Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಸಚಿವ ಸತೀಶ್ ಜಾರಕಿಹೊಳಿ ಮೇಲಿನ ಇ.ಡಿ ದಾಳಿ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 10 : ಸಚಿವ ಸತೀಶ್‍ಜಾರಕಿಹೊಳಿರವರ ಮೇಲೆ ಇಡಿ ದಾಳಿ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್‍ನಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಕಚೇರಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆವರೆಗೂ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಬಿ.ಮಂಜುನಾಥ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ಕಾಂಗ್ರೆಸ್‍ಗೆ ಶಕ್ತಿಯಾಗಿರುವ ಸತೀಶ್‍ಜಾರಕಿಹೊಳಿ ಹಾಗೂ ಅವರ ಪುತ್ರಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಮತ್ತು ಸಂಬಂಧಿಕರ ನಿವಾಸಗಳ ಮೇಲೆ ಇಡಿ. ಧಾಳಿ ನಡೆಸಿ ಆತ್ಮಸ್ಥೈರ್ಯವನ್ನು ಕುಗ್ಗಿಸುವ ಕುತಂತ್ರ ನಡೆಸುತ್ತಿರುವ ಕೇಂದ್ರ ಬಿಜೆಪಿ. ಸರ್ಕಾರ ಮೊದಲು ತನ್ನ ಪಕ್ಷದಲ್ಲಿರುವ ಲೂಟಿಕೋರರ ಮೇಲೆ ಇಡಿ. ಛೂ. ಬಿಡಲಿ ಅದನ್ನು ಬಿಟ್ಟು ಕಾಂಗ್ರೆಸ್ ನಾಯರುಗಳನ್ನು ಗುರಿಯಾಗಿಸಿಕೊಂಡಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.?

ಗಡಿಪಾರಾಗಿದ್ದ ಅಮಿತ್‍ಷಾರವರನ್ನು ಕೇಂದ್ರ ಗೃಹ ಸಚಿವರನ್ನಾಗಿ ಮಾಡಿಕೊಂಡಿರುವ ಪ್ರಧಾನಿ ಮೋದಿರವರು ಬಿಜೆಪಿ.ಯಲ್ಲಿನ ಭ್ರಷ್ಟರ ಮೇಲೆ ಇಡಿ. ಧಾಳಿ ನಡೆಸಲಿ ಬಿಜೆಪಿ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಿ.ಟಿ.ರವಿ ಇವರುಗಳ ಹಗರಣವನ್ನು ಏಕೆ ಬಯಲಿಗೆಳೆಯುವುದಿಲ್ಲ. ಇಡಿ ಮತ್ತು ಸಿಬಿಐ. ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ. ಪದೆ ಪದೆ ಸತೀಶ್‍ಜಾರಕಿಹೊಳಿರವರ ಮೇಲೆ ದಾಳಿ ನಡೆಸುತ್ತಿರುವುದನ್ನು ನೋಡಿಕೊಂಡು ಸುಮ್ಮನಿರುವುದಿಲ್ಲ. ಉಗ್ರ ಹೋರಾಟ ನಡೆಸಬೇಕಾಗುತ್ತದೆಂದು ಎಚ್ಚರಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ ಸಚಿವ ಸತೀಶ್ ಜಾರಕಿಹೊಳಿರವರು ರಾಜಕೀಯದ ಜೊತೆಗೆ ಉದ್ಯಮದಲ್ಲಿ ತೊಡಗಿ ಶ್ರೀಮಂತರಾಗಿದ್ದಾರೆನ್ನು
ವುದನ್ನು ಮೊದಲು ಬಿಜೆಪಿ. ಅರ್ಥಮಾಡಿಕೊಳ್ಳಲಿ. ಪ್ರಧಾನಿ ಮೋದಿ ಕೇರ್ ಫಂಡ್‍ನಲ್ಲಿ ಎಷ್ಟು ಹಗರಣವಾಗಿದೆ. ಅದರ ಬಗ್ಗೆ ಏಕೆ ತನಿಖೆ ನಡೆಸುತ್ತಿಲ್ಲ. ಇಡಿ. ಸಿಬಿಐ. ಮೌನ ವಹಿಸಿದೆ. ರಾಜ್ಯಾದ್ಯಂತ ಕಾಂಗ್ರೆಸ್ ವಿರುದ್ದ ಪಾದಯಾತ್ರೆ ಕೈಗೊಂಡಿರುವುದಕ್ಕೆ ಹಣ ಎಲ್ಲಿಂದ ಬರುತ್ತದೆನ್ನುವುದಕ್ಕೆ ಬಿಜೆಪಿ. ಉತ್ತರಿಸಲಿ ಎಂದು ಸವಾಲು ಹಾಕಿದರು.
ಸತೀಶ್ ಜಾರಕಿ ಹೊಳಿ ಹಾಗೂ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಮತ್ತಿತರರ ಮೇಲೆ ಇಡಿ. ದಾಳಿ ನಡೆಸುವ ಬದಲು ಬಿಜೆಪಿ.ಯಲ್ಲಿರುವ ಭ್ರಷ್ಟರನ್ನು ಮಟ್ಟ ಹಾಕಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಇಂತಹ ಕ್ಯಾತೆಯಲ್ಲಿಯೇ ತೊಡಗಿರುವುದನ್ನು ಬಿಟ್ಟರೆ ಅಭಿವೃದ್ದಿ ಮಾತ್ರ ಶೂನ್ಯ ಎಂದರು.

ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ ಮಾತನಾಡಿ ರಾಜಕೀಯದಲ್ಲಿ ಎತ್ತರಕ್ಕೆ ಬೆಳೆಯುತ್ತಿರುವ ಸತೀಶ್ ಜಾರಕಿಹೊಳಿರವರ ಮೇಲೆ ಇಡಿ ಧಾಳಿ ನಡೆಸಿ ಕುಗ್ಗಿಸಲು ಹೊರಟಿರುವ ಬಿಜೆಪಿ. ತಮ್ಮ ಪಕ್ಷದಲ್ಲಿರುವ ಭ್ರಷ್ಟರನ್ನು ರಕ್ಷಣೆ ಮಾಡಿಕೊಳ್ಳುತ್ತಿದೆ. ಒಂದು ಕಾಲದಲ್ಲಿ ಗಡಿಪಾರಿಗೆ ಗುರಿಯಾಗಿದ್ದ ಅಮಿತ್‍ಷಾ ಈಗ ಕೇಂದ್ರ ಗೃಹ ಸಚಿವರಾಗಿದ್ದಾರೆ. ಬಿ.ಎಸ್.ಯಡಿಯೂರಪ್ಪನವರು ಜೈಲಿಗೆ ಹೋಗಿ ಬಂದಿದ್ದನ್ನು ಪ್ರಧಾನಿ ಮೋದಿ ಮರೆತಂತಿದೆ. ಕಾಂಗ್ರೆಸ್ ನಾಯಕರುಗಳ ಮೇಲೆ ಪದೆ ಪದೆ ಧಾಳಿ ನಡೆಸಿದರೆ ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನ ತಕ್ಕ ಪಾಠ ಕಲಿಸಲಿದ್ದಾರೆಂದು ಎಚ್ಚರಿಸಿದರು.

ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್ ಮಾತನಾಡುತ್ತ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಕರ್ನಾಟಕದ ಶಕ್ತಿಶಾಲಿ ನಾಯಕರುಗಳ ಮೇಲೆ ಇಡಿ. ಧಾಳಿ ಮೂಲಕ ಪಕ್ಷದ ಅಸ್ಮಿತೆಯನ್ನು ಅಳಿಸಿ ಹಾಕುವ ಕುತಂತ್ರ ನಡೆಸುತ್ತಿರುವ ಬಿಜೆಪಿ.ಯಲ್ಲಿಯೆ ಸಾಕಷ್ಟು ಭ್ರಷ್ಟರಿದ್ದಾರೆ. ಅಂತಹವರ ಮೇಲೆ ಮೊದಲು ಇಡಿ ಧಾಳಿಯಾಗಲಿ. ಸತೀಶ್ ಜಾರಕಿಹೊಳಿ, ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳನ್ನು ಮಾನಸಿಕವಾಗಿ ಕುಗ್ಗಿಸಲು ಕೋಮುವಾದಿ ಬಿಜೆಪಿ. ಹಗಲು ಗನಸು ಕಾಣುತ್ತಿದೆ ಎಂದು ಲೇವಡಿ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಹಿರಿಯ ಉಪಾಧ್ಯಕ್ಷರು, ವಕ್ತಾರ ಹಾಗೂ ನ್ಯಾಯವಾದಿ ಜಿ.ಎಸ್.ಕುಮಾರ್‍ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್,
ಡಿ.ಎನ್.ಮೈಲಾರಪ್ಪ, ಜಿ.ವಿ.ಮಧುಗೌಡ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಕಾರ್ಮಿಕ ವಿಭಾಗದ ಅಧ್ಯಕ್ಷ ಸೈಯದ್ ಮೊಹಿದ್ದೀನ್ ಚೋಟು, ಬಸವರಾಜ್ ಬಚ್ಚಬೋರನಹಟ್ಟಿ, ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಧುಪಾಲೆಗೌಡ, ಅಬ್ದುಲ್ಲಾ, ಪೈಲೆಟ್ ನಾಗರಾಜ್, ಶಶಿಕಿರಣ್, ಚಾಂದ್‍ಪೀರ್, ಭರಮಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್, ಚಿತ್ರದುರ್ಗ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ತಿಪ್ಪೇಸ್ವಾಮಿ, ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ನೇತ್ರಾವತಿ, ಇಂದಿರಾ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಮರುಳಾರಾಧ್ಯ ಸೇರಿದಂತೆ ವಿವಿಧ ವಿಭಾಗಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now