Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ನಾಳೆ ಶ್ರೀಕೃಷ್ಣನ ಬೃಹತ್ ಶೋಭಾಯಾತ್ರೆ

---Advertisement---

ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್. 11 : ನಾಳೆ(ಸೆಪ್ಟೆಂಬರ್. 12) ನಗರದ ಪ್ರಮುಖ ಬೀದಿಗಳಲ್ಲಿ ಶ್ರೀ ಕೃಷ್ಣನ ಬೃಹತ್ ಶೋಭಾಯಾತ್ರೆ ಕಾರ್ಯಕ್ರಮ ಜರುಗಲಿದೆ ಎಂದು ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಗರದ ವೇದಾವತಿ ಬಡಾವಣೆಯಲ್ಲಿರುವ ಶ್ರೀ ಕೃಷ್ಣ ದೇವಾಲಯದಲ್ಲಿ ತಾಲೂಕು ಗೊಲ್ಲ ಸಮುದಾಯದ ಸಂಘಟನೆಗಳು ಏರ್ಪಡಿಸಿದ್ದ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಕಳೆದೊಂದು ವಾರದಿಂದ ದೇವಾಲಯದಲ್ಲಿ ಶ್ರೀ ಕೃಷ್ಣ ಪರಮಾತ್ಮನಿಗೆ ದಿನನಿತ್ಯ ವಿಶೇಷ ಪೂಜೆ, ಪ್ರಸಾದ ವಿತರಣೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದ್ದು, ಶನಿವಾರ ಬೆಳಗ್ಗೆ 11.30 ಕ್ಕೆ ಶೋಭಾಯಾತ್ರೆ ಆರಂಭಗೊಳ್ಳಲಿದೆ. ಈ ಭವ್ಯ ಶೋಭಾಯಾತ್ರೆಯಲ್ಲಿ ಅಲಂಕರಿಸಿದ ಬೆಳ್ಳಿ ರಥದಲ್ಲಿ ಶ್ರೀಕೃಷ್ಣ, ಶ್ರೀ ರಾಮ ಹಾಗೂ ಶ್ರೀ ಮಾರುತಿ ದೇವರುಗಳ ಮೆರವಣಿಗೆ ಸಾಗಲಿದೆ. ಜೊತೆಗೆ ಕೋಲಾಟ, ವೀರಗಾಸೆ, ಕಹಳೆ, ಹುರಿಮೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಲಿವೆ. ಬೆಳಿಗ್ಗೆ 11.30ಕ್ಕೆ ಶ್ರೀ ಕೃಷ್ಣ ದೇವಾಲಯದಿಂದ ಆರಂಭಗೊಂಡ ಶೋಭಾಯಾತ್ರೆಯು ಟಿಬಿ ವೃತ್ತದ ಮೂಲಕ ತಾಲೂಕು ಕಚೇರಿ, ಗಾಂಧಿ ಸರ್ಕಲ್, ಆಸ್ಪತ್ರೆ ಮುಂಭಾಗ ತಲುಪಿ ಅಲ್ಲಿಂದ ಮೂಲಕ ಚರ್ಚ್ ರೋಡ್, ಹುಳಿಯಾರು ರಸ್ತೆ ಮೂಲಕ ಗಾಂಧಿ ಸರ್ಕಲ್ ಪ್ರವೇಶಿಸಿ ನಂತರ ದೇವಾಲಯಕ್ಕೆ ಮೆರವಣಿಗೆ ವಾಪಸ್ ಹಿಂತಿರುಗುವ ಮೂಲಕ ಕಾರ್ಯಕ್ರಮಕ್ಕೆ ತೆರೆ ಬೀಳಲಿದೆ. ತಾಲ್ಲೂಕಿನ ಶ್ರೀ ಕೃಷ್ಣನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now