ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 10 : ನಗರದ ಸ್ಟೇಡಿಯಂ ರಸ್ತೆ ನಿವಾಸಿ ಜಿ.ಹೆಚ್. ನಾಗೇಂದ್ರ ರೆಡ್ಡಿ (ನಿವೃತ್ತ ಕೆಇಬಿ ಇಂಜಿನಿಯರ್) (84 ವರ್ಷ) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ ತಾಲ್ಲೂಕಿನ ಬಂಗಾರಕ್ಕನಹಳ್ಳಿಯ ಜಮೀನಿನಲ್ಲಿ ಮಧ್ಯಾನ್ಹ 1 ಗಂಟೆಗೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.









