ಬೆಂಗಳೂರು.ಸೆಪ್ಟೆಂಬರ್.07: ರಾಜ್ಯದ ನಿವೃತ್ತ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಆರೋಗ್ಯ ರಕ್ಷಣೆಗೆ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ‘ಸಂಧ್ಯಾ ಕಿರಣ’ ಆರೋಗ್ಯ ಯೋಜನೆಯನ್ನು ಅಧಿಕೃತವಾಗಿ ಜಾರಿಗೆ ತಂದಿದೆ. ವಯೋಸಹಜ ಆರೋಗ್ಯ ಸಮಸ್ಯೆಗಳನ್ನು ಎದುರಿಸುವ ಹಿರಿಯ ಜೀವಗಳಿಗೆ ಆರ್ಥಿಕ ಹೊರೆಯಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರಕಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
₹5 ಲಕ್ಷದವರೆಗೆ ನಗದು ರಹಿತ ಸೇವೆ: ನಿವೃತ್ತ ನೌಕರರಿಗೆ ವಾರ್ಷಿಕ ₹5 ಲಕ್ಷದವರೆಗಿನ ನಗದು ರಹಿತ (ಕ್ಯಾಶ್‌ಲೆಸ್) ಆರೋಗ್ಯ ಸೇವೆಯನ್ನು ಒದಗಿಸಲಾಗುತ್ತದೆ.

ಅರ್ಹತೆ ಹಾಗೂ ಫಲಾನುಭವಿಗಳು: 70 ವರ್ಷದೊಳಗಿನ ಪಿಂಚಣಿದಾರರು, ಕುಟುಂಬ ಪಿಂಚಣಿದಾರರು ಹಾಗೂ ಅವರ ವಿಶೇಷ ಚೇತನ (ದಿವ್ಯಾಂಗ) ಮಕ್ಕಳಿಗೆ ಈ ಯೋಜನೆಯ ಸೌಲಭ್ಯ ದೊರೆಯಲಿದೆ.
4.93 ಲಕ್ಷ ಮಂದಿಗೆ ಲಾಭ: ಮೊದಲ ಹಂತದಲ್ಲೇ ಸುಮಾರು 4.93 ಲಕ್ಷ ಫಲಾನುಭವಿಗಳು ಯೋಜನೆಯ ನೇರ ಪ್ರಯೋಜನ ಪಡೆಯಲಿದ್ದಾರೆ.
ನೋಂದಣಿಗೆ ಕಾಲಾವಕಾಶ:
ಈಗಾಗಲೇ ನಿವೃತ್ತರಾಗಿರುವ ನೌಕರರಿಗೆ ನೋಂದಣಿ ಮಾಡಿಕೊಳ್ಳಲು 3 ತಿಂಗಳ ಕಾಲಾವಕಾಶ ನೀಡಲಾಗಿದೆ.
ಮುಂದಿನ ದಿನಗಳಲ್ಲಿ ನಿವೃತ್ತರಾಗಲಿರುವ ನೌಕರರು ನಿವೃತ್ತಿಯಾದ 2 ತಿಂಗಳ ಒಳಗಾಗಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಸರ್ಕಾರಿ ಸೇವೆಯಿಂದ ನಿವೃತ್ತರಾದ ನಂತರವೂ ನೆಮ್ಮದಿಯ ಜೀವನ ನಡೆಸಲು ಹಾಗೂ ತುರ್ತು ವೈದ್ಯಕೀಯ ವೆಚ್ಚಗಳಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಈ ಮಹತ್ವದ ಆರೋಗ್ಯ ಭದ್ರತೆಯನ್ನು ಒದಗಿಸಿದೆ.
ನಿವೃತ್ತಿಯ ನಂತರವೂ ಸರ್ಕಾರದಿಂದ ಆರೋಗ್ಯ ಭದ್ರತೆ
ರಾಜ್ಯ ಸರ್ಕಾರಿ ಪಿಂಚಣಿದಾರರು ಹಾಗೂ ಅವರ ಕುಟುಂಬದ ಆರೋಗ್ಯ ರಕ್ಷಣೆಗಾಗಿ ‘ಸಂಧ್ಯಾ ಕಿರಣ’ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ. ವಾರ್ಷಿಕ ₹5 ಲಕ್ಷದವರೆಗೆ ನಗದು ರಹಿತ ಆರೋಗ್ಯ ಸೇವೆ ಒದಗಿಸುವ ಈ ಯೋಜನೆಯಿಂದ ಮೊದಲ ಹಂತದಲ್ಲಿ 4.93 ಲಕ್ಷ ಫಲಾನುಭವಿಗಳಿಗೆ ಪ್ರಯೋಜನವಾಗಲಿದೆ. ಇದು… pic.twitter.com/RVhijPqaT3
— DIPR Karnataka (@KarnatakaVarthe) September 6, 2026













