ಬೆಂಗಳೂರು: ಇಂದು ಬಸವರಾಜ್ ಬೊಮ್ಮಾಯಿ ಅವರು ಮೊದಲ ಬಜೆಟ್ ಮಂಡಿಸಿದ್ದಾರೆ. 2022-23ರ ಬಜೆಟ್ ನಲ್ಲಿ ಜನರಿಗೆ ಖುಷಿ ನೀಡುವಂತ ವಿಚಾರ ತಿಳಿಸಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳ ಮಾಡಿಲ್ಲ.
ವಾಣಿಜ್ಯ ತೆರಿಗೆ ಇಲಾಖೆ 77,010 ಕೋಟಿ ರೂ., ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 15,000 ಕೋಟಿ ರೂ., ರಾಜ್ಯ ಅಬಕಾರಿ ಇಲಾಖೆಗೆ 29,000 ಕೋಟಿ ರೂ. ಹಾಗೂ ಸಾರಿಗೆ ಇಲಾಖೆಗೆ 8,007 ಕೋಟಿ ರೂ. ತೆರಿಗೆ ಸಂಗ್ರಹ ಗುರಿ ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.
ಕೋವಿಡ್ ನಿಂದಾಗಿ ಜನಸಾಮಾನ್ಯರು ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಅವರ ಮೇಲೆ ಹೊರೆ ಹಾಕುವುದು ಸರಿಯಲ್ಲ. ಈ ವೇಳೆ ತೆರಿಗೆ ಬರೆ ಬಿದ್ದರೆ ಜನರು ಇನ್ನಷ್ಟು ಸಂಕಷ್ಟ ಎದುರಿಸಬೇಕಾಗುತ್ತದೆ. ಈ ಸನ್ನಿವೇಶದಲ್ಲಿ ಆರ್ಥಿಕ ಪುನಶ್ಚೇತನaಕ್ಕೆ ಸಹಕಾರ ನೀಡುವುದು ಉತ್ತಮ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.