Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ನವೆಂಬರ್ 1ರೊಳಗೆ ಸರ್ಕಾರಕ್ಕೆ ಒಪ್ಪಿಸಿ : ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

---Advertisement---

ಬೆಂಗಳೂರು: ಪರವಾನಗಿ ಇಲ್ಲದೆ ಅಕ್ರಮವಾಗಿ ಇಟ್ಟುಕೊಂಡಿರುವ ಬಂದೂಕು ಹಾಗೂ ಶಸ್ತ್ರಾಸ್ತ್ರಗಳನ್ನು ನವೆಂಬರ್ 1ರೊಳಗೆ ಕಡ್ಡಾಯವಾಗಿ ಸರ್ಕಾರಕ್ಕೆ ಒಪ್ಪಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಈ ಕುರಿತು ಸಾರ್ವಜನಿಕರಿಗೆ ಸ್ಪಷ್ಟ ಸಂದೇಶ ರವಾನಿಸಿರುವ ಅವರು, ಅಕ್ರಮ ಶಸ್ತ್ರಾಸ್ತ್ರಗಳ ಬಳಕೆಯಿಂದಾಗಿ ಕರ್ತವ್ಯನಿರತ ಅರಣ್ಯ ಇಲಾಖೆ ಸಿಬ್ಬಂದಿ ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

 

ನಿಗದಿತ ಗಡುವಿನೊಳಗೆ ನಾಗರಿಕರು ತಾವಾಗಿಯೇ ಮುಂದೆ ಬಂದು ಅಕ್ರಮ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿದರೆ ಅವರ ವಿರುದ್ಧ ಯಾವುದೇ ಕಾನೂನು ಕ್ರಮ ಅಥವಾ ಪ್ರಕರಣ ದಾಖಲಿಸುವುದಿಲ್ಲ. ಆದರೆ, ಗಡುವು ಮೀರಿದ ನಂತರವೂ ಅಕ್ರಮವಾಗಿ ಶಸ್ತ್ರಾಸ್ತ್ರ ಇಟ್ಟುಕೊಂಡಿರುವುದು ಕಂಡುಬಂದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ತಮ್ಮ ಜೀವ ಹಾಗೂ ಬೆಳೆ-ಪ್ರಾಣಿಗಳ ರಕ್ಷಣೆಗಾಗಿ ಬಂದೂಕಿನ ಅಗತ್ಯವಿರುವವರು ಕಾನೂನುಬದ್ಧವಾಗಿ ಕಡ್ಡಾಯವಾಗಿ ಸರ್ಕಾರದ ಪರವಾನಗಿ (ಲೈಸೆನ್ಸ್) ಪಡೆಯಬೇಕು ಎಂದು ಅವರು ಸಲಹೆ ನೀಡಿದ್ದಾರೆ.

Join WhatsApp

Join Now

Join Telegram

Join Now