ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಸೆ. 10 : ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಚಿತ್ರದುರ್ಗದಲ್ಲಿ ಜಿಲ್ಲಾ ಕಾಂಗ್ರೆಸ್ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೋಳಿ ಮೇಲೆ ಇಡಿ ದಾಳಿ ನಡೆದಿದ್ದು ಇದನ್ನು ಬಿಜೆಪಿ ಷಡ್ಯಂತ್ರ ಎಂದು ಕಾಂಗ್ರೆಸ್ ಆರೋಪ ಮಾಡಿದ್ದು ಕೇಂದ್ರ ಸರ್ಕಾರದ ನಡೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಘಟಕದವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆದಿದ್ದು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್ಪೀರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ದಾರುಯುದ್ದಕ್ಕೂ ನಡೆದ ಪ್ರತಿಭಟನಾ ವೇಳೆಯಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದು ಸತೀಶ್ ಜಾರಕಿಹೊಳಿ ಪರ ಬಿತ್ತಿ ಪತ್ರಗಳ ಪ್ರದರ್ಶನಗೊಂಡಿದ್ದವು. ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಇಡಿ ಇಲಾಖೆ ವಿರುದ್ಧ ಕಾಂಗ್ರೆಸ್ ಕಾರ್ಯ ಕರ್ತರ ಘೋಷಣೆ ಹಾಕಿದ್ದಾರೆ.
ಈ ಪ್ರತಿಭಟನೆಯಲ್ಲಿ ಡಿಸಿಸಿ ಕಾರ್ಯಾಧ್ಯಕ್ಷರಾದ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ನಗರಾಧ್ಯಕ್ಷ ಲಕ್ಷ್ಮೀಕಾಂತ್, ಉಪಾಧ್ಯಕ್ಷರಾದ ರವಿಕುಮಾರ್, ಮುನಿರಾ ಮುಕಾಂದರ್ ಮರುಳಾರಾಧ್ಯ ಕಾಂಗ್ರೆಸ್ ಎಸ್,ಟಿ.ಘಟಕದ ಅಧ್ಯಕ್ಷ ಮಂಜುನಾಥ್, ಜಿಲ್ಲಾ ಗ್ಯಾರೆಂಟಿ ಅಧ್ಯಕ್ಷ ಶಿವಣ್ಣ ಗಂಜಿಗಟ್ಟೆ, ತಾಲ್ಲೂಕು ಗ್ಯಾರೆಂಟಿ ಅಧ್ಯಕ್ಷ ಪ್ರಕಾಶ್, ನಾಗರಾಜ್ ಪೈಲಟ್, ಒಬಿಸಿ ಅಧ್ಯಕ್ಷ ಎನ್.ಡಿ.ಕುಮಾರ್, ಕುಮಾರ್ ಗೌಡ, ಸೇರಿದಂತೆ ಜಿಲ್ಲಾ ಕಾಂಗ್ರೆಸ್ನ ಕಾರ್ಯಕರ್ತರು ಬಾಗಿಯಾಗಿದ್ದರು.










