್ನು ತಳಮಟ್ಟದಿಂದ ಸಂಘಟಿಸುತ್ತೇನೆ : ಎಂ.ನಿಶ್ಚಿತ್

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 06 :
ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಾರೆಹಳ್ಳಿ ಉಲ್ಲಾಸ್‍ರವರು ನನ್ನ ಮೇಲೆ ವಿಶ್ವಾಸ ನಂಬಿಕೆಯಿಟ್ಟು ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಿದ್ದಾರೆ. ಅವರು ನನ್ನಲ್ಲಿರುವ ಯುವಶಕ್ತಿಯನ್ನು ಗುರುತಿಸಿ ಪ್ರೋತ್ಸಾಹಿಸಿದ್ದಾರೆ. ಈ ಹುದ್ದೆಯನ್ನು ಸವಾಲಾಗಿ ಸ್ವೀಕರಿಸಿ, ಪಕ್ಷವನ್ನು ತಳಮಟ್ಟದಿಂದ ಬಲವಾಗಿ ಸಂಘಟಿಸುತ್ತೇನೆ. ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರ ಒಗ್ಗಟ್ಟಿನೊಂದಿಗೆ ಯುವ ಕಾಂಗ್ರೆಸ್‌ ಕಾರ್ಯಚಟುವಟಿಕೆಗಳನ್ನು ಚುರುಕುಗೊಳಿಸುತ್ತೇನೆ,” ಜಿಲ್ಲೆಯಲ್ಲಿ ಯುವ ಕಾಂಗ್ರೆಸ್‍ನ್ನು ಬಲಪಡಿಸಿ ಮುಂದಿನ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷವನ್ನು ಗೆಲ್ಲಿಸುವುದಾಗಿ
ಎಂ.ನಿಶ್ಚಿತ್(ಚಿಂಟು) ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪದಗ್ರಹಣ ಸ್ವೀಕರಿಸಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಕಾರೆಹಳ್ಳಿ ಉಲ್ಲಾಸ್ ಅವರು ಕಾಂಗ್ರೆಸ್ ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಎಂ.ನಿಶ್ಚಿತ್(ಚಿಂಟು) ಇವರ ಪದಗ್ರಹಣ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಾದ್ಯಂತ ಸೋಮವಾರದಿಂದ ಪ್ರವಾಸ ಕೈಗೊಂಡು ಯೂತ್ ಕಾಂಗ್ರೆಸ್‍ನ್ನು ಶಕ್ತಿಶಾಲಿಯನ್ನಾಗಿಸುವುದಾಗಿ ಹೇಳಿದರು.

ಭವಿಷ್ಯದ ಪ್ರಧಾನಿ ರಾಹುಲ್‍ಗಾಂಧಿರವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ನಡೆಸಿರುವುದು ಕಾಂಗ್ರೆಸ್‍ಗೆ ಬಲ ಬಂದಂತಾಗಿದೆ. ದೇಶದ ಪ್ರಧಾನಿ ನರೇಂದ್ರಮೋದಿ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಯುವ ಸಮೂಹವನ್ನು ವಂಚಿಸಿದ್ದಾರೆ. ವಿಧಾನಸಭೆ ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೆ ಐದು ಗ್ಯಾರೆಂಟಿಗಳನ್ನು ರಾಜ್ಯದ ಜನತೆಗೆ ಕೊಟ್ಟಿದೆ. ಪ್ರತಿ ವರ್ಷವೂ ರಾಜ್ಯ ಸರ್ಕಾರ ಯುವಕರ ಸಂಘಕ್ಕೆ ಹತ್ತು ಲಕ್ಷ ರೂ.ಗಳನ್ನು ನೀಡುತ್ತದೆ. ಇದನ್ನು ಬಳಸಿಕೊಂಡು ಯೂತ್ ಕಾಂಗ್ರೆಸ್‍ನ್ನು ಸಂಘಟಿಸುವಂತೆ ಎಂ.ನಿಶ್ಚಿತ್‍ಗೆ ಸೂಚಿಸಿದರು.

ರಾಜಕಾರಣ ಯಾರ ಸ್ವತ್ತಲ್ಲ. ನೀವುಗಳು ನನ್ನ ಮೇಲಿಟ್ಟಿರುವ ಪ್ರೀತಿ ಅಭಿಮಾನಕ್ಕೆ ಚಿರಋಣಿಯಾಗಿದ್ದೇನೆ. ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಎಂ.ನಿಶ್ಚಿತ್‍ಗೆ ನಾಯಕತ್ವದ ಗುಣವಿದೆ. ಇದರಿಂದ ಪಕ್ಷಕ್ಕೆ ಶಕ್ತಿ ಬರುತ್ತದೆಂದು ನಂಬಿದ್ದೇನೆ. ಪ್ರತಿಯೊಂದು ಮನೆಯಲ್ಲಿಯೂ ಕಾಂಗ್ರೆಸ್ ಕೊಡುಗೆಯಿದೆ ಎನ್ನುವುದನ್ನು ಯೂತ್ ಕಾಂಗ್ರೆಸ್‍ನವರು ಜನತೆಗೆ ತಿಳಿಸಬೇಕೆಂದು ಕಾರೆಹಳ್ಳಿ ಉಲ್ಲಾಸ್ ಮನವಿ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಹೆಚ್.ಆಂಜನೇಯ ಇವರುಗಳೆಲ್ಲಾ ಯೂತ್ ಕಾಂಗ್ರೆಸ್‍ನಿಂದ ಬೆಳೆದವರು. ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ದ ಹೋರಾಡಿದ್ದು, ಕಾಂಗ್ರೆಸ್ ಪಕ್ಷ. ದೇಶದ ಮುಂದಿನ ಪ್ರಧಾನಿ ರಾಹುಲ್‍ಗಾಂಧಿಗೆ ಯೂತ್ ಕಾಂಗ್ರೆಸ್ ಹಾಗೂ ಎನ್.ಎಸ್.ಯು.ಐ. ಬಲ ಬೇಕು. ಸಂವಿಧಾನದಲ್ಲಿ ಎಲ್ಲಾ ಜಾತಿ ಧರ್ಮದವರಿಗೆ ಸಮಾನ ಅವಕಾಶವಿದೆ. ಹದಿನೆಂಟು ವರ್ಷದವರಿಗೂ ಮತದಾನದ ಹಕ್ಕು ನೀಡಿದ್ದು, ದಿ.ರಾಜೀವ್‍ಗಾಂಧಿ ಎನ್ನುವುದನ್ನು ಸ್ಮರಿಸಿಕೊಂಡರು.
ಹದಿನೆಂಟು ವರ್ಷ ತುಂಬಿದವರು ನಿಮ್ಮ ನಿಮ್ಮ ವಾರ್ಡ್, ಬೂತ್‍ಗಳಲ್ಲಿ ಮತದಾನದ ಹಕ್ಕು ಪಡೆದುಕೊಳ್ಳಿ. ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿರುವವರ ಹೆಸರುಗಳನ್ನು ಸೇರಿಸುವುದು ನಿಮ್ಮ ಹೊಣೆ. ರಾಹುಲ್‍ಗಾಂಧಿ ದೇಶಕ್ಕಾಗಿ ಆರು ಸಾವಿರ ಕಿ.ಮೀ. ಭಾರತ್ ಜೋಡೋ ಯಾತ್ರೆ ನಡೆಸಿದ್ದಾರೆ. ನೀವುಗಳು ಪಕ್ಷ, ದೇಶದ ಬಗ್ಗೆ ಅಭಿಮಾನ ಮೂಡಿಸಿಕೊಳ್ಳಿ ಎಂದು ಯೂತ್ ಕಾಂಗ್ರೆಸ್‍ನವರಿಗೆ ಕರೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಡಿ.ಟಿ.ವೆಂಕಟೇಶ್ ಮಾತನಾಡುತ್ತ 1989 ರಲ್ಲಿ ಯೂತ್ ಕಾಂಗ್ರೆಸ್‍ಗೆ ಸೇರುವ ಮೂಲಕ ರಾಜಕೀಯ ಪ್ರವೇಶಿಸಿದೆವು. ಮೂರನೆ ಅವಧಿಗೆ ದೇಶದ ಪ್ರಧಾನಿಯಾಗಿರುವ ನರೇಂದ್ರಮೋದಿಯಿಂದ ದೇಶಕ್ಕೆ ಏನು ಲಾಭವಾಗಿಲ್ಲ. ರಾಹುಲ್‍ಗಾಂಧಿ ಪ್ರಧಾನ ಮಂತ್ರಿಯಾಗಬೇಕಾದರೆ ಯೂತ್ ಕಾಂಗ್ರೆಸ್‍ನವರು ಸಂಘಟಿತರಾಬೇಕು. ಕಾಂಗ್ರೆಸ್ ಬಡವರ ಪಕ್ಷ. ಯೂತ್ ಕಾಂಗ್ರೆಸ್‍ಗೆ ಅಸ್ತಿತ್ವವಿದೆ. ಎಲ್ಲಿಯಾದರೂ ಅನ್ಯಾಯ ಕಂಡು ಬಂದರೆ ಪ್ರತಿಭಟಿಸಿ. ದೇಶ, ಸಂವಿಧಾನ ಉಳಿಯಬೇಕಾಗಿರುವುದರಿಂದ ರಾಹುಲ್‍ಗಾಂಧಿಯನ್ನು ಪ್ರಧಾನಿಯನ್ನಾಗಿಸಿ ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳಲ್ಲಿ ವಿನಂತಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‍ಕುಮಾರ್ ಮಾತನಾಡಿ ಜಿಲ್ಲೆಯಲ್ಲಿ ಯೂತ್ ಕಾಂಗ್ರೆಸ್‍ನ್ನು ಬಲಪಡಿಸಲು ಜಿಲ್ಲಾಧ್ಯಕ್ಷ ಕಾರೆಹಳ್ಳಿ ಉಲ್ಲಾಸ್ ಶ್ರಮಿಸುತ್ತಿದ್ದಾರೆ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ನಗರಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರ ಹಿಡಿಯಬೇಕಾಗಿರುವುದರಿಂದ ಯೂತ್ ಕಾಂಗ್ರೆಸ್ ಈಗಿನಿಂದಲೇ ಶ್ರಮಿಸಬೇಕು. ಉತ್ತರಾಖಂಡದಲ್ಲಿ ಎ.ಐ.ಸಿ.ಸಿ. ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಜಾಗವನ್ನು ಆರ್.ಎಸ್.ಎಸ್. ಬಿಜೆಪಿ. ಮನುವಾದಿಗಳು ಶುದ್ದೀಕರಿಸಿರುವುದನ್ನು ಪ್ರತಿಯೊಬ್ಬರು ಖಂಡಿಸುವಂತೆ ಹೇಳಿದರು.

ಶ್ರೀರಾಮುಲುರವರಂತೆ ಕಾಂಗ್ರೆಸ್‍ನವರು ಯಾವ ಹಗರಣವನ್ನು ಎಸಗಿಲ್ಲ. ರಾಹುಲ್‍ಗಾಂಧಿ ಮೇಲೆ ದಾಖಲಿಸಿರುವ ಎಫ್.ಐ.ಆರ್.ವಿರುದ್ದ ಎಲ್ಲರೂ ಹೋರಾಡಬೇಕು. ಬಿಜೆಪಿ. ನಾಯಕರುಗಳು ಎಲ್ಲಿಯೇ ಬರಲಿ ಕಪ್ಪು ಭಾವುಟ ಪ್ರದರ್ಶಿಸಿ ಎಂದು ಯೂತ್ ಕಾಂಗ್ರೆಸ್‍ನವರಲ್ಲಿ ಕೋರಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಜಿ.ವಿ.ಮಧುಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಚಾಂದ್‍ಪೀರ್, ಯೂತ್ ಕಾಂಗ್ರೆಸ್‍ನ ನಿಜಾಮುದ್ದಿನ್, ಪ್ರಶಾಂತ್, ಪವನ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಸದಸ್ಯ ಸುರೇಶ್ ಹಾಗೂ ಯೂತ್ ಕಾಂಗ್ರೆಸ್ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಜಗಳೂರು, ಮೊಳಕಾಲ್ಮೂರಿಗೆ ಭದ್ರೆ ಹರಿದ ನಂತರವೇ ಸಂಭ್ರಮ ಬಯಲು ಸೀಮೆ ಬಾಗಿನ ಸಮರ್ಪಣೆ ನಂತರ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಪ್ರತಿಜ್ಞೆ ಸ್ವೀಕಾರ

ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ: ಅಧ್ಯಕ್ಷ ಎಂ. ನಿಶಾನಿ ಜಯಣ್ಣ

ಯುವಪೀಳಿಗೆ ಮೊಬೈಲ್ ದಾಸರಾಗದೆ ಶರಣರ ಕಾಯಕ ಸಿದ್ಧಾಂತ ಮೈಗೂಡಿಸಿಕೊಳ್ಳಲಿ: ಬಸವಲಿಂಗ ಶ್ರೀಗಳ ಕರೆ

ಚಿತ್ರದುರ್ಗಕ್ಕೆ ಹರಿದುಬಂದ ಭದ್ರಾ ನೀರು: ಸೆಪ್ಟೆಂಬರ್ 10ರಂದು ಜಿಲ್ಲಾ ನೀರಾವರಿ ಹೋರಾಟ ಸಮಿತಿಯಿಂದ ಸಂಭ್ರಮೋತ್ಸವ

ಪೌರಕಾರ್ಮಿಕರಿಗೆ ಸಚಿವ ಕೃಷ್ಣ ಬೈರೇಗೌಡ ಬಹಿರಂಗ ಕ್ಷಮೆಯಾಚಿಸದಿದ್ದರೆ ಕಪ್ಪು ಬಟ್ಟೆ ಪ್ರದರ್ಶನ : ಬಿಜೆಪಿ ಮುಖಂಡ ಜಿ.ಎಚ್. ಮೋಹನ್ ಕುಮಾರ್ ಎಚ್ಚರಿಕೆ

ಚಿತ್ರದುರ್ಗ: ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡು ಯೂತ್ ಕಾಂಗ್ರೆಸ್ ಬಲವರ್ಧನೆ : ಕಾರೆಹಳ್ಳಿ ಉಲ್ಲಾಸ್